AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣದಲ್ಲಿ ಕೋಮು ಗಲಭೆ; ಪ್ರೀತಿಯಿಂದ ಮಾತ್ರ ಈ ಬೆಂಕಿಯನ್ನು ನಂದಿಸಲು ಸಾಧ್ಯ: ರಾಹುಲ್ ಗಾಂಧಿ

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ, ಬಿಜೆಪಿ, ಮಾಧ್ಯಮಗಳು ಮತ್ತು ಅವರೊಂದಿಗೆ ನಿಂತಿರುವ ಶಕ್ತಿಗಳು ದೇಶದಾದ್ಯಂತ ದ್ವೇಷದ ಸೀಮೆಎಣ್ಣೆಯನ್ನು ಹರಡಿವೆ. ಪ್ರೀತಿಯಿಂದ ಮಾತ್ರ ದೇಶದಲ್ಲಿ ಈ ಬೆಂಕಿಯನ್ನು ನಂದಿಸಲು ಸಾಧ್ಯ ಎಂದಿದ್ದಾರೆ.

ಹರ್ಯಾಣದಲ್ಲಿ ಕೋಮು ಗಲಭೆ; ಪ್ರೀತಿಯಿಂದ ಮಾತ್ರ ಈ ಬೆಂಕಿಯನ್ನು ನಂದಿಸಲು ಸಾಧ್ಯ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Aug 01, 2023 | 8:30 PM

Share

ದೆಹಲಿ ಜುಲೈ 01: ಚಲಿಸುವ ರೈಲಿನಲ್ಲಿ ಆರ್‌ಪಿಎಫ್ ಕಾನ್‌ಸ್ಟೆಬಲ್‌ ನಡೆಸಿದ ಗುಂಡಿನ ದಾಳಿ ಮತ್ತು ಹರ್ಯಾಣದಲ್ಲಿನ (Haryana) ಕೋಮು ಸಂಘರ್ಷ ನಂತರ ಕಾಂಗ್ರೆಸ್ (Congress) ಹಿರಿಯ ನಾಯಕ ರಾಹುಲ್ ಗಾಂಧಿ (Rahul Gandhi) ಮಂಗಳವಾರ ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರೀತಿಯಿಂದ ಮಾತ್ರ ಈ ಬೆಂಕಿಯನ್ನು ನಂದಿಸಲು ಸಾಧ್ಯ ಎಂದು ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ, ಬಿಜೆಪಿ, ಮಾಧ್ಯಮಗಳು ಮತ್ತು ಅವರೊಂದಿಗೆ ನಿಂತಿರುವ ಶಕ್ತಿಗಳು ದೇಶದಾದ್ಯಂತ ದ್ವೇಷದ ಸೀಮೆಎಣ್ಣೆಯನ್ನು ಹರಡಿವೆ. ಪ್ರೀತಿಯಿಂದ ಮಾತ್ರ ದೇಶದಲ್ಲಿ ಈ ಬೆಂಕಿಯನ್ನು ನಂದಿಸಲು ಸಾಧ್ಯ ಎಂದಿದ್ದಾರೆ.

ಪೊಲೀಸರ ಪ್ರಕಾರ ಮುಸ್ಲಿಂ ಪ್ರಾಬಲ್ಯದ ನುಹ್ ಜಿಲ್ಲೆಯಲ್ಲಿ ಮೊದಲು ಕೋಮುಗಲಭೆ ಭುಗಿಲೆದ್ದಿದ್ದು, ಜನರ ಗುಂಪು ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆಯನ್ನು ತಡೆಯಲು, ಕಲ್ಲು ತೂರಾಟ ಮಾಡಿತ್ತು. ಇದಾದ ನಂತರ ಕಾರುಗಳಿಗೆ ಬೆಂಕಿ ಹಚ್ಚಲು ಪ್ರಯತ್ನಿಸಿತು. ಮಂಗಳವಾರ ಅಧಿಕಾರಿಗಳು ನುಹ್‌ನಲ್ಲಿ ಕರ್ಫ್ಯೂ ವಿಧಿಸಿದ್ದು, ಸೋಮವಾರ ಇಬ್ಬರು ಹೋಮ್ ಗಾರ್ಡ್ ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ.

ಇದಾದ ನಂತರ ಗುಂಪು ಮಸೀದಿಯೊಂದರ ಮೇಲೆ ದಾಳಿ ಮಾಡಿ ಇಮಾಮ್ ಹತ್ಯೆ ನಡೆಸಿದ್ದು, ಹಿಂಸಾಚಾರವು ಗುರುಗ್ರಾಮ್‌ಗೆ ಹರಡಿತು. ನುಹ್ ಜಿಲ್ಲೆಯಲ್ಲಿ ವಿಎಚ್‌ಪಿ ಮೆರವಣಿಗೆಯನ್ನು ನಿಲ್ಲಿಸುವ ಪ್ರಯತ್ನದ ಮೇಲೆ ಭುಗಿಲೆದ್ದ ಹಿಂಸಾಚಾರದಲ್ಲಿ ಇಲ್ಲಿಯವರೆಗೆ ಐವರು ಸಾವಿಗೀಡಾಗಿದ್ದಾರೆ.

ಗುರುಗ್ರಾಮ್‌ನಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಆಡಳಿತ ಹೇಳುತ್ತಿರುವಾಗಲೇ, ಕೋಮುಗಲಭೆಯ ಹೊಸ ಪ್ರಕರಣದಲ್ಲಿ ಮಂಗಳವಾರ ಮಧ್ಯಾಹ್ನ ಬಾದ್ ಶಾಹ್ ಪುರದಲ್ಲಿ ಗುಂಪೊಂದು ಉಪಾಹಾರ ಗೃಹಕ್ಕೆ ಬೆಂಕಿ ಹಚ್ಚಿದ್ದು, ಪಕ್ಕದ ಅಂಗಡಿಗಳನ್ನು ಧ್ವಂಸಗೊಳಿಸಿತು.

ಸೋಮವಾರ ಬೆಳಿಗ್ಗೆ, ಮುಂಬೈಗೆ ಹೋಗುವ ರೈಲಿನಲ್ಲಿ ಆರ್‌ಪಿಎಫ್ ಕಾನ್‌ಸ್ಟೆಬಲ್‌ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರ ಹತ್ಯೆಯಾಗಿದೆ. ಮುಂಬೈನ ಹೊರವಲಯದಲ್ಲಿರುವ ಪಾಲ್ಘರ್ ನಿಲ್ದಾಣದ ಬಳಿ ಆರ್‌ಪಿಎಫ್ ಕಾನ್‌ಸ್ಟೆಬಲ್ ಚೇತನ್ ಸಿಂಗ್ ತನ್ನ ಹಿರಿಯ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಟಿಕಾರಾಂ ಮೀನಾ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದಿದ್ದಾರೆ. ಮೂವರು ಪ್ರಯಾಣಿಕರು ಗಡ್ಡಧಾರಿ ಮುಸ್ಲಿಮರಾಗಿದ್ದರು.

ಇದನ್ನೂ ಓದಿ:ಗುರುಗ್ರಾಮ್‌ನ ಬಾದ್‌ಶಾಹ್‌ಪುರದಲ್ಲಿ ಭುಗಿಲೆದ್ದ ಹಿಂಸಾಚಾರ; 14 ಅಂಗಡಿಗಳು ಧ್ವಂಸ; ಏಳು ಅಂಗಡಿಗಳಿಗೆ ಬೆಂಕಿ

ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೋಮವಾರ ನಡೆದ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು ರೈಲ್ವೆ ಮಂಡಳಿಯು ಐವರು ಸದಸ್ಯರ ಸಮಿತಿಯನ್ನು ರಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ