Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ 75 ಕೋಟಾ; ಹರ್ಯಾಣ ಸರ್ಕಾರದ ಕಾನೂನು ರದ್ದು

ಹರ್ಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯಿದೆ, 2020, ₹30,000 ಕ್ಕಿಂತ ಕಡಿಮೆ ಮಾಸಿಕ ವೇತನವನ್ನು ನೀಡುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯ ಯುವಕರಿಗೆ 75% ಮೀಸಲಾತಿಯನ್ನು ಒದಗಿಸಿದೆ. ಇದು ಖಾಸಗಿ ಕಂಪನಿಗಳು, ಸೊಸೈಟಿಗಳು, ಟ್ರಸ್ಟ್‌ಗಳು ಮತ್ತು ಪಾಲುದಾರಿಕೆ ಸಂಸ್ಥೆಗಳನ್ನು ಒಳಗೊಂಡಿದೆ. ಕಾನೂನು 10 ವರ್ಷಗಳವರೆಗೆ ಅನ್ವಯಿಸುತ್ತದೆ.

ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ 75 ಕೋಟಾ; ಹರ್ಯಾಣ ಸರ್ಕಾರದ ಕಾನೂನು ರದ್ದು
ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on: Nov 17, 2023 | 7:56 PM

ಚಂಡೀಗಢ ನವೆಂಬರ್  17: ನಿವಾಸ ಪ್ರಮಾಣಪತ್ರ ಹೊಂದಿರುವ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಖಾಸಗಿ ವಲಯದಲ್ಲಿ 75% ಮೀಸಲಾತಿ ನೀಡುವ ಮನೋಹರ್ ಲಾಲ್ ಖಟ್ಟರ್(Manohar Lal Khattar) ಅವರ ಸರ್ಕಾರಿ ಕಾನೂನನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ (Punjab and Haryana High Court) ಶುಕ್ರವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಜಿಎಸ್ ಸಂಧವಾಲಿಯಾ ಮತ್ತು ಹರ್‌ಪ್ರೀತ್ ಕೌರ್ ಜೀವನ್ ಅವರಿದ್ದ ಪೀಠ ಈ ಆದೇಶ ನೀಡಿದೆ. 2021 ರಲ್ಲಿ ಗುರ್ಗಾಂವ್ ಇಂಡಸ್ಟ್ರಿಯಲ್ ಅಸೋಸಿಯೇಷನ್ ಸೇರಿದಂತೆ ಅನೇಕ ಉದ್ಯಮ ಸಂಸ್ಥೆಗಳು ಸಲ್ಲಿಸಿದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ.

ಹರ್ಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯಿದೆ, 2020, ₹30,000 ಕ್ಕಿಂತ ಕಡಿಮೆ ಮಾಸಿಕ ವೇತನವನ್ನು ನೀಡುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯ ಯುವಕರಿಗೆ 75% ಮೀಸಲಾತಿಯನ್ನು ಒದಗಿಸಿದೆ. ಇದು ಖಾಸಗಿ ಕಂಪನಿಗಳು, ಸೊಸೈಟಿಗಳು, ಟ್ರಸ್ಟ್‌ಗಳು ಮತ್ತು ಪಾಲುದಾರಿಕೆ ಸಂಸ್ಥೆಗಳನ್ನು ಒಳಗೊಂಡಿದೆ. ಕಾನೂನು 10 ವರ್ಷಗಳವರೆಗೆ ಅನ್ವಯಿಸುತ್ತದೆ.

ಉದ್ಯಮ ಸಂಸ್ಥೆಗಳು ಕಾನೂನು ಅಸಾಂವಿಧಾನಿಕವಾಗಿದೆ. ವ್ಯಾಪಾರಗಳು ಬೆಳೆಯಲು ಮತ್ತು ಸ್ಪರ್ಧಾತ್ಮಕವಾಗಿ ಉಳಿಯಲು ಅಡಿಪಾಯವಾಗಿ ಕಾರ್ಯನಿರ್ವಹಿಸುವ ಅರ್ಹತೆಯ ಮೂಲ ತತ್ವಕ್ಕೆ ವಿರುದ್ಧವಾಗಿದೆ ಎಂದು ವಾದಿಸಿದವು. ರಾಜ್ಯದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕದ ನಂತರ ಇದು ಉತ್ಪಾದಕತೆ, ಕೈಗಾರಿಕಾ ಸ್ಪರ್ಧಾತ್ಮಕತೆ ಮತ್ತು ಕೈಗಾರಿಕೆಗಳ ನಂತರದ ಚೇತರಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿದಾರರು ವಾದಿಸಿದರು.

ಇದನ್ನೂ ಓದಿ: ನಾನು ರಾಜೀನಾಮೆ ನೀಡಬೇಕೇ ಅಥವಾ ಜೈಲಿನಿಂದ ಸರ್ಕಾರ ನಡೆಸಬೇಕೇ, ಜನರನ್ನು ಕೇಳಿ: ಕೇಜ್ರಿವಾಲ್

ಮತ್ತೊಂದೆಡೆ, ಖಟ್ಟರ್ ಸರ್ಕಾರವು ಕಾನೂನು ಕೇವಲ “ಭೌಗೋಳಿಕ ವರ್ಗೀಕರಣ” ವನ್ನು ಮಾಡುತ್ತದೆ, ಅದು ಸಂವಿಧಾನದ ಅಡಿಯಲ್ಲಿ ಉತ್ತಮವಾಗಿ ಅನುಮತಿಸಲ್ಪಟ್ಟಿದೆ ಎಂದು ವಾದಿಸಿತ್ತು. ಇದು ರಾಜ್ಯದಲ್ಲಿ ನೆಲೆಸಿರುವ ಜನರ ಜೀವನ / ಜೀವನೋಪಾಯದ ಹಕ್ಕನ್ನು ರಕ್ಷಿಸುವುದು ಮತ್ತು ಅವರ ಆರೋಗ್ಯ, ಜೀವನ ಪರಿಸ್ಥಿತಿ ಮತ್ತು ಉದ್ಯೋಗದ ಹಕ್ಕನ್ನು ರಕ್ಷಿಸುವುದು” ಎಂದು ಅದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್