Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿದ್ವಾರ ದ್ವೇಷ ಭಾಷಣ ಪ್ರಕರಣ: ದಾಸ್ನಾ ದೇವಸ್ಥಾನದ ಮುಖ್ಯ ಅರ್ಚಕ ಯತಿ ನರಸಿಂಹಾನಂದ್‌ಗೆ ಜಾಮೀನು

ಹರಿದ್ವಾರದಲ್ಲಿ ಧರ್ಮ ಸಂಸದ್ ಆಯೋಜಿಸಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಸುಮಾರು ಒಂದು ತಿಂಗಳ ನಂತರ ಜನವರಿ 15 ರಂದು ನರಸಿಂಹಾನಂದ್ ಅವರನ್ನು ಬಂಧಿಸಲಾಯಿತು.

ಹರಿದ್ವಾರ ದ್ವೇಷ ಭಾಷಣ ಪ್ರಕರಣ: ದಾಸ್ನಾ ದೇವಸ್ಥಾನದ ಮುಖ್ಯ ಅರ್ಚಕ ಯತಿ ನರಸಿಂಹಾನಂದ್‌ಗೆ ಜಾಮೀನು
ಧಾರ್ಮಿಕ ಮುಖಂಡ ಯತಿ ನರಸಿಂಹಾನಂದ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Feb 08, 2022 | 5:24 PM

ದೆಹಲಿ: ವಿವಾದಿತ ಹರಿದ್ವಾರ (Haridwar) ಧರ್ಮ ಸಂಸದ್ ದ್ವೇಷ ಭಾಷಣ (Hate speech) ಪ್ರಕರಣದಲ್ಲಿ ದಾಸ್ನಾ ದೇವಸ್ಥಾನದ ಮುಖ್ಯ ಅರ್ಚಕ ಯತಿ ನರಸಿಂಹಾನಂದ್​​ಗೆ (Yati Narsinghanand) ಹರಿದ್ವಾರ ನ್ಯಾಯಾಲಯ ಜಾಮೀನು ನೀಡಿದೆ. ಹರಿದ್ವಾರದಲ್ಲಿ ಧರ್ಮ ಸಂಸದ್ ಆಯೋಜಿಸಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಸುಮಾರು ಒಂದು ತಿಂಗಳ ನಂತರ ಜನವರಿ 15 ರಂದು ನರಸಿಂಹಾನಂದ್ ಅವರನ್ನು ಬಂಧಿಸಲಾಯಿತು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಭರತ್ ಭೂಷಣ್ ಪಾಂಡೆ ಅವರು ಸೋಮವಾರ ಪ್ರಕರಣದ ವರ್ಚುವಲ್ ವಿಚಾರಣೆಯ ನಂತರ ನರಸಿಂಹಾನಂದ ಅವರಿಗೆ ಜಾಮೀನು ಮಂಜೂರು ಮಾಡಿದರು. ನರಸಿಂಹಾನಂದ ಅವರಿಗೆ ಕೆಲವು ಷರತ್ತುಗಳೊಂದಿಗೆ ಜಾಮೀನು ನೀಡಲಾಗಿದೆ. ಸಾಮಾಜಿಕ ಸೌಹಾರ್ದತೆಗೆ ಭಂಗ ತರುವಂತಹ ಯಾವುದೇ ಭಾಷಣ ಮಾಡಬಾರದು ಎಂದು ನ್ಯಾಯಾಲಯ ಅವರಿಗೆ ಸೂಚಿಸಿದೆ.  ವಿವಿಧ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯವನ್ನು ಸೃಷ್ಟಿಸುವ ಉದ್ದೇಶದಿಂದ ನರಸಿಂಹಾನಂದರು ಯಾವುದೇ ಗುಂಪು ಅಥವಾ ಈವೆಂಟ್‌ನ ಭಾಗವಾಗದಂತೆ ಅದು ನಿರ್ಬಂಧಿಸಿದೆ. ಪ್ರಕರಣದ ತನಿಖಾಧಿಕಾರಿಯ ಸಮನ್ಸ್‌ಗೆ ಅವರು ಪ್ರತಿಕ್ರಿಯಿಸಬೇಕಾಗುತ್ತದೆ. ನರಸಿಂಹಾನಂದ ಅವರು ಪ್ರಕರಣದ ಸಾಕ್ಷಿಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಸಬಾರದು ಅಥವಾ ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶಕ್ಕೆ ಹೋಗಬಾರದು ಎಂದು ಅದು ಹೇಳಿದೆ. ಹರಿದ್ವಾರದಲ್ಲಿ ಡಿಸೆಂಬರ್ 17-19ರವರೆಗೆ ಧರ್ಮ ಸಂಸದ್ ನಡೆದಿತ್ತು. 

ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ಹೆಚ್ಚು ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕೆ ಸಂಬಂಧಿಸಿದಂತೆ ಹರಿದ್ವಾರದಲ್ಲಿ ನರಸಿಂಹಾನಂದ ಸೇರಿದಂತೆ 10ಕ್ಕೂ ಹೆಚ್ಚು ಜನರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ವಿಶೇಷ ತನಿಖಾ ತಂಡ ಪ್ರಕರಣದ ತನಿಖೆ ನಡೆಸುತ್ತಿದೆ.

ಜನವರಿ 13 ರಂದು ವಸೀಮ್ ರಿಜ್ವಿ ಅಕಾ ಜಿತೇಂದ್ರ ನಾರಾಯಣ್ ತ್ಯಾಗಿ ಬಂಧನವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ನರಸಿಂಹಾನಂದ್ ಅವರನ್ನು ಜನವರಿ 15 ರಂದು ಹರಿದ್ವಾರ ಪೊಲೀಸರು ಸರ್ವಾನಂದ ಘಾಟ್‌ನಿಂದ ಬಂಧಿಸಿದ್ದರು. ದ್ವೇಷ ಭಾಷಣದ ಪ್ರಕರಣದಲ್ಲಿ ತ್ಯಾಗಿ ಅವರ ಹೆಸರೂ ಇತ್ತು.  ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ, ದೆಹಲಿ ಪೊಲೀಸರು ಮತ್ತು ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ನಂತರ ತ್ಯಾಗಿ ಮತ್ತು ನರಸಿಂಹಾನಂದ್ ಬಂಧನ ನಡೆದಿದೆ. ಹರಿದ್ವಾರದಲ್ಲಿ ಯತಿ ನರಸಿಂಹಾನಂದ ಅವರು ಆಯೋಜಿಸಿದ್ದ ಮತ್ತು ದೆಹಲಿಯಲ್ಲಿ ಹಿಂದೂ ಯುವ ವಾಹಿನಿಯವರು ನಿರ್ದಿಷ್ಟ ಸಮುದಾಯದವರ ನರಮೇಧಕ್ಕೆ ಕರೆ ನೀಡಿದ್ದಾರೆ ಎಂದು ಹೇಳಲಾದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರ ದ್ವೇಷದ ಭಾಷಣದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಈ ನೋಟಿಸ್ ನೀಡಲಾಗಿದೆ.

ಜನವರಿ ತಿಂಗಳ ಆರಂಭದಲ್ಲಿ ನಿರ್ದಿಷ್ಟ ಸಮುದಾಯದ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ರುಚಿಕಾ ಎಂಬುವವರ ದೂರಿನ ಮೇರೆಗೆ ಯತಿ ನರಸಿಂಹಾನಂದ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿತ್ತು ಜನವರಿ 4 ರಂದು ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ನರಸಿಂಹಾನಂದರು ನಿರ್ದಿಷ್ಟ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅವರು ಆರೋಪಿಸಿದ್ದರು .

ಇದನ್ನೂ ಓದಿ: PM Modi in Parliament: ಕಾಂಗ್ರೆಸ್ ಇಲ್ಲದಿದ್ದರೆ ತುರ್ತು ಪರಿಸ್ಥಿತಿ, ಸಿಖ್ ದಂಗೆಗಳು ಸಂಭವಿಸುತ್ತಿರಲಿಲ್ಲ; ಸಂಸತ್​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

Published On - 4:44 pm, Tue, 8 February 22

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್