ಆಗಸ್ಟ್ 13-15ರವರೆಗೆ ಪ್ರತಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ದೇಶದ ಜನರಿಗೆ ಮೋದಿ ಕರೆ

ಈ ವರ್ಷ ನಾವು ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಿಸುತ್ತಿದ್ದೇವೆ. ಹರ್ ಘರ್ ತಿರಂಗಾ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13ರಿಂದ 15ರವರೆಗೆ ನಿಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ...

ಆಗಸ್ಟ್  13-15ರವರೆಗೆ ಪ್ರತಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ದೇಶದ ಜನರಿಗೆ ಮೋದಿ ಕರೆ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 22, 2022 | 12:59 PM

ದೆಹಲಿ: ಆಗಸ್ಟ್ 13-15ರವರೆಗೆ ಪ್ರತಿ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಅಥವಾ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವ ಮೂಲಕ ಹರ್ ಘರ್ ತಿರಂಗಾ (Har Ghar Tiranga) ಅಭಿಯಾನಕ್ಕೆ ಕೈಜೋಡಿಸಿ ಎಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi)ಶುಕ್ರವಾರ ಕರೆ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಮೋದಿ, 1947 ಜುಲೈ 22ಕ್ಕೆ ರಾಷ್ಟ್ರಧ್ವಜವನ್ನು ಅಳವಡಿಸಿಕೊಳ್ಳಲಾಯಿತು ಎಂದಿದ್ದಾರೆ. ವಸಾಹತುಶಾಹಿ ಆಡಳಿತ ವಿರುದ್ಧ ನಾವು ಹೋರಾಡುತ್ತಿದಾಗ ಸ್ವತಂತ್ರ ಭಾರತಕ್ಕೊಂದು ಧ್ವಜ ಬೇಕು ಎಂದು ಕನಸು ಕಂಡು ಅದಕ್ಕಾಗಿ ಪ್ರಯತ್ನಿಸಿದ, ಆ ಧೈರ್ಯವನ್ನು ನಾವು ಇಂದು ನೆನಸಿಕೊಳ್ಳುತ್ತಿದ್ದೇವೆ. ನಾವು ಅವರು ಕಂಡ ಕನಸಿನ ಭಾರತವನ್ನು ಸಾಕಾರಗೊಳಿಸಲು ಬದ್ಧರಾಗಿದ್ದೇವೆ ಎಂದು ಮೋದಿ ಹೇಳಿದ್ದಾರೆ. ಈ ವರ್ಷ ನಾವು ಆಜಾದಿ ಕಾ ಅಮೃತ್ ಮಹೋತ್ಸವ್ (Azadi Ka Amrit Mahotsav ) ಆಚರಿಸುತ್ತಿದ್ದೇವೆ. ಹರ್ ಘರ್ ತಿರಂಗಾ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13ರಿಂದ 15ರವರೆಗೆ ನಿಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ಅಥವಾ ಪ್ರದರ್ಶಿಸಿ. ಇದು ನಮ್ಮ ರಾಷ್ಟ್ರಧ್ವಜದೊಂದಿಗೆ ಇರುವ ಸಂಬಂಧವನ್ನು ಗಟ್ಟಿಗೊಳಿಸಿತ್ತದೆ ಎಂದು ಟ್ವೀಟ್​​ನಲ್ಲಿ ಮೋದಿ ಹೇಳಿದ್ದಾರೆ.

ರಾಷ್ಟ್ರಧ್ವಜವನ್ನು ಅಳವಡಿಸುವುದರ ಬಗ್ಗೆ ಅಧಿಕೃತ ಸಂವಾದ ನಡೆದಿರುವ ಮಾಹಿತಿಯನ್ನೂ ಮೋದಿ ಉಲ್ಲೇಖಿಸಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಮೊದಲ ಬಾರಿ ತ್ರಿವರ್ಣ ಧ್ವಜ ಹಾರಿಸಿರುವ ಫೋಟೊವನ್ನು ಮೋದಿ ಟ್ವೀಟ್ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ದಿನದ 75ನೇ ವರ್ಷದ ಆಚರಣೆಯಾದ ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದೆ.

ಹರ್ ಘರ್ ತಿರಂಗಾ ಅಭಿಯಾನದ ಪ್ರಚಾರಕ್ಕಾಗಿ ಸರ್ಕಾರ https://harghartiranga.com/ ಎಂಬ ವೆಬ್ ಸೈಟ್ ನ್ನು ಕೂಡಾ ಆರಂಭಿಸಿದೆ. ಈ ವೆಬ್ ಸೈಟ್ ಮೂಲಕ ಭಾರತೀಯರು ತಮ್ಮ ಮನೆಯಲ್ಲಿ ಧ್ವಜ ಹಾರಿಸಬಹುದು. ಇಲ್ಲಿ ವರ್ಚುವಲ್ ಆಗಿ ಪಿನ್ ಎ ಫ್ಲಾಗ್ ಮಾಡಬಹುದು ಮತ್ತು ಸೆಲ್ಫಿ ವಿತ್ ಫ್ಲಾಗ್ ಫೋಸ್ಟ್ ಮಾಡಬಹುದು.

Published On - 12:44 pm, Fri, 22 July 22

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ