
ಹರ್ದೋಯ್, ಜೂನ್ 19: ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರಿಯಕರನ ಜತೆಗೆ ಸಿಕ್ಕಿಬಿದ್ದ ಪತ್ನಿಯ ಮೂಗನ್ನು ಪತಿ ಕಚ್ಚಿ ಕತ್ತರಿಸಿ ಹಾಕಿರುವ ಘಟನೆ ಉತ್ತರ ಪ್ರದೇಶದ ಹರ್ದೋಯ್ನಲ್ಲಿ ನಡೆದಿದೆ.
ಪತ್ನಿ ಆಸ್ಪತ್ರೆಗೆ ದಾಖಲು, ಪತಿ ಬಂಧನ: ಪೊಲೀಸರು
ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಅದೇ ಗ್ರಾಮದ ನಿವಾಸಿಯಾಗಿರುವ ತನ್ನ ಪ್ರಿಯಕರನನ್ನು ಭೇಟಿಯಾಗಲು ಹೋದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ಪತಿಯನ್ನು ರಾಮ್ ಖಿಲಾವನ್ ಎಂದು ಗುರುತಿಸಲಾಗಿದೆ. ಆತ ತನ್ನ ಪತ್ನಿಯನ್ನು ಹಿಂಬಾಲಿಸಿ ಪ್ರಿಯಕರನ ಮನೆಗೆ ಹೋಗಿದ್ದಾನೆ ಎನ್ನಲಾಗಿದೆ. ಮಹಿಳೆಯ ಪ್ರಿಯಕರನ ಮನೆಯಲ್ಲಿ ದಂಪತಿ ನಡುವೆ ಭಾರಿ ಜಗಳ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ, ಆ ವ್ಯಕ್ತಿ ತನ್ನ ಪತ್ನಿಯ ಮೂಗನ್ನು ಕಚ್ಚಿದ್ದಾನೆ ಎಂದು ಅವರು ಹೇಳಿದರು.
ಮಹಿಳೆ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ, ಪ್ರಿಯಕರನ ಕುಟುಂಬ ಸದಸ್ಯರು ಮತ್ತು ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಓಡಿ ಬಂದು ಮಹಿಳೆ ಸ್ಥಿತಿಯನ್ನು ನೋಡಿ ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದರು.
ಹರಿಯವಾನ್ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಆಕೆಯನ್ನು ಹಾರ್ದೋಯ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು.
ಮತ್ತಷ್ಟು ಓದಿ: ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿಯ ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ
ಆದರೆ ಮಹಿಳೆಗೆ ತೀವ್ರವಾದ ಗಾಯಗಳಾಗಿದ್ದನ್ನು ನೋಡಿ, ಆಸ್ಪತ್ರೆಯ ವೈದ್ಯರು ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ಲಕ್ನೋಗೆ ಕರೆದೊಯ್ಯಲು ಸೂಚಿಸಿದರು.
ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಕರಣವನ್ನು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಎಸ್‌ಪಿ ನರೇಂದ್ರ ಕುಮಾರ್ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ