ನೂಹ್ ಹಿಂಸಾಚಾರ; ಹರ್ಯಾಣದ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ 14 ದಿನ ಜುಡಿಷಿಯಲ್ ಕಸ್ಟಡಿಗೆ

Congress MLA Mamman Khan In Judicial Custody: ಜುಲೈ 31ರಂದು ನೂಹ್​ನಲ್ಲಿ ಸಂಭವಿಸಿದ್ದ ಕೋಮು ಘರ್ಷಣೆ ಘಟನೆಯಲ್ಲಿ ಪ್ರಮುಖ ಸಂಚುಕೋರರಲ್ಲಿ ಒಬ್ಬರೆಂದು ಆರೋಪಿಸಲಾದ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು 14 ದಿನ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ. ಶುಕ್ರವಾರ (ಸೆ. 15) ಮಮ್ಮನ್ ಖಾನ್ ಅವರನ್ನು ಎಸ್​ಐಟಿ ಪೊಲೀಸರು ಬಂಧಿಸಿ 4 ದಿನಗಳ ಕಾಲ ವಶಕ್ಕೆ ಪಡೆದಿದ್ದರು. ವಿಚಾರಣೆಗೆ ಅವರು ಸಹಕರಿಸುತ್ತಿಲ್ಲವೆಂದು ಪೊಲೀಸರು ಕೋರ್ಟ್​ಗೆ ತಿಳಿಸಿ ಇದೀಗ 14 ದಿನ ಜುಡಿಶಿಯಲ್ ಕಸ್ಟಡಿಗೆ ಪಡೆಯಲಾಗಿದೆ.

ನೂಹ್ ಹಿಂಸಾಚಾರ; ಹರ್ಯಾಣದ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ 14 ದಿನ ಜುಡಿಷಿಯಲ್ ಕಸ್ಟಡಿಗೆ
ರಾಹುಲ್ ಗಾಂಧಿ ಜೊತೆ ಶಾಸಕ ಮಮ್ಮನ್ ಖಾನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 19, 2023 | 2:34 PM

ಗುರುಗ್ರಾಮ್, ಸೆಪ್ಟೆಂಬರ್ 19: ಹರ್ಯಾಣದ ನೂಹ್ ಪಟ್ಟಣದಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಪ್ರಚೋದನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿದ್ದ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ (Congress MLA Mamman Khan) ಅವರನ್ನು 14 ದಿನ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಫಿರೋಜ್​ಪುರ್ ಝಿರ್ಕಾ (Firozpur Jhirka) ಕ್ಷೇತ್ರದ ಶಾಸಕರಾದ ಮಮ್ಮನ್ ಖಾನ್ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಆ ಬಳಿಕ 4 ದಿನಗಳ ಕಾಲ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇಂದು ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ಕೋರ್ಟ್​ಗೆ ಕರೆದೊಯ್ದು ಹಾಜರುಪಡಿಸಲಾಯಿತು. ಈ ವೇಳೆ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ವ್ಯವಸ್ಥೆ ಏರ್ಪಡಿಸಲಾಗಿತ್ತು. ಕೋರ್ಟ್ ಕಡೆಗೆ ಸಾಗುವ ಎಲ್ಲಾ ರಸ್ತೆಗಳಲ್ಲೂ 200ಕ್ಕೂ ಹೆಚ್ಚು ಪೊಲೀಸರ ಕಾವಲು ಇಡಲಾಗಿತ್ತು.

ಮಮ್ಮನ್ ಖಾನ್ ವಿರುದ್ಧ 4 ಪ್ರಕರಣಗಳು ದಾಖಲಾಗಿವೆ. ಜುಲೈ 31ರಂದು ನಾಗಿನಾ ಪ್ರದೇಶದಲ್ಲಿ ಧಾರ್ಮಿಕಯಾತ್ರೆ ನಡೆಸುತ್ತಿದ್ದವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದರು. ಕೋಮು ಹಿಂಸಾಚಾರದಲ್ಲಿ ಆರು ಮಂದಿ ಸಾವನ್ನಪ್ಪಿ 88 ಮಂದಿ ಗಾಯಗೊಂಡಿದ್ದರು. ಈ ದಾಳಿ ಹಿಂದೆ ಇದ್ದ ಶಕ್ತಿಗಳಲ್ಲಿ ಮಮ್ಮನ್ ಖಾನ್ ಒಬ್ಬರು ಎಂಬುದು ನೂಹ್ ಜಿಲ್ಲಾ ಪೊಲೀಸರ ಆರೋಪ. ಅವರ ಫೋನ್ ಮತ್ತು ಲ್ಯಾಪ್​ಟಾಪ್​ಗಳನ್ನು ವಶಕ್ಕೆ ತೆಗೆದುಕೊಂಡು ಪರಿಶೀಲಿಸಲಾಗುತ್ತಿದೆ. ಮಮ್ಮನ್ ಖಾನ್ ಅವರ ಸೋಷಿಯಲ್ ಮೀಡಿಯಾ ಖಾತೆಗಳನ್ನೂ ಪರಿಶೀಲಿಸಲಾಗುತ್ತಿದೆ. ಪ್ರಕರಣದ ಇತರ ಆರೋಪಿಗಳೊಂದಿಗೆ ಕಾಂಗ್ರೆಸ್ ಶಾಸಕರು ಭೇಟಿ ನೀಡಿದ್ದ ಆರೋಪ ಇದ್ದು ಆ ಬಗ್ಗೆ ಸಾಕ್ಷ್ಯಾಧಾರಗಳಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅನಂತನಾಗ್ ಎನ್​ಕೌಂಟರ್; 4ನೇ ಯೋಧನ ಮೃತದೇಹ ಪತ್ತೆ; ಉಗ್ರರ ಅಟ್ಟಹಾಸ ಇಂದೇ ಕೊನೆಗಾಣಿಸಲು ಸೇನೆ ಸಂಕಲ್ಪ

ಮೂಲಗಳ ಪ್ರಕಾರ, ಶುಕ್ರವಾರದ ಬಳಿಕ ಪೊಲೀಸ್ ಕಸ್ಟಡಿಯಲ್ಲಿ ಮಮ್ಮನ್ ಖಾನ್ ಅವರನ್ನು ಎಸ್​ಐಟಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಶೇಷ ತನಿಖಾ ತಂಡ ಕೇಳಿದ ಪ್ರಶ್ನೆಗಳಿಗೆ ಖಾನ್ ಸರಿಯಾಗಿ ಉತ್ತರ ನೀಡುತ್ತಿರಲಿಲ್ಲ ಎನ್ನಲಾಗಿದೆ. ಈ ವಿಚಾರವನ್ನು ಕೋರ್ಟ್ ಮುಂದೆ ಪೊಲೀಸರು ತಿಳಿಸಿದ್ದಾರೆ. ತನಿಖೆಗೆ ಆರೋಪಿ ಸಹಕರಿಸುತ್ತಿಲ್ಲ. ಸತ್ಯಾಂಶಗಳನ್ನು ಮುಚ್ಚಿಡುತ್ತಿದ್ದಾರೆ. ತಮ್ಮ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದಾರೆ ಎಂದು ಪೊಲೀಸರು ದೂರಿದ್ದಾರೆ.

ಹಾಗೆಯೇ, ಫಿರೋಜ್​ಪುರ್ ಝಿರ್ಕಾ ಶಾಸಕ ಮಮ್ಮನ್ ಖಾನ್ ಅವರಿಗೆ ಭದ್ರತೆ ಒದಗಿಸುವ ಭದ್ರತಾ ಸಿಬ್ಬಂದಿಯ ಹೇಳಿಕೆಯನ್ನೂ ಎಸ್​ಐಟಿ ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ