AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonali Phogat Passes Away ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ

2019ರಲ್ಲಿ ನಡೆದ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕುಲದೀಪ್ ಬಿಷ್ಣೋಯ್ ವಿರುದ್ಧ ಆದಂಪುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋನಾಲಿ ಕಣಕ್ಕಿಳಿದಿದ್ದರು.

Sonali Phogat Passes Away ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ
ಸೋನಾಲಿ ಫೋಗಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 23, 2022 | 1:04 PM

Share

ಬಿಜೆಪಿ (BJP) ನಾಯಕಿ, ನಟಿ ಸೋನಾಲಿ ಫೋಗಟ್ (43) (Sonali Phogat)ಸೋಮವಾರ ರಾತ್ರಿ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ತಮ್ಮ ಕಚೇರಿ ಸಿಬ್ಬಂದಿಗಳ ಜತೆ ಸಮಾರಂಭವೊಂದರಲ್ಲಿ ಭಾಗವಹಿಸಲು ಹೋಗಿದ್ದು, ಅಂಜುನಾದಲ್ಲಿರುವ ಗ್ರ್ಯಾಂಜ್ ಲಿಯೊನಿ ರೆಸಾರ್ಟ್​​ನಲ್ಲಿ ಅವರು ತಂಗಿದ್ದರು ಎಂದು ಕುಟುಂಬದವರು ಹೇಳಿದ್ದಾರೆ. ಹರ್ಯಾಣದ ಫತೇಹಬಾದ್​​ನ ಭುತಾನ್ ಗ್ರಾಮದಲ್ಲಿ ಮಧ್ಯಮ ಕುಟುಂಬದಲ್ಲಿ ಬೆಳೆದಿದ್ದ ಫೋಗಟ್ 2019ರಲ್ಲಿ ಚುನಾವಣೆ ಸ್ಪರ್ಧಿಸಿದ್ದರು. ಕುಲದೀಪ್ ಬಿಷ್ಣೋಯ್ ವಿರುದ್ಧ ಹರ್ಯಾಣದ ಆದಂಪುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋನಾಲಿ ಕಣಕ್ಕಿಳಿದಿದ್ದರು. ಬಿಷ್ಣೋಯ್ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದರು.

ರಾಜಕೀಯ ಜೀವನ

2019ರ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಸೋನಾಲಿ 43ರ ಹರೆಯದಲ್ಲಿ ರಾಜಕೀಯ ಪ್ರವೇಶ ಮಾಡಿದ್ದರು. ಇವರು ಹರ್ಯಾಣದ ಮಾಜಿ ಸಿಎಂ ಭಜನ್ ಲಾಲ್ ಅವರ ಪುತ್ರ ಮೂರು ಬಾರಿ ಶಾಸಕರಾಗಿದ್ದ ಕುಲದೀಪ್ ಬಿಷ್ಣೋಯ್ ವಿರುದ್ಧ ಕಣಕ್ಕಿಳಿದಿದ್ದರು. ಚುನಾವಣೆಯಲ್ಲಿ ಸೋತಿದ್ದರೂ ಸಾಮಾಜಿಕ ಮಾಧ್ಯಮದಲ್ಲಿ ಇವರು ಜನಪ್ರಿಯರಾಗಿದ್ದರು. ಮುಂಬರುವ ಉಪಚುನಾವಣೆಯಲ್ಲಿ ಆದಂಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳ ನಡುವೆ ಬಿಷ್ಣೋಯ್ ಕಳೆದ ವಾರ ಸೋನಾಲಿ ಫೋಗಟ್ ಅವರನ್ನು ಭೇಟಿಯಾಗಿದ್ದರು.

ಬಿಗ್ ಬಾಸ್ ಸ್ಪರ್ಧಿ

ಟಿಕ್ ಟಾಕ್ ಭಾರತದಲ್ಲಿ ಬ್ಯಾನ್ ಆಗುವ ಮುನ್ನ ಅದರಲ್ಲಿ ಅಪಾರ ಸಂಖ್ಯೆಯಲ್ಲಿ ಫಾಲೋವರ್ ಗಳನ್ನು ಹೊಂದಿದ್ದ ಸೋನಾಲಿ,  ಬಿಗ್ ಬಾಸ್ 14ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಪ್ರವೇಶ ಪಡೆದಿದ್ದರು. ಬಿಗ್ ಬಾಸ್ ಮನೆಯಲ್ಲಿ ಸಹ ಸ್ಪರ್ಧಿ ಅಲೈ ಗೋನಿ ಮೇಲೆ ತನಗೆ ಪ್ರೀತಿ ಹುಟ್ಟಿತ್ತು ಎಂದು ಅವರು ಹೇಳಿದ್ದರು. ಗೋನಿ ಅವರು ಜಾಸ್ಮಿನ್ ಭಾಸಿನ್ ಅವರನ್ನು ಪ್ರೀತಿಸುತ್ತಿದ್ದು, ಸೋನಾಲಿ ಬಿಗ್ ಬಾಸ್ ಮನೆಗೆ ಬಂದ ದಿನವೇ ಭಾಸಿನ್, ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದರು.

ಕೊನೇ ಇನ್ಸ್ಟಾ ಪೋಸ್ಟ್

ಸಾಯುವ ಕೆಲವೇ ಗಂಟೆಗಳ ಮೊದಲು, ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಿಂದ ಪಿಂಕ್  ಪೇಟ ಧರಿಸಿ ಮೊಹಮ್ಮದ್ ರಫಿ ಅವರ ಹಾಡು ‘ರೂಖ್ ಸೆ ಜರಾ ನಿಕಾಬ್ ತೋ ಹಟಾ ದೋ ಮೇರೆ ಹಜೂರ್…’ ಹಿನ್ನೆಲೆಯಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅದೇ ಉಡುಪಿನಲ್ಲಿ ತನ್ನ ಟ್ವಿಟರ್ ಪ್ರೊಫೈಲ್ ಚಿತ್ರವನ್ನು ಕೂಡ ಅವರು ಬದಲಿಸಿದ್ದರು.

ವಿವಾದಗಳು

ಜೂನ್ 2020 ರಲ್ಲಿ ಬಾಲ್ಸಾಮಂಡ್ ಮಾರುಕಟ್ಟೆ ಕಾರ್ಯದರ್ಶಿ ಸುಲ್ತಾನ್ ಸಿಂಗ್ ಅವರ ಸದಸ್ಯನನ್ನು ಥಳಿಸಿದಾಗ ಸೋನಾಲಿ ಫೋಗಟ್ ಒಮ್ಮೆ ಭಾರಿ ವಿವಾದಕ್ಕೆ ಸಿಲುಕಿದ್ದರು. ಆತ ತನ್ನನ್ನು ನಿಂದಿಸಿದ್ದಾನೆ  ಎಂದು ಆರೋಪಿಸಿ ಸೋನಾಲಿ ಚಪ್ಪಲಿಯಿಂದ ಥಳಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸೋನಾಲಿ ಮತ್ತು ಹಾಗೂ ಕಾರ್ಯದರ್ಶಿ ಇಬ್ಬರೂ ಪರಸ್ಪರ ದೂರು ದಾಖಲಿಸಿಕೊಂಡಿದ್ದರು.

Published On - 12:11 pm, Tue, 23 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?