AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ವರ್ಷಗಳ ಹೋರಾಟ ಅಂತ್ಯ, ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ನಿಧನ

ಹರೀಶ್ ರಾಣಾ, ಭಾರತದಲ್ಲಿ ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಮೊದಲ ವ್ಯಕ್ತಿ, 13 ವರ್ಷಗಳ ಕೋಮಾದಲ್ಲಿದ್ದು ಈಗ ನಿಧನರಾಗಿದ್ದಾರೆ. ಸುಪ್ರೀಂ ಕೋರ್ಟ್ ಮಾರ್ಚ್ 11ರಂದು ಅವರಿಗೆ ದಯಾಮರಣಕ್ಕೆ ಅನುಮತಿ ನೀಡಿತ್ತು. 2013ರಲ್ಲಿ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿದ್ದ ರಾಣಾ, ಜೀವ ಬೆಂಬಲ ವ್ಯವಸ್ಥೆಯಲ್ಲಿದ್ದರು. ಈ ತೀರ್ಪು ಭಾರತದ ಕಾನೂನು ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲು ಎಂದು ಪರಿಗಣಿಸಲಾಗಿದೆ.

13 ವರ್ಷಗಳ ಹೋರಾಟ ಅಂತ್ಯ, ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ  ನಿಧನ
ಹರೀಶ್ ರಾಣಾImage Credit source: India Today
ನಯನಾ ರಾಜೀವ್
|

Updated on: Mar 25, 2026 | 7:44 AM

Share

ನವದೆಹಲಿ, ಮಾರ್ಚ್​ 25: ಒಂದಲ್ಲಾ ಎರಡಲ್ಲ ಹದಿಮೂರು ವರ್ಷಗಳ ಹೋರಾಟ ಅಂತ್ಯಗೊಂಡಿದೆ. 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ಕೊನೆಯುಸಿರೆಳೆದಿದ್ದಾರೆ. ನಿಷ್ಕ್ರಿಯ ದಯಾಮರಣ(Passive Euthanasia)ಕ್ಕೆ ಅನುಮತಿ ಪಡೆದ ಭಾರತದಲ್ಲಿ ಮೊದಲ ವ್ಯಕ್ತಿ ಹರೀಶ್ ರಾಣಾ ಏಮ್ಸ್​ ಆಸ್ಪತ್ರೆಯಲ್ಲಿ ಉಸಿರು ಚೆಲ್ಲಿದ್ದಾರೆ. ರಾಣಾ (31) ಅವರನ್ನು ಮಾರ್ಚ್ 14 ರಂದು ಗಾಜಿಯಾಬಾದ್‌ನಲ್ಲಿರುವ ತಮ್ಮ ಮನೆಯಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (AIIMS) ಡಾ.ಬಿ.ಆರ್. ಅಂಬೇಡ್ಕರ್ ಇನ್ಸ್ಟಿಟ್ಯೂಟ್ ರೋಟರಿ ಕ್ಯಾನ್ಸರ್ ಆಸ್ಪತ್ರೆ ಸ್ಥಳಾಂತರಿಸಲಾಗಿತ್ತು, ಅವರು 2013 ರಿಂದ ಕೋಮಾದಲ್ಲಿದ್ದರು.

ಮೂರು ದಿನಗಳ ಹಿಂದೆ, ಮಾರ್ಚ್ 11 ರಂದು, ಸುಪ್ರೀಂ ಕೋರ್ಟ್ ಒಂದು ಮಹತ್ವದ ತೀರ್ಪಿನಲ್ಲಿ, ಹರೀಶ್ ರಾಣಾಗೆ ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ನೀಡಿತ್ತು. ರಾಣಾ ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಬಿ.ಟೆಕ್ ವಿದ್ಯಾರ್ಥಿಯಾಗಿದ್ದರು. 2013 ರಲ್ಲಿ, ಅವರು ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಬಿದ್ದು ತಲೆಗೆ ತೀವ್ರ ಗಾಯಗಳಾಗಿದ್ದವು. ಅಂದಿನಿಂದ ಅವರು ಕೋಮಾದಲ್ಲಿದ್ದರು, ಆಮ್ಲಜನಕದ ಬೆಂಬಲದೊಂದಿಗೆ ಉಸಿರಾಡುತ್ತಿದ್ದರು.

ನಿಷ್ಕ್ರಿಯ ದಯಾಮರಣ ಎಂದರೆ ವೈದ್ಯಕೀಯ ಬೆಂಬಲವನ್ನು ನಿಲ್ಲಿಸುವುದು ಅಥವಾ ಮಾರಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಯನ್ನು ಜೀವಂತವಾಗಿಡುವ ಜೀವ ಬೆಂಬಲ ವ್ಯವಸ್ಥೆಗಳನ್ನು ತೆಗೆದುಹಾಕುವುದು, ಅವರು ನೈಸರ್ಗಿಕವಾಗಿ ಸಾಯಲು ಅನುವು ಮಾಡಿಕೊಡುತ್ತದೆ. ನಿಷ್ಕ್ರಿಯ ದಯಾಮರಣವು ವರ್ಷಗಳ ಸರಿಪಡಿಸಲಾಗದ ಯಾತನೆಯಿಂದ ಹರೀಶ್ ಅವರನ್ನು ಮುಕ್ತಗೊಳಿಸುತ್ತದೆ ಎಂದು ಅವರ ತಂದೆ ಹೇಳಿದ್ದರು.

ಮತ್ತಷ್ಟು ಓದಿ: 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್​ ಅನುಮತಿ

ಮಾರ್ಚ್ 11 ರ ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ದೇಶದಲ್ಲಿ ಮೊದಲ ಬಾರಿಗೆ ಒಬ್ಬ ವ್ಯಕ್ತಿಗೆ ನಿಷ್ಕ್ರಿಯ ದಯಾಮರಣಕ್ಕೆ ಅವಕಾಶ ನೀಡಿತ್ತು. ಈ ವಿಷಯದ ಕುರಿತು ತೀರ್ಪು ನೀಡುತ್ತಾ, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಕೇಂದ್ರ ಸರ್ಕಾರವನ್ನು ನಿಷ್ಕ್ರಿಯ ದಯಾಮರಣ ಕುರಿತು ಸಮಗ್ರ ಕಾನೂನನ್ನು ಜಾರಿಗೆ ತರುವ ಬಗ್ಗೆ ಪರಿಗಣಿಸುವಂತೆ ಕೇಳಿತ್ತು.

2024ರಲ್ಲಿ ಮೊದಲ ಬಾರಿಗೆ ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದ ಕುಟುಂಬವು, ರಾಣಾ ಅವರ ಜೀವ ರಕ್ಷಕ ಚಿಕಿತ್ಸೆಯನ್ನು ಹಿಂಪಡೆಯಲು ಅನುಮತಿ ಕೋರಿತ್ತು. ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ತರುವಾಯ ಕುಟುಂಬವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ವಿಸ್ತೃತ ವೈದ್ಯಕೀಯ ವರದಿಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್, ಮಾರ್ಚ್ 11ರಂದು ದಯಾಮರಣಕ್ಕೆ ಸಮ್ಮತಿಸಿ ತೀರ್ಪು ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More