AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ರಾಸ್​ ಗ್ಯಾಂಗ್​ರೇಪ್: ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿರುವುದು ನಿಜ ಎಂದು ಸಿಬಿಐ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ ಮಾಡಿದೆ.

ಹತ್ರಾಸ್​ ಗ್ಯಾಂಗ್​ರೇಪ್: ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್
ಹತ್ರಾಸ್​ನಲ್ಲಿ ಬಾಲಕಿ ಶವ ಸುಟ್ಟ ಪೊಲೀಸ್ ಅಧಿಕಾರಿಗಳು (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on:Dec 18, 2020 | 4:40 PM

Share

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಆರೋಪಿಗಳ ವಿರುದ್ಧ ಅತ್ಯಾಚಾರ-ಕೊಲೆ ಪ್ರಕರಣ ದಾಖಲಾಗಿದೆ.

ಈ ಮೊದಲು ವರದಿ ನೀಡಿದ್ದ ಸಿಬಿಐ, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಹೇಳಿತ್ತು. ಆದರೆ, ಈಗ ಹೆಚ್ಚಿನ ತನಿಖೆ ನಡೆಸಿರುವ ಸಿಬಿಐ, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿರುವುದು ನಿಜ ಎಂದು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ ಮಾಡಿದೆ.

ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ಸೆಕ್ಷನ್​ 376 ಡಿ, ಸೆಕ್ಷನ್​ 302 ಸೆಕ್ಷನ್​ 354 ಹಾಗೂ 376 ಎ ಅಡಿಯಲ್ಲಿ ಸಿಬಿಐ ದೂರು ದಾಖಲು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂದೀಪ್​, ಲವಕುಶ್, ರವಿ ಹಾಗೂ ರಾಮು ಅವರನ್ನು ಬಂಧಿಸಲಾಗಿತ್ತು.

ಸೆ.14ರಂದು ಉತ್ತರ ಪ್ರದೇಶದ ಹತ್ರಾಸ್​ನಲ್ಲಿ 19 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿತ್ತು. ನಂತರ ಈಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೆ.29ರಂದು ಬಾಲಕಿ ಮೃತಪಟ್ಟಿದ್ದಳು. ಬಾಲಕಿ ಶವವನ್ನು ಕುಟುಂಬದವರಿಗೂ ನಿಡದೆಯೇ ಅಂತ್ಯ ಸಂಸ್ಕಾರ ಮಾಡಿದ್ದಕ್ಕೆ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ಅಲ್ಲದೆ, ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂದಿತ್ತು. ಒತ್ತಡ ಹೆಚ್ಚಿದ ನಂತರದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಿದ್ದರು.

ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣ: ತನಿಖೆಯ ಹೊಣೆ CBIಗೆ ವಹಿಸಿದ ಯುಪಿ ಸರ್ಕಾರ

Published On - 4:39 pm, Fri, 18 December 20

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More