ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಆರೋಪಿಗಳ ವಿರುದ್ಧ ಅತ್ಯಾಚಾರ-ಕೊಲೆ ಪ್ರಕರಣ ದಾಖಲಾಗಿದೆ.
ಈ ಮೊದಲು ವರದಿ ನೀಡಿದ್ದ ಸಿಬಿಐ, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಹೇಳಿತ್ತು. ಆದರೆ, ಈಗ ಹೆಚ್ಚಿನ ತನಿಖೆ ನಡೆಸಿರುವ ಸಿಬಿಐ, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿರುವುದು ನಿಜ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಮಾಡಿದೆ.
ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೆಕ್ಷನ್ 376 ಡಿ, ಸೆಕ್ಷನ್ 302 ಸೆಕ್ಷನ್ 354 ಹಾಗೂ 376 ಎ ಅಡಿಯಲ್ಲಿ ಸಿಬಿಐ ದೂರು ದಾಖಲು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂದೀಪ್, ಲವಕುಶ್, ರವಿ ಹಾಗೂ ರಾಮು ಅವರನ್ನು ಬಂಧಿಸಲಾಗಿತ್ತು.
ಸೆ.14ರಂದು ಉತ್ತರ ಪ್ರದೇಶದ ಹತ್ರಾಸ್ನಲ್ಲಿ 19 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿತ್ತು. ನಂತರ ಈಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೆ.29ರಂದು ಬಾಲಕಿ ಮೃತಪಟ್ಟಿದ್ದಳು. ಬಾಲಕಿ ಶವವನ್ನು ಕುಟುಂಬದವರಿಗೂ ನಿಡದೆಯೇ ಅಂತ್ಯ ಸಂಸ್ಕಾರ ಮಾಡಿದ್ದಕ್ಕೆ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ಅಲ್ಲದೆ, ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂದಿತ್ತು. ಒತ್ತಡ ಹೆಚ್ಚಿದ ನಂತರದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಿದ್ದರು.
ಹತ್ರಾಸ್ ಅತ್ಯಾಚಾರ-ಕೊಲೆ ಪ್ರಕರಣ: ತನಿಖೆಯ ಹೊಣೆ CBIಗೆ ವಹಿಸಿದ ಯುಪಿ ಸರ್ಕಾರ
Published On - 4:39 pm, Fri, 18 December 20