ಜೋಡಿ ಕೊಲೆ ಪ್ರಕರಣದಲ್ಲಿ ಗೋರಕ್ಷಕ ಮೋನು ಮಾನೇಸರ್ ವಶಕ್ಕೆ, 14 ದಿನಗಳ ನ್ಯಾಯಾಂಗ ಬಂಧನ

ನಾಸಿರ್ ಮತ್ತು ಜುನೈದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಈತನನ್ನು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ. ರಾಜಸ್ಥಾನ ಪೊಲೀಸರ ಪ್ರಕಾರ, ನಾಸಿರ್ ಮತ್ತು ಜುನೈದ್ ಹತ್ಯೆಯ ಪ್ರಾಥಮಿಕ ಸಂಚುಕೋರ ಈತ ಎಂದು ಪರಿಗಣಿಸಲಾಗಿದೆ. ಫೆಬ್ರವರಿ 15 ರಂದು ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಘಾಟ್ಮೀಕಾ ಗ್ರಾಮದ ನಾಸಿರ್ ಮತ್ತು ಜುನೈದ್ ಅವರನ್ನು ಗೋರಕ್ಷಕರು ಅಪಹರಿಸಿದ್ದಾರೆ ಎಂದು ವರದಿಯಾಗಿದೆ.

Follow us
ರಶ್ಮಿ ಕಲ್ಲಕಟ್ಟ
|

Updated on: Sep 12, 2023 | 7:16 PM

ದೆಹಲಿ ಸೆಪ್ಟೆಂಬರ್ 12: ಹರ್ಯಾಣ ಪೊಲೀಸರು (Haryana Police) ಮಂಗಳವಾರ ಗೋರಕ್ಷಕ ಮೋನು ಮಾನೇಸರ್​​ನ್ನು (Monu Manesar) ಬಂಧಿಸಿದ್ದಾರೆ. ನಾಸಿರ್-ಜುನೈದ್ ಹತ್ಯೆ ಪ್ರಕರಣಕ್ಕೆ (Nasir-Junaid murder case )ಸಂಬಂಧಿಸಿದಂತೆ ನುಹ್ ಸಿಐಎ ಸಿಬ್ಬಂದಿ ಈತನನ್ನು ಬಂಧಿಸಿದ್ದು ನಂತರ ರಾಜಸ್ಥಾನ ಪೊಲೀಸರಿಗೆ ಹಸ್ತಾಂತರಿಸಲಾಗುವುದು. ಬಜರಂಗ ದಳದೊಂದಿಗೆ ಸಂಬಂಧ ಹೊಂದಿರುವ ಮೋನು ಮಾನೇಸರ್ ಎಂಬಾತನ ಮೇಲೆ ಫೆಬ್ರವರಿಯಲ್ಲಿ ರಾಜಸ್ಥಾನ ಮೂಲದ ಇಬ್ಬರು ಮುಸ್ಲಿಂ ಪುರುಷರನ್ನು ಕೊಂದ ಆರೋಪ ಹೊರಿಸಲಾಗಿತ್ತು. ಐಟಿ ಕಾಯ್ದೆಯ ಜಾಮೀನು ಪಡೆಯಬಹುದಾದ ಸೆಕ್ಷನ್‌ಗಳ ಅಡಿಯಲ್ಲಿ ಮೋನುವನ್ನು ಹರ್ಯಾಣ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸಂಜೆ ಅಥವಾ ನಾಳೆ ಬೆಳಗ್ಗೆ ಜಾಮೀನು ಸಿಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ನಾಸಿರ್ ಮತ್ತು ಜುನೈದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಈತನನ್ನು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ. ರಾಜಸ್ಥಾನ ಪೊಲೀಸರ ಪ್ರಕಾರ, ನಾಸಿರ್ ಮತ್ತು ಜುನೈದ್ ಹತ್ಯೆಯ ಪ್ರಾಥಮಿಕ ಸಂಚುಕೋರ ಈತ ಎಂದು ಪರಿಗಣಿಸಲಾಗಿದೆ. ಫೆಬ್ರವರಿ 15 ರಂದು ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಘಾಟ್ಮೀಕಾ ಗ್ರಾಮದ ನಾಸಿರ್ ಮತ್ತು ಜುನೈದ್ ಅವರನ್ನು ಗೋರಕ್ಷಕರು ಅಪಹರಿಸಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 16 ರಂದು ಹರ್ಯಾಣದ ಲೋಹರು, ಭಿವಾನಿಯಲ್ಲಿ ಸುಟ್ಟ ಕಾರಿನೊಳಗೆ ಇವರಿಬ್ಬರ ಮೃತದೇಹಗಳು ಪತ್ತೆಯಾಗಿತ್ತು.

ಈ ಪ್ರಕರಣದಲ್ಲಿ ರಾಜಸ್ಥಾನ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಮೋನು ಮಾನೇಸರ್​​ನ್ನು ಆರೋಪಿ ಎಂದು ಗುರುತಿಸಲಾಗಿತ್ತು.

ಯಾರು ಈ ಮೋನು ಮಾನೇಸರ್?

ಮೋಹಿತ್ ಯಾದವ್ ಎಂಬ ಮೋನು ಮಾನೇಸರ್ ಗುರುಗ್ರಾಮ್ ಬಳಿಯ ಮಾನೇಸರ್ ನಿವಾಸಿಯಾಗಿದ್ದು, ಪಾಲಿಟೆಕ್ನಿಕ್ ಡಿಪ್ಲೋಮಾ ಓದಿದ್ದಾನೆ. ಈತ ಬಜರಂಗ ದಳಕ್ಕೆ ಸಂಬಂಧಿಸಿದ ಸ್ವಯಂಘೋಷಿತ ಗೋಸಂರಕ್ಷಣಾ ಗುಂಪಿನ ಗೋರಕ್ಷಾ ದಳದ ಮುಖ್ಯಸ್ಥರಾಗಿ ಪರಿಚಿತರು.

ಮೋನು ನಿಯಮಿತವಾಗಿ ತನ್ನ ಅನ್ವೇಷಣೆಗಳ ವಿಡಿಯೊಗಳು ಮತ್ತು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದನು. ಹಸು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ನಂಬಲಾದ ಟ್ರಕ್‌ಗಳನ್ನು ಬೆನ್ನಟ್ಟುವುದು, ಅದರಲ್ಲಿದ್ದ ಜನರಿಗೆ ಶಿಕ್ಷೆಗಳನ್ನು ನೀಡುವುದು ಈತನ ಕೆಲಸ.ಹಸುವಿನ ಸಗಣಿ ತಿನ್ನುವಂತೆ ಒತ್ತಾಯಿಸುವುದು ಈತ ನೀಡುತ್ತಿದ್ದ ಶಿಕ್ಷೆ. ಮಾನೇಸರ್ ತನ್ನ ಕಾರಿನಲ್ಲಿ ತನ್ನ ಸಹಚರರ ಜೊತೆಯಲ್ಲಿ ಶಸ್ತ್ರಾಸ್ತ್ರಗಳನ್ನು ಝಳಪಿಸಿದ್ದೂ ಇದೆ. ಮೋನುಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಅನುಯಾಯಿಗಳು ಇದ್ದಾರೆ. ಈತನ ಕಾರ್ಯಗಳು ಬಹಳಷ್ಟು ಯುವಕರನ್ನು ಗೋರಕ್ಷಣೆಯಲಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ