ಉತ್ತರಾಖಂಡ್​​ ಬಿಜೆಪಿ ಸಚಿವನನ್ನು ವಜಾಗೊಳಿಸಿ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಮಿ

ಉತ್ತರಾಖಂಡ್​​ನಲ್ಲಿ ಫೆ.14ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಹರಕ್​ ಸಿಂಗ್​ ಪದೇಪದೆ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮುಖ್ಯಮಂತ್ರಿ ಪುಷ್ಕರ್​ ಧಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಉತ್ತರಾಖಂಡ್​​ ಬಿಜೆಪಿ ಸಚಿವನನ್ನು ವಜಾಗೊಳಿಸಿ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಮಿ
ಉಚ್ಚಾಟಿತ ಸಚಿವ ಹರಕ್​ ಸಿಂಗ್​ ರಾವತ್​
Follow us
TV9 Web
| Updated By: Lakshmi Hegde

Updated on:Jan 17, 2022 | 9:21 AM

ಉತ್ತರಾಖಂಡ್​ ಬಿಜೆಪಿ ಸರ್ಕಾರದ ಅರಣ್ಯ ಸಚಿವ ಹರಕ್​ ಸಿಂಗ್​ ರಾವತ್​​ರನ್ನು ಅವರ ಹುದ್ದೆಯಿಂದ ವಜಾಗೊಳಿಸಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲ, ಅವರನ್ನು ಬಿಜೆಪಿ ಪಕ್ಷದಿಂದಲೇ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ ಎಂದೂ ಅಲ್ಲಿನ ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. ಹರಕ್​ ಸಿಂಗ್​ ಅವರು ಬಿಜೆಪಿಯಲ್ಲಿದ್ದುಕೊಂಡೇ ಕಾಂಗ್ರೆಸ್​ ನಾಯಕರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇಂಥ ಹಲವು ಪಕ್ಷ ವಿರೋಧಿ ನಡವಳಿಕೆ ತೋರಿದ್ದಕ್ಕಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದಾಗಿ ಹೇಳಲಾಗಿದೆ.  

ಉತ್ತರಾಖಂಡ್​​ನಲ್ಲಿ ಫೆ.14ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಹರಕ್​ ಸಿಂಗ್​ ಪದೇಪದೆ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮುಖ್ಯಮಂತ್ರಿ ಪುಷ್ಕರ್​ ಧಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ಹರಕ್​ ಸಿಂಗ್ ವಜಾಗೊಂಡಿದ್ದಾರೆ.  ಹರಕ್​ ಸಿಂಗ್ ಇಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್​ ನಾಯಕ ಹರೀಶ್​ ರಾವತ್​ ಮತ್ತು ಇತರ ನಾಯಕರ ಸಮ್ಮುಖದಲ್ಲಿ  ಕಾಂಗ್ರೆಸ್​ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಹರಕ್​ ಸಿಂಗ್​ ಜತೆ ಬಿಜೆಪಿಯ ಇನ್ನಿಬ್ಬರು ಶಾಸಕರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದೂ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಹರಕ್​ ಸಿಂಗ್​ ಕಾಂಗ್ರೆಸ್​ನಲ್ಲಿ ಇದ್ದವರೇ ಆಗಿತ್ತು. 2016ರಲ್ಲಿ ಪಕ್ಷದ ವಿರುದ್ಧ ಅಸಮಾಧಾನಗೊಂಡು ಒಟ್ಟು 10 ಶಾಸಕರು ಬಿಜೆಪಿ ಸೇರಿದ್ದರು. ಅವರಲ್ಲಿ ಈ ಹರಕ್​ ಸಿಂಗ್ ಕೂಡ ಒಬ್ಬರು.

ಉತ್ತರಾಖಂಡ್​ ವಿಧಾನಸಭೆ ಚುನಾವಣೆ ಫೆಬ್ರವರಿ 14ರಂದು ನಡೆಯಲಿದೆ. 70 ವಿಧಾನಸಭಾ ಕ್ಷೇತ್ರಗಳಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮತ ಎಣಿಕೆ ಮಾರ್ಚ್​ 10ಕ್ಕೆ ನಡೆಯಲಿದೆ.  2017ರಲ್ಲಿ ಬಿಜೆಪಿ ಒಟ್ಟು 57 ಕ್ಷೇತ್ರಗಳನ್ನು ಗೆದ್ದು, ಅಧಿಕಾರ ಗದ್ದುಗೆ ಏರಿತ್ತು. ಈ ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್​ ಮತ್ತು ಅರವಿಂದ್ ಕೇಜ್ರಿವಾಲ್​ನ ಆಮ್​ ಆದ್ಮಿ ಪಕ್ಷದ ನಡುವೆ ನೇರ ಸ್ಪರ್ಧೆಯಿದೆ.

ಇದನ್ನೂ ಓದಿ: ನೈಟ್​ ಕರ್ಫ್ಯೂ ಇದ್ರೂ ನಡೀತಿತ್ತು ಸೀರಿಯಲ್​ ಶೂಟಿಂಗ್​; ಸ್ಥಳಕ್ಕೆ ಬಂದ ಪೊಲೀಸರು ಮಾಡಿದ್ದೇನು?

Published On - 9:21 am, Mon, 17 January 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ