Hardik Patel: ಜೂನ್ 2ರಂದು ಬಿಜೆಪಿಗೆ ಸೇರ್ಪಡೆಯಾಗಲಿರುವ ಹಾರ್ದಿಕ್ ಪಟೇಲ್

ಜೂನ್ 2ರಂದು ಹಾರ್ದಿಕ್ ಪಟೇಲ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಗುಜರಾತ್​ನ ಪಾಟೀದಾರ್ ಸಮುದಾಯದ ಯುವ ನಾಯಕ ಹಾರ್ದಿಕ್, ಈಗಾಗಲೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಹಾರ್ದಿಕ್ ರಾಜೀನಾಮೆ ನೀಡಿದ್ದಾರೆ.

Hardik Patel: ಜೂನ್ 2ರಂದು ಬಿಜೆಪಿಗೆ ಸೇರ್ಪಡೆಯಾಗಲಿರುವ ಹಾರ್ದಿಕ್ ಪಟೇಲ್
ಹಾರ್ದಿಕ್ ಪಟೇಲ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:May 31, 2022 | 12:14 PM

ಗುಜರಾತ್: ಮಾಜಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಜೂನ್ 2 ರಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಲಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಗುಜರಾತ್​ನ ಪಾಟೀದಾರ್ ಸಮುದಾಯದ ಯುವ ನಾಯಕ ಹಾರ್ದಿಕ್, ಈಗಾಗಲೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಹಾರ್ದಿಕ್ ರಾಜೀನಾಮೆ ನೀಡಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆ ಪಾಟೀದಾರ್ ಮತ ಸೆಳೆಯಲು ‌ಬಿಜೆಪಿಗೆ ಅನುಕೂಲವಾಗಲಿದ್ದು, ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆಯಿಂದ ಮತ್ತಷ್ಟು ಬಲ ಬಂದತ್ತಾಗಿದೆ. ಪಟೇಲ್ ಅವರು ಸೋಮವಾರ ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹವನ್ನು ನಿರಾಕರಿಸಿದರು ಮತ್ತು ಜನಪ್ರಿಯ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯ ಕುರಿತು ಆಮ್ ಆದ್ಮಿ ಪಕ್ಷ (ಎಎಪಿ) ವಿರುದ್ಧ ವಾಗ್ದಾಳಿ ನಡೆಸಿದರು. ನಾನು ನಾಳೆ ಬಿಜೆಪಿಗೆ ಸೇರುವುದಿಲ್ಲ. ಅಂತಹದ್ದೇನಾದರೂ ನಡೆದರೆ ನಿಮಗೆ ತಿಳಿಸುತ್ತೇನೆ ಎಂದು ಹಾರ್ದಿಕ್ ಪಟೇಲ್ ಭಾನುವಾರ ಪಿಟಿಐಗೆ ತಿಳಿಸಿದ್ದರು.

ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ಪ್ಯಾರಾಚೂಟರ್‌ ಎಂಬ ದಾಖಲೆ ನಿರ್ಮಿಸಿದ 103 ವರ್ಷದ ಅಜ್ಜಿ

ಪಾಟಿದಾರ್ ಕೋಟಾ ಚಳವಳಿಯ ನಾಯಕ ಇತ್ತೀಚೆಗೆ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಹಾರ್ದಿಕ್ ಪಟೇಲ್ ರಾಜೀನಾಮೆ ಮೊದಲು, ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ  ಪತ್ರವನ್ನು ಬರೆದಿದ್ದು, ಪಕ್ಷವು ದೇಶದಲ್ಲಿನ ಕೆಲವು ಪ್ರಮುಖ ವಿಷಯಗಳ ಬಗ್ಗೆ ತಡೆಹಿಡಿಯವು ಪಾತ್ರವನ್ನು ಮಾತ್ರ ವಹಿಸಿದೆ. ಮತ್ತು ಎಲ್ಲವನ್ನೂ ವಿರೋಧಿಸುವ ಮಟ್ಟಕ್ಕೆ ಇಳಿದಿದೆ ಎಂದು ಹೇಳಿದ್ದಾರೆ.

ಹಾರ್ದಿಕ್ ಪಟೇಲ್ ಅವರು 2015 ರಲ್ಲಿ ಪಾಟಿದಾರ್ ಕೋಟಾ ಸ್ಟಿರ್​ನ್ನು ಮುನ್ನಡೆಸುವ ಮೂಲಕ ಮುನ್ನಲೆಗೆ ಬಂದರು. ಹಾರ್ದಿಕ್ ಅವರು ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂಬ ಸಾರ್ವಜನಿಕ ಮಾತುಗಳ ಹೊರತಾಗಿಯೂ 2019 ರಲ್ಲಿ ಕಾಂಗ್ರೆಸ್ ಸೇರಿಕೊಂಡರು. 2017ರಲ್ಲಿ ಪಾಟೀದಾರರಿಗೆ ಮೀಸಲಾತಿ ನೀಡುವಂತೆ ಪಟೇಲ್​ ನಡೆಸಿದ ಆಂದೋಲನದಿಂದ ಕಾಂಗ್ರೆಸ್ ಲಾಭ ಪಡೆದಿತ್ತು. ಆದರೆ 2019ರಲ್ಲಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ನಂತರ ಪಕ್ಷಕ್ಕೆ ಸಮುದಾಯದ ಬೆಂಬಲ ದುರ್ಬಲಗೊಂಡಿತ್ತು. 2017ರ ಗುಜರಾತ್ ಚುನಾವಣೆಯಲ್ಲಿ ರಾಜ್ಯದ 182 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ ಕೇವಲ ಒಂಬತ್ತು ಸ್ಥಾನಗಳಿಂದ ಹಿನ್ನಡೆ ಅನುಭವಿಸಿತ್ತು. ಎರಡು ದಶಕಗಳಿಗೂ ಹೆಚ್ಚು ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸುವ ಸಾಮರ್ಥ್ಯ ಅವರಲ್ಲಿದೆ ಎಂದು ಆಗ ನಂಬಲಾಗಿತ್ತು. ಆದರೆ ಈಗ ಹಾರ್ದಿಕ್ ರಾಜೀನಾಮೆಯಿಂದ ಕಾಂಗ್ರೆಸ್‌ಗೆ ಸ್ಪರ್ಧೆ ಕಷ್ಟಕರವಾಗಬಹುದು ಎನ್ನಲಾಗುತ್ತಿದೆ.

ಜುಲೈ 2020ರಲ್ಲಿ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ (GPCC) ಕಾರ್ಯಾಧ್ಯಕ್ಷರಾಗಿ ನೇಮಿಸಲಾಗಿತ್ತು. ಹಾರ್ದಿಕ್ ಪಟೇಲ್ ಒಂದು ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಕಟು ಟೀಕಾಕಾರರಾಗಿದ್ದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:37 am, Tue, 31 May 22

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ