AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಜೆಎನ್​​ಯುವಿನಿಂದ ಪ್ರಾಧ್ಯಾಪಕ ಅಂಗೋಮ್ಚಾ ಬಿಮೋಲ್ ಅಕೊಯಿಜಮ್ ವಜಾ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕ ಹಾಗೂ ಕಾಂಗ್ರೆಸ್ ಸಂಸದ ಅಂಗೋಮ್ಚಾ ಬಿಮೋಲ್ ಅಕೊಯಿಜಮ್ ಅವರನ್ನು ವಿಶ್ವವಿದ್ಯಾಲಯದ ಸೇವೆಯಿಂದ ತಕ್ಷಣವೇ ವಜಾಗೊಳಿಸಲಾಗಿದೆ. ಲೈಂಗಿಕ ಅನುಕೂಲಗಳಿಗೆ ಪ್ರತಿಯಾಗಿ ಹೆಚ್ಚಿನ ಅಂಕಗಳನ್ನು ನೀಡುವ ಬಗ್ಗೆ ಪ್ರಸ್ತಾಪಿಸಿದ್ದರು. ಅಲ್ಲದೆ, ತರಗತಿಗಳಲ್ಲಿಯೂ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರಾಧ್ಯಾಪಕನ ವಿರುದ್ಧ ದೂರಲಾಗಿತ್ತು.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಜೆಎನ್​​ಯುವಿನಿಂದ ಪ್ರಾಧ್ಯಾಪಕ ಅಂಗೋಮ್ಚಾ ಬಿಮೋಲ್ ಅಕೊಯಿಜಮ್ ವಜಾ
ಜೆಎನ್​​ಯುವಿನಿಂದ ಪ್ರಾಧ್ಯಾಪಕ ಅಂಗೋಮ್ಚಾ ಬಿಮೋಲ್ ಅಕೊಯಿಜಮ್ ವಜಾ
ಪ್ರಸನ್ನ ಹೆಗಡೆ
|

Updated on:Oct 09, 2026 | 3:51 PM

Share

ನವದೆಹಲಿ, ಅಕ್ಟೋಬರ್​​ 09: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದ್ದ ಹಿನ್ನೆಲೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪ್ರಾಧ್ಯಾಪಕ ಅಂಗೋಮ್ಚಾ ಬಿಮೋಲ್ ಅಕೊಯಿಜಮ್​​ರನ್ನು ವಜಾಗೊಳಿಸಲಾಗಿದೆ. ಪ್ರಾಧ್ಯಾಪಕನ ವಿರುದ್ಧ ಸುಮಾರು 10 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಲೈಂಗಿಕ ಅರ್ಥ ಬರುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಲೈಂಗಿಕ ಅನುಕೂಲಗಳಿಗೆ ಪ್ರತಿಯಾಗಿ ಹೆಚ್ಚಿನ ಅಂಕಗಳನ್ನು ನೀಡುವ ಬಗ್ಗೆ ಪ್ರಸ್ತಾಪಿಸಿದ್ದರು. ಅಲ್ಲದೆ, ತರಗತಿಗಳಲ್ಲಿಯೂ ಅನುಚಿತವಾಗಿ ವರ್ತಿಸಿದ್ದಾರೆ. ಜೆಎನ್‌ಯು ಆವರಣದಲ್ಲಿರುವ ಅವರ ನಿವಾಸದಲ್ಲಿ ನಡೆದ ಸಂವಹನಗಳ ಸಂದರ್ಭದಲ್ಲೂ ಅನುಚಿತ ವರ್ತನೆ ತೋರಿದ್ದಾರೆ ಎಂದು ಕೆಲವು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಆ ಬೆನ್ನಲ್ಲೆ ಅಂಗೋಮ್ಚಾ ಬಿಮೋಲ್ ಅಕೊಯಿಜಮ್ ವಿರುದ್ಧ ಜೆಎನ್‌ಯು ಕಠಿಣ ಕ್ರಮ ಕೈಗೊಂಡಿದೆ.

ಜೆಎನ್‌ಯು ಆದೇಶದಲ್ಲಿ ಏನಿದೆ?

ಪ್ರಾಧ್ಯಾಪಕ ಅಂಗೋಮ್ಚಾ ಬಿಮೋಲ್ ಅಕೊಯಿಜಮ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳ ಹಿನ್ನೆಲೆಯಲ್ಲಿ ಆಂತರಿಕ ಸಮಿತಿಯು (IC) ವಿಚಾರಣೆ ನಡೆಸಿದೆ. ವಿಚಾರಣೆಯ ವರದಿಯಲ್ಲಿನ ಅಂಶಗಳ ಆಧಾರದ ಮೇಲೆ, ಪ್ರಾಧ್ಯಾಪಕರಿಗೆ ಕಠಿಣ ಶಿಸ್ತುಕ್ರಮದ ಶಿಕ್ಷೆ ವಿಧಿಸುವಂತೆ ಆಂತರಿಕ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ಅಂಗೋಮ್ಚಾ ಬಿಮೋಲ್ ಅಕೊಯಿಜಮ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಶ್ವವಿದ್ಯಾಲಯದ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಜೆಎನ್​​ಯು ಉಪಕುಲಪತಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ತಮ್ಮ ಮನೆ ಸ್ವಚ್ಛಗೊಳಿಸಲು ಮಹಿಳಾ ಕೈದಿಗಳನ್ನು ಕರೆದೊಯ್ದಿದ್ದ ಜೈಲರ್ ಅರೆಸ್ಟ್: 2 ತಿಂಗಳ ಬಳಿಕ ಕೋಟಾದಲ್ಲಿ ಸೆರೆ

ವರದಿಗಳ ಪ್ರಕಾರ 2026ರ ಮೇ ತಿಂಗಳಲ್ಲಿಯೇ ಪ್ರಾಧ್ಯಾಪಕರ ವಿರುದ್ಧ ದೂರುಗಳು ಸಲ್ಲಿಕೆಯಾಗಿದ್ದು, ನಂತರ ಆಂತರಿಕ ದೂರು ಸಮಿತಿ ವಿಚಾರಣೆ ಆರಂಭಿಸಿತ್ತು. ಆ ಬಳಿಕ ಜೆಎನ್‌ಯುನಲ್ಲಿ ಸುಮಾರು 45 ದಿನಗಳ ಸೆಮಿಸ್ಟರ್ ವಿರಾಮವಿತ್ತು. ಜುಲೈನಲ್ಲಿ ತರಗತಿಗಳು ಪುನರಾರಂಭವಾದ ನಂತರ ಈ ವಿಷಯ ಮತ್ತೆ ಮುನ್ನೆಲೆಗೆ ಬಂದಿತ್ತು. ಆಂತರಿಕ ದೂರು ಸಮಿತಿಯ ನಿಯಮಗಳು ನಿಗದಿತ ಕಾಲಮಿತಿಯಲ್ಲಿ ವಿಚಾರಣೆ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಒಳಗೊಂಡಿವೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (UGC) ಅನ್ವಯವಾಗುವ ನಿಯಮಗಳ ಪ್ರಕಾರ, ದೂರು ಸ್ವೀಕರಿಸಿದ 90 ದಿನಗಳೊಳಗೆ ವಿಚಾರಣೆ ಪೂರ್ಣಗೊಳಿಸಬೇಕು. ವಿಚಾರಣೆ ಮುಗಿದ 10 ದಿನಗಳೊಳಗೆ ವರದಿಯನ್ನು ಸಲ್ಲಿಸಬೇಕು. ಹೀಗಿದ್ದರೂ ಹಲವು ತಿಂಗಳುಗಳು ಕಳೆದಿರುವ ಹಿನ್ನೆಲೆಯಲ್ಲಿ ತನಿಖೆಯ ಪ್ರಗತಿಯ ಕುರಿತು ವಿದ್ಯಾರ್ಥಿ ಸಂಘಟನೆಗಳು ಪ್ರಶ್ನೆಗಳನ್ನು ಎತ್ತಿದ್ದವು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ABVP) ಸೆಪ್ಟೆಂಬರ್‌ನಲ್ಲಿ ಜೆಎನ್‌ಯುನಲ್ಲಿ ಪ್ರತಿಭಟನೆ ನಡೆಸಿ, ನಿಷ್ಪಕ್ಷಪಾತ ಹಾಗೂ ಕಾಲಮಿತಿಯೊಳಗಿನ ತನಿಖೆಗೆ ಆಗ್ರಹಿಸಿತ್ತು.

ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಕಾಂಗ್ರೆಸ್​​ ಸಂಸದರೂ ಹೌದು

ಡಾ. ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರು ಭಾರತದ ಮಣಿಪುರದ ಒಬ್ಬ ಪ್ರಮುಖ ಶಿಕ್ಷಣ ತಜ್ಞ, ಚಲನಚಿತ್ರ ನಿರ್ಮಾಪಕ ಮತ್ತು ರಾಜಕಾರಣಿಯಾಗಿದ್ದಾರೆ. ಇವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷದಿಂದ 2024ರ ಲೋಕಸಭಾ ಚುನಾವಣೆಯಲ್ಲಿ ಇನ್ನರ್ ಮಣಿಪುರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:50 pm, Fri, 9 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ