Haryana Politics: ಹರ್ಯಾಣ ವಿಧಾನಸಭಾ ಚುನಾವಣೆ: ಕೇಜ್ರಿವಾಲ್, ಭಗವಂತ್ ಮಾನ್​ರಿಂದ ತಿರಂಗ ಯಾತ್ರೆ

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann) ತಿರಂಗ ಯಾತ್ರೆ ನಡೆಸಲಿದ್ದಾರೆ.

Haryana Politics: ಹರ್ಯಾಣ ವಿಧಾನಸಭಾ ಚುನಾವಣೆ: ಕೇಜ್ರಿವಾಲ್, ಭಗವಂತ್ ಮಾನ್​ರಿಂದ ತಿರಂಗ ಯಾತ್ರೆ
ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್
Image Credit source: News 18

Updated on: Jun 08, 2023 | 9:58 AM

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann) ತಿರಂಗ ಯಾತ್ರೆ ನಡೆಸಲಿದ್ದಾರೆ. ಇಂದು ಜಿಂದ್ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ, ಎಎಪಿಯ ಹರಿಯಾಣ ಘಟಕದ ಮುಖ್ಯಸ್ಥ ಸುಶೀಲ್ ಕುಮಾರ್ ಗುಪ್ತಾ ಪ್ರಕಾರ, ಈ ಕಾರ್ಯಕ್ರಮವು ಮುಂದಿನ ವರ್ಷ ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಯ ಪಕ್ಷದ ಪ್ರಚಾರದ ಭಾಗವಾಗಿದೆ. ರಾಜ್ಯಸಭಾ ಸಂಸದ ಗುಪ್ತಾ ಮಾತನಾಡಿ, ರಾಜ್ಯದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ, ಅದು ತಿರಂಗಾ ಯಾತ್ರೆ ಮೂಲಕ ಬರಲಿದೆ ಎಂದಿದ್ದಾರೆ.

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ ಆಡಳಿತವನ್ನು ಕಿತ್ತೊಗೆಯಲಾಗುವುದು ಗುಪ್ತಾ ಹೇಳಿದ್ದಾರೆ.

ವಾಸ್ತವವಾಗಿ, ಆಮ್ ಆದ್ಮಿ ಪಕ್ಷವು ದೇಶದ 4 ರಾಜ್ಯಗಳಾದ ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ ಮೇಲೆ ಕೇಂದ್ರೀಕರಿಸಿದೆ. ಆದರೆ, ಹರಿಯಾಣಕ್ಕೂ ಮುನ್ನ ಈ ವರ್ಷ ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಮತ್ತಷ್ಟು ಓದಿ: ಇದು ಅವರ ಕನಸಾಗಿತ್ತು; ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಸಿಸೋಡಿಯಾ ನೆನೆದು ಭಾವುಕರಾದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷವು ಚುನಾವಣಾ ಪ್ರಚಾರಕ್ಕೆ  ಹರ್ಯಾಣವನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಕೆಲವು ವಿಶೇಷ ಕಾರಣಗಳಿವೆ. ಮೊದಲನೆಯದು ದೆಹಲಿ ಮತ್ತು ಪಂಜಾಬ್ ಗಡಿಯಲ್ಲಿರುವ ರಾಜ್ಯ. ಈ ಎರಡೂ ರಾಜ್ಯಗಳಲ್ಲಿ ಪಕ್ಷ ಅಧಿಕಾರದಲ್ಲಿರುವುದರಿಂದ ಹರ್ಯಾಣದಲ್ಲಿ ಉತ್ತಮ ಪರಿಣಾಮ ಬೀರಲಿದೆ ಎಂದು ಪಕ್ಷ ಚಿಂತನೆ ನಡೆಸಿದೆ. ಸಿಕ್ಕಿರುವ ಮಾಹಿತಿ ಪ್ರಕಾರ  ಹರ್ಯಾಣದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದ್ದು, ಚುನಾವಣೆಯಲ್ಲಿ ಇತರೆ ಪಕ್ಷಗಳಿಗೆ ಲಾಭವಾಗಲಿದೆ. ಇದಲ್ಲದೇ ಅರವಿಂದ್ ಕೇಜ್ರಿವಾಲ್ ಅವರ ತವರು ರಾಜ್ಯ ಹರ್ಯಾಣ, ಹಾಗಾಗಿ ಇಲ್ಲಿಂದಲೇ ಯಾತ್ರೆ ಆರಂಭವಾಗಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us