AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿದ್ವಾರ ದ್ವೇಷ ಭಾಷಣ ಪ್ರಕರಣದಲ್ಲಿಯೂ ಯತಿ ನರಸಿಂಹಾನಂದ್​​ನ್ನು ಬಂಧಿಸಲಾಗಿದೆ ಎಂದ ಪೊಲೀಸ್

Yati Narsinghanand ನರಸಿಂಹಾನಂದ್ ಅವರು ಕಳೆದ ತಿಂಗಳು ಹರಿದ್ವಾರ "ಧರ್ಮ ಸಂಸದ್" ಅಥವಾ ಧಾರ್ಮಿಕ ಸಭೆಯಲ್ಲಿ ದ್ವೇಷದ ಭಾಷಣಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಎರಡನೇ ವ್ಯಕ್ತಿಯಾಗಿದ್ದಾರೆ.

ಹರಿದ್ವಾರ ದ್ವೇಷ ಭಾಷಣ ಪ್ರಕರಣದಲ್ಲಿಯೂ ಯತಿ ನರಸಿಂಹಾನಂದ್​​ನ್ನು ಬಂಧಿಸಲಾಗಿದೆ ಎಂದ ಪೊಲೀಸ್
ಧಾರ್ಮಿಕ ಮುಖಂಡ ಯತಿ ನರಸಿಂಹಾನಂದ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jan 17, 2022 | 3:56 PM

Share

ದೆಹಲಿ: ಕಳೆದ ತಿಂಗಳು ಹರಿದ್ವಾರದಲ್ಲಿ(Haridwar) ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನಂದ್ (Yati Narsinghanand) ಅವರನ್ನು ಇದೀಗ ಧರಮ್ ಸಂಸದ್ ದ್ವೇಷ ಭಾಷಣ ಪ್ರಕರಣದಲ್ಲಿ ರಿಮಾಂಡ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಬೇರೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ನರಸಿಂಹಾನಂದ್ ನನ್ನು ಶನಿವಾರ ಬಂಧಿಸಲಾಗಿತ್ತು. ಒಂದು ದಿನದ ನಂತರ, ಭಾನುವಾರ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಆದರೆ ರಿಮಾಂಡ್ ಅರ್ಜಿಯಲ್ಲಿ ಧರಮ್ ಸಂಸದ್ ದ್ವೇಷ ಭಾಷಣ ಪ್ರಕರಣವನ್ನೂ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  ಧರಮ್ ಸಂಸದ್ ದ್ವೇಷ ಭಾಷಣ ಪ್ರಕರಣದಲ್ಲಿ 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಅವರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಕೃತ್ಯಗಳು ಸೇರಿವೆ) ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನರಸಿಂಹಾನಂದ್ ಅವರು ಕಳೆದ ತಿಂಗಳು ಹರಿದ್ವಾರ “ಧರ್ಮ ಸಂಸದ್” ಅಥವಾ ಧಾರ್ಮಿಕ ಸಭೆಯಲ್ಲಿ ದ್ವೇಷದ ಭಾಷಣಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಎರಡನೇ ವ್ಯಕ್ತಿಯಾಗಿದ್ದಾರೆ. ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿ (ಮತಾಂತರಗೊಳ್ಳುವ ಮೊದಲು ವಸೀಮ್ ರಿಜ್ವಿ ಆಗಿದ್ದರು) ಅವರನ್ನು ಘಟನೆಯ ಸುಮಾರು ಒಂದು ತಿಂಗಳ ನಂತರ, ಸುಪ್ರೀಂಕೋರ್ಟ್ ಮಧ್ಯಸ್ಥಿಕೆಯ ನಂತರ ಬಂಧಿಸಲಾಯಿತು. ರೂರ್ಕಿಯ ನರ್ಸನ್ ಗಡಿಯಲ್ಲಿ ತ್ಯಾಗಿಯನ್ನು ಬಂಧಿಸಲಾಗಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಯೋಗೇಂದ್ರ ರಾವತ್ ಪಿಟಿಐಗೆ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ಗಳಲ್ಲಿ 10ಕ್ಕೂ ಹೆಚ್ಚು ಜನರ ಹೆಸರಿದೆ. ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವ ಮೊದಲು ಮತ್ತು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವ ಮುನ್ನ ತ್ಯಾಗಿ ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥರಾಗಿದ್ದರು.

ಕಳೆದ ಎರಡು ವಾರಗಳಲ್ಲಿ, ಕೇಸರಿ ವಸ್ತ್ರಧಾರಿ ನರಸಿಂಹಾನಂದ್ ಅವರು ಪೋಲೀಸ್ ಅಧಿಕಾರಿಯೊಬ್ಬರು “ನಾವು ನಿಮ್ಮೊಂದಿಗೆ ಇದ್ದೇವೆ” ಎಂದು ಹೇಳಿದಾಗ, ಅದು ಹೇಗೆ ನೀವು ನಮ್ಮೊಂದಿಗೆ ಇರುತ್ತೀರಿ ನೀವೆಲ್ಲರೂ ಸಾಯುತ್ತೀರಿ” ಎಂದು ಶಪಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಕಳೆದ ಎರಡು ವಾರಗಳಲ್ಲಿ, ಕೇಸರಿ ವಸ್ತ್ರಧಾರಿ ನರಸಿಂಹಾನಂದ್ ಅವರು ಪೋಲೀಸ್ ಅಧಿಕಾರಿಯೊಬ್ಬರಲ್ಲಿ ಗಲಾಟೆ ಮಾಡುತ್ತಾ “ನೀವೆಲ್ಲರೂ ಸಾಯುತ್ತೀರಿ” ಎಂದು ಹೇಳಿದ್ದರು.  ಡಿಸೆಂಬರ್ 17 ರಿಂದ 20 ರವರೆಗೆ ನಡೆದ ಹರಿದ್ವಾರದ ಕಾರ್ಯಕ್ರಮದ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಯಿತು ಮತ್ತು ಮಾಜಿ ಮಿಲಿಟರಿ ಮುಖ್ಯಸ್ಥರು, ನಿವೃತ್ತ ನ್ಯಾಯಾಧೀಶರು, ಕಾರ್ಯಕರ್ತರು ಮತ್ತು ಅಂತರರಾಷ್ಟ್ರೀಯ ಟೆನಿಸ್ ದಂತಕಥೆ ಮಾರ್ಟಿನಾ ನವ್ರಾಟಿಲೋವಾ ಅವರಿಂದಲೂ ತೀವ್ರ ಟೀಕೆಗೆ ಗುರಿಯಾಯಿತು.

ಕಾರ್ಯಕ್ರಮವನ್ನು ಆಯೋಜಿಸಿದವರು ಮತ್ತು ದ್ವೇಷದ ಭಾಷಣಗಳನ್ನು ನೀಡಿದವರು ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. “ನಾನು ಹೇಳಿದ್ದಕ್ಕೆ ನನಗೆ ನಾಚಿಕೆಯಾಗುವುದಿಲ್ಲ, ನಾನು ಪೊಲೀಸರಿಗೆ ಹೆದರುವುದಿಲ್ಲ, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ” ಎಂದು ಪ್ರಬೋಧಾನಂದ ಗಿರಿ ಡಿಸೆಂಬರ್ 23 ರಂದು ಎನ್​​ಡಿಟಿವಿಗೆ ಹೇಳಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಧಾಮಿ ಸೇರಿದಂತೆ ಬಿಜೆಪಿ ನಾಯಕರೊಂದಿಗೆ ಆಗಾಗ್ಗೆ ಫೋಟೋದಲ್ಲಿ ಕಾಣಿಸಿಕೊಂಡಿದ್ದರು ಈ ಪ್ರಬೋಧಾನಂದ ಗಿರಿ.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರೊಂದಿಗೆ ಜ.18ರಂದು ನಮೋ ಆ್ಯಪ್ ಮೂಲಕ ಆನ್​​ಲೈನ್ ಸಂವಾದ ನಡೆಸಲಿದ್ದಾರೆ ನರೇಂದ್ರ ಮೋದಿ

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಿಷ್ಟು
ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಿಷ್ಟು