ಹರ್ಯಾಣ: 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ, ಆರು ಮಕ್ಕಳು ಸಾವು

ಹರ್ಯಾಣದಲ್ಲಿ 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿಯಾಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹರ್ಯಾಣ: 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ, ಆರು ಮಕ್ಕಳು ಸಾವು
ಬಸ್​ ಪಲ್ಟಿ
Image Credit source: India TV

Updated on: Apr 11, 2024 | 11:03 AM

ಹರ್ಯಾಣದಲ್ಲಿ 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿಯಾಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಐದು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನೂ ಹತ್ತಾರು ಮಕ್ಕಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಜಿಲ್ಲೆಯ ಕನಿನಾ ಉಪವಿಭಾಗದ ಉನ್ಹಾನಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅಪಘಾತದ ವಿಡಿಯೋ ಕೂಡ ಹೊರಬಿದ್ದಿದ್ದು, ಭಯಾನಕವಾಗಿದೆ. ಅಚ್ಚರಿಯ ಸಂಗತಿ ಎಂದರೆ ಸರ್ಕಾರಿ ರಜೆ ಇದ್ದರೂ ಶಾಲೆ ತೆರೆದಿತ್ತು.

ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಇದಾದ ನಂತರ ಮಕ್ಕಳನ್ನು ತರಾತುರಿಯಲ್ಲಿ ಆಸ್ಪತ್ರೆಗೆ ಕಳುಹಿಸಲಾಯಿತು. ಮಾಹಿತಿಯ ನಂತರ ಪೊಲೀಸ್ ಮತ್ತು ಆಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಅಪಘಾತಕ್ಕೆ ಚಾಲಕ ಓವರ್​ಟೇಕ್​ ಮಾಡಿದ್ದೇ ಕಾರಣ ಎನ್ನಲಾಗಿದೆ.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:36 am, Thu, 11 April 24

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us