AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರ್ ಘರ್ ತಿರಂಗ’ ಅಭಿಯಾನ: ಬೈಕ್ ಜಾಥಾಗೆ ಚಾಲನೆ ನೀಡಿದ ಉಪರಾಷ್ಟ್ರಪತಿ

ಹರ್ ಘರ್ ತಿರಂಗ’ ಅಭಿಯಾನದ ಸವಿನೆನಪಿಗೆ ಸಚಿವರು ಮತ್ತು ಸಂಸದರ ನೇತೃತ್ವದಲ್ಲಿ ಬೈಕ್ ರ್ಯಾಲಿ ನಡೆಸಿದ್ದಾರೆ. ಈ ಜಾಥಾಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಪ್ರಗತಿ ಮೈದಾನದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

'ಹರ್ ಘರ್ ತಿರಂಗ' ಅಭಿಯಾನ: ಬೈಕ್ ಜಾಥಾಗೆ ಚಾಲನೆ ನೀಡಿದ ಉಪರಾಷ್ಟ್ರಪತಿ
ಜಾಥಾಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಪ್ರಗತಿ ಮೈದಾನದಲ್ಲಿ ಚಾಲನೆ
TV9 Web
| Edited By: |

Updated on: Aug 11, 2023 | 10:45 AM

Share

ದೆಹಲಿ, ಆ.11: ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ನಾಲ್ಕು ದಿನ ಬಾಕಿ ಇದೆ. ಇದಕ್ಕೂ ಮೊದಲು ರಾಷ್ಟ್ರ ರಾಜಧಾನಿಯಲ್ಲಿ ಇಂದು (ಆ.11) ಹರ್ ಘರ್ ತಿರಂಗ(Har Ghar Tiranga) ಅಭಿಯಾನದ ಸವಿನೆನಪಿಗೆ ಸಚಿವರು ಮತ್ತು ಸಂಸದರ ನೇತೃತ್ವದಲ್ಲಿ ಬೈಕ್ ರ್ಯಾಲಿ ನಡೆಸಿದ್ದಾರೆ. ಈ ಜಾಥಾಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಪ್ರಗತಿ ಮೈದಾನದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ರ್ಯಾಲಿಯಲ್ಲಿ ಕೇಂದ್ರ ಸಚಿವರಾದ ಜಿ ಕಿಶನ್ ರೆಡ್ಡಿ , ಅನುರಾಗ್ ಠಾಕೂರ್ , ಶೋಭಾ ಕರಂದ್ಲಾಜೆ, ಪಿಯೂಷ್ ಗೋಯಲ್ ಮತ್ತಿತರರು ಭಾಗವಹಿಸಿದ್ದರು.

ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಪ್ರಯುಕ್ತ ಕಳೆದ ಪ್ರಧಾನಿ ಮೋದಿ ಅವರು ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ‘ಹರ್ ಘರ್ ತಿರಂಗ’ ಅಭಿಯಾನವನ್ನು ಪ್ರಾರಂಭಿಸಿದರು. ಇದೀಗ ಇದರ ನೆನಪಿಗಾಗಿ ಸಂಸದರು ಮತ್ತು ಸಚಿವರುಗಳು ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೈಕ್ ರ್ಯಾಲಿಯನ್ನು ನಡೆಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಮತ್ತೆ ಚಾಲನೆ ನೀಡಲಾಗಿದೆ.

ಈ ರ್ಯಾಲಿಯಲ್ಲಿ ಸಾರ್ವಜನಿಕರು ಕೂಡ ಭಾಗವಹಿಸಿದ್ದು, ದೇಶದ್ಯಾಂತ ಹರ್ ಘರ್ ತಿರಂಗ ಅಭಿಯಾನ ನಡೆಸಲು ಈ ಬೈಕ್ ರ್ಯಾಲಿ ಸ್ಪೂರ್ತಿಯಾಗಲಿದೆ ಎಂದು ಹೇಳಿದ್ದಾರೆ. ಪ್ರಗತಿ ಮೈದಾನದಲ್ಲಿ ಆರಂಭವಾದ ಬೈಕ್ ರ‍್ಯಾಲಿ ಇಂಡಿಯಾ ಗೇಟ್ ವೃತ್ತ ತಲುಪಿ ಅಲ್ಲಿಂದ ಇಂಡಿಯಾ ಗೇಟ್ ಕಾಂಪ್ಲೆಕ್ಸ್ ವೃತ್ತಕ್ಕೆ ತೆರಳಿ ಬಳಿಕ ಕರ್ತವ್ಯ ಪಥಕ್ಕೆ ಬಂದು, ಮೇಜರ್ ಧ್ಯಾನ್ ಚಂದ್ ಸ್ಟೇಡಿಯಂನಲ್ಲಿ ರ್ಯಾಲಿ ಕೊನೆಗೊಂಡಿದೆ.

ಇದನ್ನೂ ಓದಿ:ಮಕ್ಕಳಿಗೆ ಧ್ವಜ ವಿತರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ ತಾಯಿ

ಆಗಸ್ಟ್ 15 ಮತ್ತು ಜನವರಿ 26 ರಂದು ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. ಇದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಈ ವರ್ಷ ಆಗಸ್ಟ್ 15 ವಿಶೇಷವಾಗಿದೆ ಏಕೆಂದರೆ ಇದು ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಮುಕ್ತಾಯವನ್ನು ಸೂಚಿಸುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರು, ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಸಮಾರೋಪವನ್ನು ಗುರುತಿಸಲು ಜನರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಬೇಕು ಎಂದು ಹೇಳಿದರು. ಆಗಸ್ಟ್ 15ರಂದು ದೇಶದ ನಾಗರಿಕರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಬೇಕು. ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಸಮಾರೋಪ ಕಾರ್ಯಕ್ರಮ ಇದಾಗಿದ್ದು, ಎಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ