ಸೋನಿಯಾ ಗಾಂಧಿ, ಮಾಯಾವತಿಗೆ ಭಾರತ ರತ್ನ ನೀಡಿ.. ಭಾರತ ಸರ್ಕಾರಕ್ಕೆ ಹರೀಶ್ ರಾವತ್ ಮನವಿ

ಸೋನಿಯಾ ಗಾಂಧಿ, ಮಾಯಾವತಿಗೆ ಭಾರತ ರತ್ನ ನೀಡುವಂತೆ ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಭಾರತ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಸೋನಿಯಾ ಗಾಂಧಿ, ಮಾಯಾವತಿಗೆ ಭಾರತ ರತ್ನ ನೀಡಿ.. ಭಾರತ ಸರ್ಕಾರಕ್ಕೆ ಹರೀಶ್ ರಾವತ್ ಮನವಿ
ಬಹುಜನ ಸಮಾಜ ಪಕ್ಷದ (BSP) ಮುಖ್ಯಸ್ಥೆ ಮಾಯಾವತಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ

Updated on: Jan 06, 2021 | 9:20 AM

ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಹುಜನ ಸಮಾಜ ಪಕ್ಷದ (BSP) ಮುಖ್ಯಸ್ಥೆ ಮಾಯಾವತಿಗೆ ಭಾರತ್ ರತ್ನ ನೀಡಲು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಭಾರತ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾವತ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು “ಸೋನಿಯಾ ಗಾಂಧಿ ಮತ್ತು ಮಾಯಾವತಿ ಮಹಿಳಾ ಸಬಲೀಕರಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

“ಸೋನಿಯಾ ಗಾಂಧಿ ಮತ್ತು ಮಾಯಾವತಿ ಇಬ್ಬರೂ ಪ್ರಖ್ಯಾತ ರಾಜಕಾರಣಿಗಳು. ಒಬ್ಬರು ಗಾಂಧಿ ರಾಜಕೀಯವನ್ನು ಒಪ್ಪಬಹುದು ಅಥವಾ ಒಪ್ಪದೇ ಇರಬಹುದು ಆದರೆ ಮಹಿಳಾ ಸಬಲೀಕರಣ ಮತ್ತು ಸಾರ್ವಜನಿಕ ಸೇವೆಯಲ್ಲಿ ಅವರು ನೀಡಿದ ಅಪಾರ ಕೊಡುಗೆಯನ್ನು ನಿರಾಕರಿಸಲಾಗುವುದಿಲ್ಲ. ಇಂದು, ಅವರನ್ನು ಭಾರತದಲ್ಲಿ ಸ್ತ್ರೀತ್ವದ ಪ್ರಶಂಸನೀಯರೆಂದು ಪರಿಗಣಿಸಲಾಗಿದೆ, ”ಎಂದು ರಾವತ್ ತಿಳಿಸಿದ್ದಾರೆ.

Published On - 9:19 am, Wed, 6 January 21