ಹರ್ಯಾಣ: ಕಾರಿಗೆ ಬಸ್​ ಡಿಕ್ಕಿ, ಐವರು ಸ್ಥಳದಲ್ಲೇ ಸಾವು

|

Updated on: Mar 06, 2024 | 9:54 AM

ಹರ್ಯಾಣದ ರೇವಾರಿಯಲ್ಲಿ ಹರ್ಯಾಣ ಬಸ್​ ಒಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ.

ಹರ್ಯಾಣ: ಕಾರಿಗೆ ಬಸ್​ ಡಿಕ್ಕಿ, ಐವರು ಸ್ಥಳದಲ್ಲೇ ಸಾವು
ಪ್ರಾತಿನಿಧಿಕ ಚಿತ್ರ
Follow us on

ಹರ್ಯಾಣದ ರೇವಾರಿಯಲ್ಲಿ ಹರ್ಯಾಣ ಬಸ್​ ಒಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಐವರು ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಮಹೇಂದ್ರಗಢ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬಲೆನೊ ಕಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಐವರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಅವರು ಹರ್ಯಾಣದ ಚಾರ್ಕಿ ದಾದ್ರಿ ನಿವಾಸಿಗಳಾಗಿದ್ದರು,

ದೆಹಲಿಯ ಬದರ್‌ಪುರದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ, 3 ಮಂದಿ ಸಾವು
ದೆಹಲಿಯ ಬಡಾಪುರ ಮೇಲ್ಸೇತುವೆಯಲ್ಲಿ ಬರುತ್ತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯರಾತ್ರಿ 12.48 ಕ್ಕೆ ಈ ಘಟನೆ ನಡೆದಿದೆ. ಆಲ್ಟೊದಲ್ಲಿದ್ದ ಏಳು ಮಂದಿ ಫರಿದಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ದೆಹಲಿಗೆ ಹಿಂತಿರುಗುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.

ಕಾರು ನಿಯಂತ್ರಣ ತಪ್ಪಿ ಬದರ್‌ಪುರ ಮೇಲ್ಸೇತುವೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ನಿಯಂತ್ರಣ ತಪ್ಪಿ ಬದರ್‌ಪುರ ಮೇಲ್ಸೇತುವೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಕರೆ ಬಂದ ನಂತರ ಅಪಘಾತದ ಬಗ್ಗೆ ಪೊಲೀಸರಿಗೆ ತಿಳಿಯಿತು.

ಮತ್ತಷ್ಟು ಓದಿ: ಬೆಳಗಾವಿಯಲ್ಲಿ ಹೆಚ್ಚಾದ ಅಪಘಾತ ಪ್ರಕರಣಗಳು; ಕೇವಲ ಮೂರು ದಿನದಲ್ಲಿ 25 ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ: ಮಗು ಸೇರಿದಂತೆ ಬಳ್ಳಾರಿ ಮೂಲದ ಐವರು ಸಾವು
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ (accident) ಹೊಡೆದ ಪರಿಣಾಮ ಬಳ್ಳಾರಿ ಮೂಲದ ಐವರು ದುರ್ಮರಣ ಹೊಂದಿರುವಂತಹ ಘಟನೆ ಆಂಧ್ರದ ಮೆಹಬೂಬನಗರ ಜಿಲ್ಲೆ ಕೊತಕೋಟ ಬೈಪಾಸ್‌ನಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದು, ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ.

ಫಾತೀಮಾ(50), ಅಬ್ದುಲ್ ರೆಹಮಾನ್(30), ಮಾರಿಯಾ(32), ವಾಸೀಂ(01), ಬುಸ್ರಾ(02) ಮೃತ ದುರ್ದೈವಿಗಳು. ಮತ್ತಿಬ್ಬರ ಸ್ಥಿತಿ ಚಿಂತಾಜನಕ, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರ್ಟಿಗಾ ಕಾರಿನಲ್ಲಿ ಹೈದರಾಬಾದ್​ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ಆಂಧ್ರಪ್ರದೇಶ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:47 am, Wed, 6 March 24