ನಾನು ಪಕ್ಷದಲ್ಲೇ ಉಳಿಯುವಂತೆ ನೋಡಿಕೊಳ್ಳಿ: ಕಾಂಗ್ರೆಸ್‌ಗೆ ಹಾರ್ದಿಕ್ ಪಟೇಲ್ ಸಂದೇಶ

ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಹಾರ್ದಿಕ್ ಪಟೇಲ್,ಜನರು ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ. ಜೋ ಬೈಡನ್ ಯುಎಸ್ ಚುನಾವಣೆಯಲ್ಲಿ ಗೆದ್ದಾಗ, ನಾನು ಅವರನ್ನು ಹೊಗಳಿದ್ದೆ. ಇದಕ್ಕೆ ಕಾರಣ ಅವರ ಉಪಾಧ್ಯಕ್ಷರು ಭಾರತೀಯ ಮೂಲದವರು. ಆದರೆ ಇದರರ್ಥ ನಾನು ಬೈಡನ್ ಅವರ ಪಕ್ಷಕ್ಕೆ ಸೇರುತ್ತೇನೆಯೇ?

ನಾನು ಪಕ್ಷದಲ್ಲೇ ಉಳಿಯುವಂತೆ ನೋಡಿಕೊಳ್ಳಿ: ಕಾಂಗ್ರೆಸ್‌ಗೆ ಹಾರ್ದಿಕ್ ಪಟೇಲ್ ಸಂದೇಶ
ಹಾರ್ದಿಕ್ ಪಟೇಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 26, 2022 | 6:06 PM

ಗಾಂಧಿನಗರ: ಗುಜರಾತ್ ಕಾಂಗ್ರೆಸ್  (Gujarat  Congress)  ನಾಯಕರ ಮೇಲೆ ಕಿರುಕುಳದ ಆರೋಪ ಮಾಡಿರುವ ಬೆನ್ನಲ್ಲೇ ರಾಜ್ಯ ಪಕ್ಷದ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ (Hardik Patel) ಅವರು ಕಾಂಗ್ರೆಸ್‌ನಲ್ಲೇ (Congress) ಇರುವುದನ್ನು ಖಚಿತಪಡಿಸಿಕೊಳ್ಳಲು ಹೈಕಮಾಂಡ್‌ಗೆ ಸಲಹೆ ನೀಡಿದ್ದಾರೆ. ಅವರ ಇತ್ತೀಚಿನ ವಾಗ್ದಾಳಿಯಲ್ಲಿ ಪಟೇಲ್ ಅವರು ನಾನು ಕಾಂಗ್ರೆಸ್ ತೊರೆಯುವ ಮೂಲಕ ನೈತಿಕತೆಯನ್ನು ಮುರಿಯಲು ಬಯಸುವ ಜನರಿದ್ದಾರೆ ಎಂದು ಹೇಳಿದ್ದಾರೆ. “ನಾನು ಪ್ರಸ್ತುತ ಕಾಂಗ್ರೆಸ್‌ನಲ್ಲಿದ್ದೇನೆ. ನಾನು ಮತ್ತೆ ಕಾಂಗ್ರೆಸ್‌ನಲ್ಲಿ ಮುಂದುವರಿಯಲು ಕೇಂದ್ರ ನಾಯಕರು ಒಂದು ಮಾರ್ಗವನ್ನು ಕಂಡುಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಹಾರ್ದಿಕ್ ಕಾಂಗ್ರೆಸ್ ತೊರೆಯಬೇಕು ಮತ್ತು ನೈತಿಕತೆಯನ್ನು ಮುರಿಯಬೇಕೆಂದು ಕೆಲವರು ಬಯಸುತ್ತಾರೆ” ಎಂದು ಹಾರ್ದಿಕ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದ ಕ್ಲಿಪ್ಪಿಂಗ್ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ. ಮೀಸಲಾತಿಗಾಗಿ ಪಾಟಿದಾರ್ ಸಮುದಾಯದ ಆಂದೋಲನದ ಮುಖವಾಗಿದ್ದ ಯುವ ನಾಯಕ ಕಾಂಗ್ರೆಸ್ ಸೇರಿದ ಸ್ವಲ್ಪ ಸಮಯದ ನಂತರ ಪಕ್ಷದ ನಾಯಕತ್ವವನ್ನು ಚಿಂತೆಗೀಡು  ಮಾಡುವ ಸೂಚನೆಗಳನ್ನು ರವಾನಿಸಿದ್ದಾರೆ.

ಬಿಜೆಪಿಯ ಭದ್ರಕೋಟೆ ಮತ್ತು ಪ್ರಧಾನಿ ನರೇಂದ್ರ ಮೋದಿಯ ತವರು ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳು ಬಾಕಿ ಇರುವಾಗ ಪಟೇಲ್ ಅವರ ಅಸಮಾಧಾನವು ಕಾಂಗ್ರೆಸ್‌ಗೆ ತೊಂದರೆ ಉಂಟುಮಾಡಬಹುದು. ಈ ತಿಂಗಳ ಆರಂಭದಲ್ಲಿ 2017 ರ ರಾಜ್ಯ ಚುನಾವಣೆಗೆ ಸ್ವಲ್ಪ ಮೊದಲು ರಾಹುಲ್ ಗಾಂಧಿಯಿಂದ ಪಕ್ಷಕ್ಕೆ ಸೇರ್ಪಡೆಗೊಂಡ ಪಟೇಲ್, ನಾಯಕತ್ವವು ಅವರನ್ನು ಬದಿಗೆ ಸರಿಸಿದೆ ಎಂದು ಆರೋಪಿಸಿದರು.

ರಾಜ್ಯ ಕಾಂಗ್ರೆಸ್ ಘಟಕದ ಯಾವುದೇ ಸಭೆಗೆ ತಮ್ಮನ್ನು ಆಹ್ವಾನಿಸುವುದಿಲ್ಲ ಮತ್ತು ನಿರ್ಧಾರಗಳ ಮೊದಲು ಅವರ ಜತೆ ಎಂದಿಗೂ ಸಮಾಲೋಚಿಸುವುದಿಲ್ಲ ಎಂದು ಅವರು ಹೇಳಿದರು. “ಪಕ್ಷದಲ್ಲಿ ನನ್ನ ಸ್ಥಾನವು ಸಂತಾನಹರಣ ಶಸ್ತ್ರಚಿಕಿತ್ಸೆ ಒಳಗಾಗಿರುವ ಹೊಸ ವರನಂತೆ ಇದೆ” ಎಂದು ಅವರು ಹೇಳಿದ್ದರು. ಪಾಟಿದಾರ್ ಆಂದೋಲನವು 2015 ರ ಸ್ಥಳೀಯ ಸಂಸ್ಥೆಗಳಿಗೆ ಮತ್ತು 2017 ರ ಗುಜರಾತ್ ಚುನಾವಣೆಯಲ್ಲಿ 182 ಸದಸ್ಯರ ವಿಧಾನಸಭೆಯಲ್ಲಿ 77 ಸ್ಥಾನಗಳನ್ನು ಗೆದ್ದಾಗ ಕಾಂಗ್ರೆಸ್ ಗಮನಾರ್ಹ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿತು ಎಂದು ಪಟೇಲ್ ಹೇಳಿದರು.

“ಆದರೆ ಅದರ ನಂತರ ಏನಾಯಿತು? 2017 ರ ನಂತರ ಹಾರ್ದಿಕ್ ಪಟೇಲ್ ಅವರನ್ನು ಪಕ್ಷವು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದು ಕಾಂಗ್ರೆಸ್‌ನ ಅನೇಕರು ಭಾವಿಸುತ್ತಾರೆ. ಇವತ್ತು ನನಗೆ ಪ್ರಾಮುಖ್ಯತೆ ಕೊಟ್ಟರೆ ಐದು ಅಥವಾ 10 ವರ್ಷಗಳ ನಂತರ ನಾನು ಅವರ ದಾರಿಗೆ ಬರುತ್ತೇನೆ ಎಂದು ಪಕ್ಷದ ಕೆಲವರು ಭಾವಿಸಿದ್ದಿರಬಹುದು ಎಂದು ಅವರು ಹೇಳಿದರು. ಒಂದು ವಾರದ ನಂತರ ಅವರು ಕಾಂಗ್ರೆಸ್‌ನ ಮುಖ್ಯ ಪ್ರತಿಸ್ಪರ್ಧಿ ಮತ್ತು ಗುಜರಾತ್‌ನ ಆಡಳಿತ ಪಕ್ಷ ಬಿಜೆಪಿಯನ್ನು ಹೊಗಳುತ್ತಿರುವಂತೆ ಕಂಡುಬರುವ ಟೀಕೆಗಳ ಮೂಲಕ ರಾಜಕೀಯ ವಲಯಗಳಲ್ಲಿ ಸಂಚಲನ ಮೂಡಿಸಿದರು.

ರಾಜಕೀಯವಾಗಿ ಬಿಜೆಪಿ ತೆಗೆದುಕೊಂಡಿರುವ ಇತ್ತೀಚಿನ ನಿರ್ಧಾರಗಳು, ಅಂತಹ ಕ್ರಮಗಳನ್ನು ತೆಗೆದುಕೊಳ್ಳುವ ಶಕ್ತಿ ಅವರಿಗೆ ಇದೆ ಎಂಬುದನ್ನು ನಾವು ಒಪ್ಪಿಕೊಳ್ಳಬೇಕು. ಅವರ ಪಕ್ಷದ ಪರ ಅಥವಾ ಅವರನ್ನು ಹೊಗಳದೆ, ನಾವು ಕನಿಷ್ಠ ಸತ್ಯವನ್ನು ಒಪ್ಪಿಕೊಳ್ಳಬಹುದು ಎಂದು ನಾನು ನಂಬುತ್ತೇನೆ. ಗುಜರಾತಿನಲ್ಲಿ ಕಾಂಗ್ರೆಸ್ ಬಲಿಷ್ಠವಾಗಲು ಬಯಸಿದರೆ, ನಾವು ನಮ್ಮ ನಿರ್ಧಾರ ತೆಗೆದುಕೊಳ್ಳುವ ಕೌಶಲ್ಯ ಮತ್ತು ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ಸುಧಾರಿಸಿಕೊಳ್ಳಬೇಕು ಎಂದು ಎನ್‌ಡಿಟಿವಿಗೆ ಜತೆ ಮಾತನಾಡಿದ ಪಟೇಲ್ ಹೇಳಿದ್ದಾರೆ.

ಆದರೆ, ಬಿಜೆಪಿ ಸೇರುವ ಯೋಚನೆ ಇಲ್ಲ ಎಂದು ಅವರು ಖಡಾಖಂಡಿತವಾಗಿ ಹೇಳಿದ್ದಾರೆ. ಇಲ್ಲ, ಯಾವುದೇ ಮಾತುಕತೆ ನಡೆದಿಲ್ಲ , ನಾನು ಬಿಜೆಪಿ ಬಗ್ಗೆ ಯೋಚಿಸುತ್ತಿಲ್ಲ ಮತ್ತು ನಾನು ಬಿಜೆಪಿಯೊಂದಿಗೆ ಮಾತನಾಡುವುದಿಲ್ಲ ಎಂದು ಅವರು ಹೇಳಿದರು. ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಪಟೇಲ್ “ಜನರು ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ. ಜೋ ಬೈಡನ್ ಯುಎಸ್ ಚುನಾವಣೆಯಲ್ಲಿ ಗೆದ್ದಾಗ, ನಾನು ಅವರನ್ನು ಹೊಗಳಿದ್ದೆ. ಇದಕ್ಕೆ ಕಾರಣ ಅವರ ಉಪಾಧ್ಯಕ್ಷರು ಭಾರತೀಯ ಮೂಲದವರು. ಆದರೆ ಇದರರ್ಥ ನಾನು ಬೈಡನ್ ಅವರ ಪಕ್ಷಕ್ಕೆ ಸೇರುತ್ತೇನೆಯೇ? ಎಂದು ಕೇಳಿದ್ದಾರೆ.

ಇದನ್ನೂ ಓದಿ: ಕರಾಚಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ಫೋಟ; 4 ಮಂದಿ ಸಾವು, ಹಲವರಿಗೆ ಗಾಯ

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ