ಕಾರಿಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ ಅಪಘಾತ, ಐವರು ಸಾವು
ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್) 152ರಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ. ಗಾಯಗೊಂಡ ವ್ಯಕ್ತಿಗಳಲ್ಲಿ ಒಬ್ಬರನ್ನು ಕುರುಕ್ಷೇತ್ರದ ಎಲ್‌ಎನ್‌ಜೆಪಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನಿಬ್ಬರು ಪೆಹೋವಾದಲ್ಲಿನ ಮಿಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 152ರ ಟಿಕ್ರಿ ಗ್ರಾಮದ ಬಳಿ ಕಾರೊಂದು ಪಲ್ಟಿಯಾಗಿ ಇನ್ನೊಂದು ಬದಿಯಲ್ಲಿದ್ದ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದಾರುಣವಾಗಿ ಸಾವನ್ನಪ್ಪಿದ್ದು, ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ರಾಷ್ಟ್ರೀಯ ಹೆದ್ದಾರಿ 152ರ ಟಿಕ್ರಿ ಗ್ರಾಮದ ಬಳಿ ನಡೆದ ಘಟನೆಯ ಕುರಿತು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಮತ್ತಷ್ಟು ಓದಿ: ಉತ್ತರ ಕನ್ನಡ: ಯಡಳ್ಳಿಯಲ್ಲಿ ಆಟೋಗೆ ಕಾರು ಡಿಕ್ಕಿ, ವೃದ್ಧೆ ಸಾವು, ನಾಲ್ವರಿಗೆ ಗಂಭೀರ ಗಾಯ
ಸ್ಕಾರ್ಪಿಯೋದಲ್ಲಿದ್ದ ಕೈತಾಲ್ ನಿವಾಸಿಗಳಾದ ಮೋಹಿತ್ (26) ಮತ್ತು ಗುರ್ಬಚನ್ (27) ಗಾಯಗೊಂಡಿದ್ದಾರೆ. ಮಾಹಿತಿಯ ಪ್ರಕಾರ, ಬಾಬಾ ವೀರೇಂದ್ರ ಸಿಂಗ್ (26), ಬಾಬಾ ಗುರುಪೇಜ್ ಸಿಂಗ್ (40), ಬಾಬಾ ಹರ್ವಿಂದರ್ ಸಿಂಗ್ (38), ಹರ್ಮನ್ ಸಿಂಗ್ (25), ಮಂದೀಪ್ ಸಿಂಗ್ (24) ಪೆಹೋವಾದಿಂದ ಪ್ರಯಾಣಿಸುತ್ತಿದ್ದರು.
ಟಿಕ್ರಿ ಬಳಿ ತಲುಪಿದಾಗ, ಇದ್ದಕ್ಕಿದ್ದಂತೆ ಒಂದು ಪ್ರಾಣಿ ಕಾರಿನ ಮುಂದೆ ಕಾಣಿಸಿಕೊಂಡಿತು. ಅದನ್ನು ರಕ್ಷಿಸುವ ಯತ್ನದಲ್ಲಿ ಚಾಲಕ ಕಾರನ್ನು ಇನ್ನೊಂದು ಬದಿಗೆ ತಿರುಗಿಸಿದ್ದಾರೆ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಇನ್ನೊಂದು ಬದಿಗೆ ಹೋಗಿ ಅಂಬಾಲ ಕಡೆಯಿಂದ ಬರುತ್ತಿದ್ದ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಾವನ್ನಪ್ಪಿದ್ದಾರೆ,ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಜನರ ಸಹಾಯದಿಂದ ಮೃತದೇಹಗಳನ್ನು ಹೊರತೆಗೆದು ಪೆಹೋವಾ ಸಿಎಚ್‌ಸಿಗೆ ರವಾನಿಸಿದ್ದಾರೆ. ಗಾಯಗೊಂಡ ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ