ಹರ್ಯಾಣ: 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿ, ಆರು ಮಕ್ಕಳು ಸಾವು
ಹರ್ಯಾಣದಲ್ಲಿ 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿಯಾಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹರ್ಯಾಣದಲ್ಲಿ 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿಯಾಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಐದು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನೂ ಹತ್ತಾರು ಮಕ್ಕಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಜಿಲ್ಲೆಯ ಕನಿನಾ ಉಪವಿಭಾಗದ ಉನ್ಹಾನಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅಪಘಾತದ ವಿಡಿಯೋ ಕೂಡ ಹೊರಬಿದ್ದಿದ್ದು, ಭಯಾನಕವಾಗಿದೆ. ಅಚ್ಚರಿಯ ಸಂಗತಿ ಎಂದರೆ ಸರ್ಕಾರಿ ರಜೆ ಇದ್ದರೂ ಶಾಲೆ ತೆರೆದಿತ್ತು.
ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಇದಾದ ನಂತರ ಮಕ್ಕಳನ್ನು ತರಾತುರಿಯಲ್ಲಿ ಆಸ್ಪತ್ರೆಗೆ ಕಳುಹಿಸಲಾಯಿತು. ಮಾಹಿತಿಯ ನಂತರ ಪೊಲೀಸ್ ಮತ್ತು ಆಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಅಪಘಾತಕ್ಕೆ ಚಾಲಕ ಓವರ್ಟೇಕ್ ಮಾಡಿದ್ದೇ ಕಾರಣ ಎನ್ನಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:36 am, Thu, 11 April 24