ಹತ್ರಾಸ್ ಬರ್ಬರ ಘಟನೆ: ಯೋಗಿ ಸರ್ಕಾರ ವಿರುದ್ಧ ಭುಗಿಲೆದ್ದ ಆಕ್ರೋಶ

ಉತ್ತರಪ್ರದೇಶದ ಹತ್ರಾಸ್​ನಲ್ಲಿ 19 ವರ್ಷದ ಯುವತಿ ಮೇಲೆ ಮಾನವ ರೂಪಿ ರಾಕ್ಷಸರು ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆಮಾಡಿದ ಪ್ರಕರಣ ಇಡೀ ರಾಷ್ಟ್ರವನ್ನೇ ಕೆರಳಿಸಿದೆ. ಉತ್ತರಪ್ರದೇಶವನ್ನು ರಾಮ ರಾಜ್ಯವನ್ನಾಗಿಸುತ್ತೇನೆ ಅಂತ ದಿನಬೆಳಗಾದರೆ ಬೊಗಳೆ ಬಿಡುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತದ ರಾಜ್ಯದಲ್ಲಿ ಈಗ ಅಕ್ಷರಶ: ಕಾಮ ಪಿಶಾಚಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಮರ್ಯಾದಾ ಪುರುಷೋತ್ತಮ ರಾಮನ ನಾಡಿನಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ. ಅಲ್ಲದೆ ನತದೃಷ್ಟ ಯುವತಿಯನ್ನು ಧಾರ್ಮಿಕ ವಿಧಿವಿಧಾನಗಳಿಲ್ಲದೆ ಪೊಲೀಸರೇ ಅಂತ್ಯಸಂಸ್ಕಾರ ನಡೆಸಿದ್ದು ಪ್ರತಿಯೊಬ್ಬ ಭಾರತೀಯನನ್ನು ರೊಚ್ಚಿಗೆಬ್ಬಿಸಿದೆ. ಸೆಪ್ಟೆಂಬರ್ 14ರಂದು ಹತ್ರಾಸ್​ನ […]

ಹತ್ರಾಸ್ ಬರ್ಬರ ಘಟನೆ: ಯೋಗಿ ಸರ್ಕಾರ ವಿರುದ್ಧ ಭುಗಿಲೆದ್ದ ಆಕ್ರೋಶ
Follow us
ಅರುಣ್​ ಕುಮಾರ್​ ಬೆಳ್ಳಿ
| Updated By: ಸಾಧು ಶ್ರೀನಾಥ್​

Updated on:Oct 02, 2020 | 8:29 AM

ಉತ್ತರಪ್ರದೇಶದ ಹತ್ರಾಸ್​ನಲ್ಲಿ 19 ವರ್ಷದ ಯುವತಿ ಮೇಲೆ ಮಾನವ ರೂಪಿ ರಾಕ್ಷಸರು ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆಮಾಡಿದ ಪ್ರಕರಣ ಇಡೀ ರಾಷ್ಟ್ರವನ್ನೇ ಕೆರಳಿಸಿದೆ. ಉತ್ತರಪ್ರದೇಶವನ್ನು ರಾಮ ರಾಜ್ಯವನ್ನಾಗಿಸುತ್ತೇನೆ ಅಂತ ದಿನಬೆಳಗಾದರೆ ಬೊಗಳೆ ಬಿಡುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತದ ರಾಜ್ಯದಲ್ಲಿ ಈಗ ಅಕ್ಷರಶ: ಕಾಮ ಪಿಶಾಚಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಮರ್ಯಾದಾ ಪುರುಷೋತ್ತಮ ರಾಮನ ನಾಡಿನಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ. ಅಲ್ಲದೆ ನತದೃಷ್ಟ ಯುವತಿಯನ್ನು ಧಾರ್ಮಿಕ ವಿಧಿವಿಧಾನಗಳಿಲ್ಲದೆ ಪೊಲೀಸರೇ ಅಂತ್ಯಸಂಸ್ಕಾರ ನಡೆಸಿದ್ದು ಪ್ರತಿಯೊಬ್ಬ ಭಾರತೀಯನನ್ನು ರೊಚ್ಚಿಗೆಬ್ಬಿಸಿದೆ.

ಸೆಪ್ಟೆಂಬರ್ 14ರಂದು ಹತ್ರಾಸ್​ನ ಜಮೀನೊಂದರಲ್ಲಿ ಕೆಲಸ ಮಾಡ್ತಿದ್ದ ದಲಿತ ಯುವತಿಯ ಮೇಲೆ ನಾಲ್ವರು ಕಾಮುಕರು ಪೈಶಾಚಿಕವಾಗಿ ಅತ್ಯಾಚಾರವೆಸಗಿದ್ದೂ ಅಲ್ಲದೆ, ಆಕೆಯ ಮೇಲೆ ಭೀಕರವಾಗಿ ಹಲ್ಲೆ ಕೂಡ ನಡೆಸಿದ್ದರು. ರಕ್ತದ ಮಡುವಿನಲ್ಲಿ ಬೆತ್ತಲೆಯಾಗಿ ಬಿದ್ದಿದ್ದ ಯುವತಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆಕೆಯನ್ನು ದೆಹಲಿಯ ಏಮ್ಸ್​ಗೆ ಸಹ ಸ್ಥಳಾಂತರಿಸಲಾಗಿತ್ತು. ಆದರೆ ಅಲ್ಲೂ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಆಕೆ ಕೊನೆಯುಸಿರೆಳೆದಳು.

ಆಕೆಯ ಮೃತದೇಹವನ್ನ ಗ್ರಾಮಕ್ಕೆ ತೆಗೆದುಕೊಂಡು ಬಂದ ಪೊಲೀಸರು ಹೆತ್ತವರಿಗೂ ಕೊನೆಯ ಬಾರಿಗೆ ಒಮ್ಮೆ ನೋಡಲು ಬಿಡಲಿಲ್ಲ. ಅವರು ಆ್ಯಂಬುಲೆನ್ಸ್​ಗೆ ಅಡ್ಡಗಟ್ಟಿ ಅಂಗಾಲಾಚಿದರೂ ಖಾಕಿಧಾರಿಗಳ ಮನಸ್ಸು ಕರಗಿರಲಿಲ್ಲ. ಅಂತ್ಯಸಂಸ್ಕಾರದ ಯಾವ ಶಾಸ್ತ್ರವನ್ನೂ ಮಾಡಲು ಅವರಿಗೆ ಅವಕಾಶ ನೀಡಲಿಲ್ಲ. ಕುಟುಂಬಸ್ಥರ ಇಚ್ಛೆಗೆ ವಿರುದ್ಧವಾಗಿ ಪೊಲೀಸರೇ ಮೃತದೇಹವನ್ನ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ನಡೆಸಿದರು.

ಅಷ್ಟು ಮಾತ್ರವಲ್ಲ, ಘಟನೆ ವೇಳೆ ಸ್ಥಳದಲ್ಲಿದ್ದ ಮಾಧ್ಯಮಗಳ ಎದುರೇ, ಯುವತಿಯ ಕುಟುಂಬದವರಿಗೆ ಬೆದರಿಕೆ ಹಾಕಿದ್ದಾರೆ. ‘ಮಾಧ್ಯಮಗಳು ಯಾವಗಲೂ ನಿಮ್ಮ ಜೊತೆ ಇರಲ್ಲ, ಆದ್ರೆ ನೀವು ಇಲ್ಲೇ ಬದುಕಬೇಕು, ಆಲೋಚಿಸಿ’ ಅಂತ ಅಧಿಕಾರಿಯೊಬ್ಬ ಅವರಿಗೆ ಹೆದರಿಸಿದ್ದಾನೆ. ಪೊಲೀಸರ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಯಾರನ್ನೋ ರಕ್ಷಿಸುವುದಕ್ಕಾಗಿ ಈ ರೀತಿ ಮಾಡಿದ್ದಾರೆ ಎಂಬ ಸಂಶಯ ದಟ್ಟವಾಗುತ್ತಿದೆ. ಪೊಲೀಸರು ಅದ್ಹೇಗೆ ಕಟುಕರಂತೆ ಅಷ್ಟು ಅಮಾನವೀಯವಾಗಿ ವರ್ತಿಸಿದರು ಎನ್ನುವ ಪ್ರಶ್ನೆ ಉದ್ಭವಿಸಿದೆ.

ಈ ಮಧ್ಯೆ, ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಂತ್ರಸ್ತೆ ಯುವತಿ ಕುಟುಂಬಸ್ಥರ ಭೇಟಿಗೆ ಮುಂದಾಗಿದ್ದರು. ಹತ್ರಾಸ್​ಗೆ ತೆರಳಿದ್ದ ರಾಹುಲ್​, ಪ್ರಿಯಾಂಕಾರನ್ನ ಮಾರ್ಗ ಮಧ್ಯೆಯೇ ಪೊಲೀಸರು ತಡೆದಿದ್ದಾರೆ. ಯಮುನಾ ಎಕ್ಸ್​​ಪ್ರೆಸ್ ಹೈವೇನಲ್ಲಿ ತಳ್ಳಾಟ ನೂಕಾಟದ ವೇಳೆ ರಾಹುಲ್ ನೆಲಕ್ಕೆ ಬಿದ್ದರು. ನಂತರ ಅವರಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಗೆಸ್ಟ್ ಹೌಸ್ ಒಂದರಲ್ಲಿ ಕೂಡಿ ಹಾಕಿದ್ದರು. ಆಮೇಲೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ದೇಶದಲ್ಲಿ ಕೇವಲ ಮೋದಿ ಮಾತ್ರ ಓಡಾಡೋಕೆ ಅವಕಾಶನಾ ಅಂತಾ ಕೆಂಡಕಾರಿದರು.

ಮನುಕುಲವೇ ತಲೆತಗ್ಗಿಸುವಂತೆ ಮಾಡಿ ಜನರ ಎದೆ ನಡುಗಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಹುಜನ ಸಮಾಜ ಪಕ್ಷದ ಮಾಯಾವತಿ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಹಲವಾರು ವಿರೋಧಪಕ್ಷಗಳ ನಾಯಕರು ಯೋಗಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ಮಧ್ಯೆ, ಉತ್ತರಪ್ರದೇಶದ ಬಲರಾಮ್​ಪುರದಲ್ಲಿ ಅತ್ಯಾಚಾರಕ್ಕೊಳಗಾದ 22 ವರ್ಷದ ಇನ್ನೊಬ್ಬ ಯುವತಿ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದ್ದು ಯೋಗಿ ಆಡಳಿತದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

Published On - 11:23 pm, Thu, 1 October 20

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು