ಹರಿಯಾಣದಲ್ಲಿ ಕಾಂಗ್ರೆಸ್ ಸೋಲು; ರಾಹುಲ್ ಗಾಂಧಿ ಮನೆಗೆ 1 ಕೆಜಿ ಜಿಲೇಬಿ ಕಳುಹಿಸಿದ ಬಿಜೆಪಿ

|

Updated on: Oct 09, 2024 | 3:55 PM

ಹರಿಯಾಣದಲ್ಲಿ ಕಾಂಗ್ರೆಸ್​ಗೆ ಭಾರೀ ಸೋಲುಂಟಾಗಿದೆ. ಹರಿಯಾಣದಲ್ಲಿ ಜಿಲೇಬಿ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಬಿಜೆಪಿ ನಾಯಕರು ಗೇಲಿ ಮಾಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿಯ ಅನಿರೀಕ್ಷಿತ ವಿಜಯದ ನಂತರ ಬಿಜೆಪಿ ಬೆಂಬಲಿಗರು ರಾಹುಲ್ ಗಾಂಧಿಯವರ ಜಿಲೇಬಿ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್ ಸೋಲು; ರಾಹುಲ್ ಗಾಂಧಿ ಮನೆಗೆ 1 ಕೆಜಿ ಜಿಲೇಬಿ ಕಳುಹಿಸಿದ ಬಿಜೆಪಿ
ರಾಹುಲ್ ಗಾಂಧಿ
Follow us on

ನವದೆಹಲಿ: ಹರಿಯಾಣ ಬಿಜೆಪಿ ಘಟಕವು ಮಂಗಳವಾರ ಐತಿಹಾಸಿಕ ಮೂರನೇ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದನ್ನು ಸಂಭ್ರಮದಿಂದ ಆಚರಿಸಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಅವರ ದೆಹಲಿ ಕಚೇರಿಗೆ ಬಿಜೆಪಿ 1 ಕೆಜಿ ಜಿಲೇಬಿಯನ್ನು ಕಳುಹಿಸಿದೆ. ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಜಿಲೇಬಿ ಟ್ರೆಂಡಿಂಗ್​ನಲ್ಲಿದೆ.

ಹರಿಯಾಣದಲ್ಲಿ ಭಾರತೀಯ ಜನತಾ ಪಕ್ಷದ ಎಲ್ಲಾ ಕಾರ್ಯಕರ್ತರ ಪರವಾಗಿ ರಾಹುಲ್ ಗಾಂಧಿಯವರ ಮನೆಗೆ ಜಿಲೇಬಿಯನ್ನು ಕಳುಹಿಸಲಾಗಿದೆ ಎಂದು ಬಿಜೆಪಿ ಎಕ್ಸ್‌ನಲ್ಲಿ ತಿಳಿಸಿದೆ. ದೆಹಲಿ ಮೂಲದ ಫುಡ್ ಡೆಲಿವರಿ ಆ್ಯಪ್ ಆದ ಸ್ವಿಗ್ಗಿಯ ಅಪ್ಲಿಕೇಶನ್‌ನ ಸ್ಕ್ರೀನ್‌ಶಾಟ್ ಅನ್ನು ಎಕ್ಸ್​ನಲ್ಲಿ ಲಗತ್ತಿಸಲಾಗಿದೆ. ರಾಹುಲ್ ಗಾಂಧಿಗೆ ಸ್ವಿಗ್ಗಿಯಲ್ಲಿ ಜಿಲೇಬಿ ಕಳುಹಿಸಲಾಗಿದ್ದು, ಕ್ಯಾಶ್ ಆನ್ ಡೆಲಿವರಿ ಆಯ್ಕೆ ನೀಡಲಾಗಿದೆ! ರಾಹುಲ್ ಗಾಂಧಿಯವರೇ ಹಣ ಪಾವತಿಸಿ ಈ ಜಿಲೇಬಿ ಬಾಕ್ಸ್​ ಪಡೆಯಬೇಕಾಗುತ್ತದೆ.

ಇದನ್ನೂ ಓದಿ: ‘ಹರಿಯಾಣದ ಗೆಲುವು ದೇಶಾದ್ಯಂತ ಪ್ರತಿಧ್ವನಿಸಲಿದೆ’; ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಪ್ರಚಾರದ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಜಿಲೇಬಿಯನ್ನು ದೇಶಾದ್ಯಂತ ಬೃಹತ್ ಪ್ರಮಾಣದಲ್ಲಿ ತಯಾರಿಸಿ ಮಾರಾಟ ಮಾಡುವುದರ ಜೊತೆಗೆ ಉದ್ಯೋಗ ಮತ್ತು ಆದಾಯವನ್ನು ಸೃಷ್ಟಿಸಲು ರಫ್ತು ಮಾಡಲಾಗುತ್ತಿದೆ ಎಂದು ಮಾತನಾಡಿದ್ದರು. ಕೇಂದ್ರದ ಜಿಎಸ್‌ಟಿ ಅಥವಾ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯಿಂದ ಜಿಲೇಬಿ ಮಾರಾಟಗಾರರು ಹಾನಿಗೊಳಗಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.


ಎಕ್ಸಿಟ್ ಪೋಲ್‌ಗಳು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿತ್ತು. ಮಂಗಳವಾರ ಕಾಂಗ್ರೆಸ್​ ಆರಂಭಿಕ ಮುನ್ನಡೆ ಸಾಧಿಸುತ್ತಿದ್ದಂತೆ, ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಯಿತು. ಕಾಂಗ್ರೆಸ್ ಕಾರ್ಯಕರ್ತರು ಧೋಲ್ ಸಂಗೀತಕ್ಕೆ ಕುಣಿದು ಕುಪ್ಪಳಿಸುತ್ತಾ ಪರಸ್ಪರ ಜಿಲೇಬಿಗಳನ್ನು ತಿನ್ನಿಸುತ್ತಾ ತಮ್ಮ ಗೆಲುವಿನ ಸಂಭ್ರಮವನ್ನು ಆಚರಿಸುತ್ತಿರುವುದು ಕಂಡುಬಂದಿತು. ಆದರೆ ಮಧ್ಯಾಹ್ನದ ಬಳಿಕ ಬಿಜೆಪಿ ಮುನ್ನಡೆ ಸಾಧಿಸಿ ಗೆಲುವಿನ ನಗೆ ಬೀರಿತು. ಅದಾದ ಬಳಿಕ ‘ಜಿಲೇಬಿ’ ಎಂಬ ಪದವು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಲು ಪ್ರಾರಂಭಿಸಿತು. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಅನ್ನು ಕೆಣಕಲು ಜಿಲೇಬಿಯನ್ನು ಬಳಸಿದರು.

ಇದನ್ನೂ ಓದಿ: ಹಿಂದೂಗಳ ನಡುವೆ ಜಗಳ ತರಲು ಕಾಂಗ್ರೆಸ್‌ ಷಡ್ಯಂತ್ರ; ಮೋದಿ ಆರೋಪ

ಕೆಲವು ಬಿಜೆಪಿ ನಾಯಕರು ಜಿಲೇಬಿ ತಿನ್ನುತ್ತಿರುವ ಫೋಟೋಗಳನ್ನು ಪೋಸ್ಟ್ ಮಾಡಿದರೆ, ಇನ್ನು ಕೆಲವರು ತಮ್ಮ ಭರ್ಜರಿ ಗೆಲುವನ್ನು ಆಚರಿಸಲು ಜಿಲೇಬಿ ಮಾಡಲು ಪ್ರಯತ್ನಿಸಿದರು. ಅಸ್ಸಾಂ ಬಿಜೆಪಿ ಸದಸ್ಯರೊಬ್ಬರು ಶೇರ್ ಮಾಡಿರುವ ವಿಡಿಯೋದಲ್ಲಿ ಪಕ್ಷದ ಕಾರ್ಯಕರ್ತರೊಬ್ಬರು ಕೈಯಲ್ಲಿ ಜಿಲೇಬಿ ಪ್ಯಾಕೆಟ್ ಹಿಡಿದುಕೊಂಡು ಲಖಿಂಪುರದ ಕಾಂಗ್ರೆಸ್ ಕಚೇರಿಗೆ ತೆರಳುತ್ತಿರುವುದನ್ನು ಕಾಣಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ