ಮಹಾರಾಷ್ಟ್ರ, ಜಾರ್ಖಂಡ್​ನಲ್ಲೂ ಹರಿಯಾಣದ ಫಲಿತಾಂಶ ಮರುಕಳಿಸಲಿದೆ; ಚಂದ್ರಬಾಬು ನಾಯ್ಡು ಭವಿಷ್ಯ

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸಹ ಶೇಕಡಾವಾರು ಮತಗಳ ವಿಷಯದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸರ್ಕಾರದಲ್ಲಿ ಸ್ಥಿರತೆ ಇದ್ದಾಗಲೆಲ್ಲಾ ಆ ರಾಜ್ಯದಲ್ಲಿ ಅಭಿವೃದ್ಧಿ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ, ಜಾರ್ಖಂಡ್​ನಲ್ಲೂ ಹರಿಯಾಣದ ಫಲಿತಾಂಶ ಮರುಕಳಿಸಲಿದೆ; ಚಂದ್ರಬಾಬು ನಾಯ್ಡು ಭವಿಷ್ಯ
ಚಂದ್ರಬಾಬು ನಾಯ್ಡು
Follow us
|

Updated on: Oct 09, 2024 | 7:37 PM

ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ಫಲಿತಾಂಶಗಳು ಹರಿಯಾಣ ಫಲಿತಾಂಶಗಳನ್ನು ಪುನರಾವರ್ತಿಸಲಿವೆ ಎಂದು ಹೇಳಿದ್ದಾರೆ. ಬಿಜೆಪಿ ಮಿತ್ರ ಪಕ್ಷವಾಗಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿಗೆ ಮರಳಿದ್ದು ಮಾತ್ರವಲ್ಲದೆ, ಅಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದಿದ್ದಾರೆ.

“ಹರಿಯಾಣದಲ್ಲಿ ಐತಿಹಾಸಿಕ ಚುನಾವಣಾ ಗೆಲುವು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಉತ್ತಮ ಸಾಧನೆಗಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ. ನಂಬಿಕೆಎಗ ಅರ್ಹನಾದ ನಾಯಕ ಉತ್ತಮವಾಗಿ ಕಾರ್ಯ ನಿರ್ವಹಿಸಿದಾಗಲೆಲ್ಲಾ ಜನರು ಅವರನ್ನು ಬೆಂಬಲಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ. ಇದು ಹರಿಯಾಣದಲ್ಲಿ ಮಾತ್ರವಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸಹ ಸಾಬೀತಾಗಿದೆ. ವೋಟ್ ಪರ್ಸೆಂಟೇಜ್ ನಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಜಮ್ಮು ಕಾಶ್ಮೀರದಲ್ಲಿ ಹೊರಹೊಮ್ಮಿದೆ ಎಂದಿದ್ದಾರೆ.

ಇದನ್ನೂ ಓದಿ: ಹಿಂದೂಗಳ ನಡುವೆ ಜಗಳ ತರಲು ಕಾಂಗ್ರೆಸ್‌ ಷಡ್ಯಂತ್ರ; ಮೋದಿ ಆರೋಪ

ಎರಡು ದಿನಗಳ ದೆಹಲಿ ಪ್ರವಾಸದಿಂದ ಹಿಂತಿರುಗಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಆಗಾಗ ನಡೆಯುವ ಚುನಾವಣೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುವುದರಿಂದ  ಭಾರತವು “ಒಂದು ರಾಷ್ಟ್ರ ಒಂದು ಚುನಾವಣೆ” ಅನ್ನು ಬೆಂಬಲಿಸುವ ಅಗತ್ಯವಿದೆ ಎಂದು ಹೇಳಿದರು.

ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಅಮೋಘ ಸಾಧನೆ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಶ್ಲಾಘಿಸಿದ ಚಂದ್ರಬಾಬು ನಾಯ್ಡು, ಮೋದಿ ನಾಯಕತ್ವದಲ್ಲಿ ಭಾರತವು ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಿದರು. “ಗೌರವಾನ್ವಿತ ಪ್ರಧಾನಿ ಅವರ ಅಸಾಮಾನ್ಯ ಕೆಲಸಕ್ಕಾಗಿ ನಾನು ಮನಃಪೂರ್ವಕವಾಗಿ ಪ್ರಶಂಸಿಸುತ್ತೇನೆ” ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ