ರಾಜಸ್ಥಾನದ ಬಿಕಾನೇರ್​ನಲ್ಲಿ ಅಪಘಾತ, ಒಂದೇ ಕುಟುಂಬದ 6 ಮಂದಿ ಸಾವು

ರಾಜಸ್ಥಾನದಲ್ಲಿ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ, ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರ್ಯಾಣದ ನಂಬರ್​ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ರಾಜಸ್ಥಾನದ ಬಿಕಾನೇರ್​ನಲ್ಲಿ ಅಪಘಾತ, ಒಂದೇ ಕುಟುಂಬದ 6 ಮಂದಿ ಸಾವು
ಕಾರುImage Credit source: Patrika.com
Follow us
ನಯನಾ ರಾಜೀವ್
|

Updated on: Jul 19, 2024 | 8:45 AM

ರಾಜಸ್ಥಾನದ ಬಿಕಾನೇರ್​ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಬಿಕಾನೇರ್​ನ ಮಹಾಜನ್​ನ ಜೈತ್​ಪುರ ಟೋಲ್​ ಬಳಿ ಅಪಘಾತ ಸಂಭವಿಸಿದೆ. ಅವರು ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರ್ಯಾಣದ ನಂಬರ್​ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಿಕ್ಕಿಬಿದ್ದ ಪ್ರಯಾಣಿಕರನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಡಬೇಕಾಯಿತು.

ಅಪಘಾತದ ವೇಳೆ ಇಬ್ಬರು ಪ್ರಯಾಣಿಕರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ. ಹನುಮಾನ್​ಗಢದಿಂದ ಬಿಕಾನೇರ್​ ಕಡೆಗೆ ಹೋಗುತ್ತಿದ್ದ ಕಾರೊಂದು ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದಿದೆ, ಆ ರಭಸಕ್ಕೆ ಕಾರು ಹಾರಿ ಹೋಗಿತ್ತು.

ಮತ್ತಷ್ಟು ಓದಿ: ಗುಜರಾತ್​ನಲ್ಲಿ ಭೀಕರ ಅಪಘಾತ: ಬಸ್​ಗೆ ಲಾರಿ ಡಿಕ್ಕಿ, 6 ಮಂದಿ ಸಾವು, ಹಲವರಿಗೆ ಗಾಯ

ಮಹಾಜನ್ ಪೊಲೀಸರು, ಜಿಲ್ಲಾಧಿಕಾರಿ ಹಾಗೂ ಎಸ್ಪಿ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರು ವೇಗವಾಗಿತ್ತು ಅಷ್ಟೇ ಅಲ್ಲದೆ ರಾತ್ರಿಯಾಗಿತ್ತು, ಚಾಲಕನಿಗೆ ಟ್ರಕ್ ಮುಂದೆ ಹೋಗುತ್ತಿರುವುದು ಕಾಣಿಸಿರಲಿಲ್ಲ. ಇದರಿಂದಾಗಿ ಅವಘಡ ಸಂಭವಿಸಿದೆ. ಕುಡಲೇ ಅಂಬ್ಯುಲೆನ್ಸ್​ ಅಲ್ಲಿಗೆ ತಲುಪಿತ್ತು ಈ ಅಪಘಾತವು ಎಷ್ಟು ತೀವ್ರವಾಗಿತ್ತು ಎಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದವರನ್ನು ಕ್ರೇನ್ ಬಳಸಿ ಹೊರತೆಗೆದಾಗ ಒಬ್ಬ ಬಾಲಕಿ ಹೊರತುಪಡಿಸಿ ಎಲ್ಲರೂ ಸಾವನ್ನಪ್ಪಿದ್ದರು. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯೂ ಬರುವಷ್ಟರಲ್ಲಿ ಮೃತಪಟ್ಟಿದ್ದಾಳೆ. ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು, ದಬ್ವಾಲಿ ತಹಸಿಲ್ ನಿವಾಸಿಗಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​