Haryana Landslide: ಹರಿಯಾಣದ ಗಣಿಗಾರಿಕೆ ಪ್ರದೇಶದಲ್ಲಿ ಭಾರೀ ಭೂಕುಸಿತ; 12ಕ್ಕೂ ಹೆಚ್ಚು ವಾಹನಗಳು ನೆಲಸಮ, 15 ಜನ ನಾಪತ್ತೆ

Bhiwani Landslide: ಹರಿಯಾಣದ ಭಿವಾನಿ ಜಿಲ್ಲೆಯ ಗಣಿಗಾರಿಕೆ ವಲಯದಲ್ಲಿ ಭೂಕುಸಿತದಲ್ಲಿ ಗಣಿಗಾರಿಕೆಯಲ್ಲಿ ತೊಡಗಿದ್ದ ಸುಮಾರು 12ಕ್ಕೂ ಹೆಚ್ಚು ವಾಹನಗಳು ಹೂತು ಹೋಗಿವೆ. 15ರಿಂದ 20 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ.

Haryana Landslide: ಹರಿಯಾಣದ ಗಣಿಗಾರಿಕೆ ಪ್ರದೇಶದಲ್ಲಿ ಭಾರೀ ಭೂಕುಸಿತ; 12ಕ್ಕೂ ಹೆಚ್ಚು ವಾಹನಗಳು ನೆಲಸಮ, 15 ಜನ ನಾಪತ್ತೆ
ಹರಿಯಾಣದಲ್ಲಿ ಭೂಕುಸಿತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jan 01, 2022 | 2:29 PM

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಭಾರತದಲ್ಲಿ ಸಾಲು ಸಾಲು ದುರಂತಗಳು ಸಂಭವಿಸಿವೆ. ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ವೈಷ್ಣೋದೇವಿ ಮಂದಿರದಲ್ಲಿ ಭಕ್ತರ ಕಾಲ್ತುಳಿತವಾಗಿ 12 ಭಕ್ತರು ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 4 ಜನರು ಸಾವನ್ನಪ್ಪಿದ್ದರು. ಇದೀಗ ಮೂರನೇ ದುರಂತ ಸಂಭವಿಸಿದ್ದು, ಹರಿಯಾಣದಲ್ಲಿ ಭೂಕುಸಿತವಾಗಿ 10ರಿಂದ 15 ಜನರು ಮಣ್ಣಿನಡಿ ಹೂತುಹೋಗಿದ್ದಾರೆ. ಹಲವು ವಾಹನಗಳು ಕೂಡ ಮಣ್ಣಿನಡಿ ಸೇರಿವೆ.

ಹರಿಯಾಣದ ಭಿವಾನಿ ಜಿಲ್ಲೆಯ ತೋಷಮ್ ಬ್ಲಾಕ್‌ನ ದಡಮ್ ಗಣಿಗಾರಿಕೆ ವಲಯದಲ್ಲಿ ಇಂದು (ಶನಿವಾರ) ಸಂಭವಿಸಿದ ಭೂಕುಸಿತದಲ್ಲಿ ಗಣಿಗಾರಿಕೆಯಲ್ಲಿ ತೊಡಗಿದ್ದ ಸುಮಾರು 12ಕ್ಕೂ ಹೆಚ್ಚು ವಾಹನಗಳು ಹೂತು ಹೋಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಸುಮಾರು 15ರಿಂದ 20 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಅಧಿಕಾರಿಗಳು ಸ್ಥಳದಲ್ಲಿದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಹರಿಯಾಣದ ಭಿವಾನಿ ಜಿಲ್ಲೆಯ ಗಣಿಗಾರಿಕೆ ವಲಯದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದ ನಂತರ ಸುಮಾರು 15ರಿಂದ 20 ಜನರು ಸಿಲುಕಿರುವ ಶಂಕೆ ಇದೆ. ಜಿಲ್ಲಾಡಳಿತವು ತೋಷಮ್ ಬ್ಲಾಕ್‌ನ ದಡಮ್ ಗಣಿಗಾರಿಕೆ ವಲಯದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಹಾಗೇ, ಮಣ್ಣಿನಡಿ ಸಿಲುಕಿರುವವರನ್ನು ಹೊರಗೆ ತೆಗೆಯುವ ಕಾರ್ಯಾಚರಣೆ ನಡೆಯುತ್ತಿದೆ.

ಭೂಕುಸಿತ ಸಂಭವಿಸಿದಾಗ ಕಾರ್ಮಿಕರು ಬೇರೆ ಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಆಗ ಅವರ ವಾಹನಗಳು ಮಣ್ಣಿನಡಿ ಸಿಲುಕಿದೆ ಎಂದು ವರದಿಯಾಗಿದೆ. ಹರಿಯಾಣದ ಕೃಷಿ ಸಚಿವ ಜೆಪಿ ದಲಾಲ್ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ತಲುಪಿದ್ದಾರೆ. “ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ. ನಾವು ಜೀವ ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Vaishno Devi Temple Stampede: ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು

ಶಿವಕಾಶಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ; 4 ಮಂದಿ ಸಾವು, ಹಲವರಿಗೆ ಗಾಯ

Published On - 2:28 pm, Sat, 1 January 22

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ