AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರ್ ಘರ್ ತಿರಂಗ ಯಾತ್ರೆ’ಗೆ ಇಂದು ಗೃಹ ಸಚಿವ ಅಮಿತ್ ಶಾ ಚಾಲನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಜುಲೈನಲ್ಲಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದ 112ನೇ ಆವೃತ್ತಿಯಲ್ಲಿ ಹರ್ ಘರ್ ತಿರಂಗ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲು ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈಗಾಗಲೇ ಹರ್ ಘರ್ ತಿರಂಗ ಅಭಿಯಾನ ಆರಂಭವಾಗಿದೆ.

'ಹರ್ ಘರ್ ತಿರಂಗ ಯಾತ್ರೆ'ಗೆ ಇಂದು ಗೃಹ ಸಚಿವ ಅಮಿತ್ ಶಾ ಚಾಲನೆ
ತ್ರಿವರ್ಣ ಧ್ವಜ
ಸುಷ್ಮಾ ಚಕ್ರೆ
|

Updated on: Aug 13, 2024 | 8:02 AM

Share

ನವದೆಹಲಿ: ಹರ್ ಘರ್ ತಿರಂಗ ಅಭಿಯಾನ ಈಗಾಗಲೇ ಶುರುವಾಗಿದೆ. ಆಗಸ್ಟ್ 11ರಿಂದ ಆರಂಭವಾಗಿರುವ ಈ ಅಭಿಯಾನದ ಭಾಗವಾಗಿ ಬಿಜೆಪಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗ ಯಾತ್ರೆ ನಡೆಸುತ್ತಿದೆ. ಹಾಗೇ, ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಯುದ್ಧ ಸ್ಮಾರಕಗಳಿಗೆ ಪುಷ್ಪ ನಮನ ಸಲ್ಲಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್​ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹರ್ ಘರ್ ತಿರಂಗ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಆಯೋಜಿಸಿರುವ ಈ ಕಾರ್ಯಕ್ರಮವು ಭಾರತದ ಧ್ವಜದ ಪ್ರದರ್ಶನದ ಮೂಲಕ ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಅಹಮದಾಬಾದ್‌ನ ವಿರಾಟ್‌ನಗರ ಪ್ರದೇಶದಲ್ಲಿ ಇಂದು ಸಂಜೆ 4.30ರಿಂದ ಈ ಯಾತ್ರೆ ಪ್ರಾರಂಭವಾಗಲಿದೆ. ಆಗಸ್ಟ್ 14ರಂದು ವಿಭಜನೆಯ ಸ್ಮರಣಾರ್ಥ ದಿನವನ್ನು ಎಲ್ಲಾ ಜಿಲ್ಲೆಗಳಲ್ಲಿ ಮೌನ ಮೆರವಣಿಗೆಯೊಂದಿಗೆ ಆಚರಿಸಲಾಗುವುದು.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೂ ಮೊದಲು ಬಿಜೆಪಿಯಿಂದ ಭಾರತದಾದ್ಯಂತ ‘ಹರ್ ಘರ್ ತಿರಂಗ’ ಅಭಿಯಾನ

ದೇಶಭಕ್ತಿ ಮತ್ತು ರಾಷ್ಟ್ರೀಯ ಗುರುತಿನ ಪ್ರಜ್ಞೆಯನ್ನು ಬಲಪಡಿಸುವ ಮೂಲಕ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಉತ್ತೇಜಿಸುವ ವಿಶಾಲ ಅಭಿಯಾನದ ಉಪಕ್ರಮದ ಭಾಗವಾಗಿರುವ ಅಭಿಯಾನವನ್ನು ಅಮಿತ್ ಶಾ ಇಂದು ಉದ್ಘಾಟಿಸಲಿದ್ದಾರೆ. ‘ಹರ್ ಘರ್ ತಿರಂಗ’ ಅಭಿಯಾನವನ್ನು ಆರಂಭಿಸಿರುವ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆಗಳು ಸಿಗುತ್ತಿವೆ.

ಈ ಅವಧಿಯಲ್ಲಿ ಕೇಂದ್ರ ಸರ್ಕಾರವು ಪ್ರತಿ ಮನೆ, ಅಂಗಡಿ ಮತ್ತು ಕಚೇರಿಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಮೋದಿ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಕ್ಷದ ‘ಹರ್ ಘರ್ ತಿರಂಗ’ ಅಭಿಯಾನದ ಅಂಗವಾಗಿ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಮನ್ ಕಿ ಬಾತ್​ನಲ್ಲಿ ನಾಗರಿಕರಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ‘ಹರ್ ಘರ್ ತಿರಂಗ ಯಾತ್ರೆ’ಗೆ ಮಂಗಳವಾರ ಅಮಿತ್ ಶಾ ಚಾಲನೆ

ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ತಮ್ಮ ಪ್ರೊಫೈಲ್ ಚಿತ್ರಗಳನ್ನು ತ್ರಿವರ್ಣ ಧ್ವಜಕ್ಕೆ ಬದಲಾಯಿಸುವ ಮೂಲಕ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಸಾಮೂಹಿಕ ಆಂದೋಲನವಾಗಿ ಪರಿವರ್ತಿಸಲು ಪ್ರಧಾನಿ ಮೋದಿ ನಾಗರಿಕರನ್ನು ಪ್ರೋತ್ಸಾಹಿಸಿದರು. ಗೃಹ ಸಚಿವ ಶಾ ಸಹ ಈ ಮನವಿಯನ್ನು ಪ್ರತಿಧ್ವನಿಸಿದರು. ತ್ರಿವರ್ಣ ಧ್ವಜದ ಜೊತೆ ಜನರು ಸೆಲ್ಫೀಗಳನ್ನು ಕ್ಲಿಕ್ಕಿಸಿ ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಲು ಮೋದಿ ಮನವಿ ಮಾಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ