Hathras stampede: ಹತ್ರಾಸ್ ಕಾಲ್ತುಳಿತ; ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು

Hathras stampede Tragedy: ಉತ್ತರ ಪ್ರದೇಶದ ಹತ್ರಾಸ್‌ನ ಫುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ 116 ಭಕ್ತರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಡ್ಯೂಟಿಯಲ್ಲಿದ್ದ ರಜನೀಶ್ ಎಂಬ ಪೊಲೀಸ್ ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಹೆಣಗಳ ರಾಶಿ ನೋಡಿದ ನಂತರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Hathras stampede: ಹತ್ರಾಸ್ ಕಾಲ್ತುಳಿತ; ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು
ಹತ್ರಾಸ್ ಕಾಲ್ತುಳಿತ ದುರಂತ
Follow us
ಸುಷ್ಮಾ ಚಕ್ರೆ
|

Updated on: Jul 02, 2024 | 10:54 PM

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಇಂದು ನಡೆದ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 116 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಆಸ್ಪತ್ರೆಯಲ್ಲಿ ಭದ್ರತಾ ಡ್ಯೂಟಿಗೆ ನಿಯೋಜನೆಯಾಗಿದ್ದ ರಜನೀಶ್ ಎಂಬ ಪೋಲೀಸ್ ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಬಿದ್ದಿದ್ದ ಹೆಣಗಳ ರಾಶಿಯನ್ನು ನೋಡಿದ ನಂತರ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಟಾಹ್ ಮೆಡಿಕಲ್ ಕಾಲೇಜಿನಲ್ಲಿ ತುರ್ತು ಕರ್ತವ್ಯದಲ್ಲಿದ್ದ ಪೊಲೀಸ್ ರಜನೀಶ್ ಮೃತದೇಹಗಳ ರಾಶಿಯನ್ನು ನೋಡಿ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರು ಅವಘರ್‌ನಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ಭಾಗವಾಗಿದ್ದರು. ತುರ್ತು ಕರ್ತವ್ಯಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆಸಲಾಗಿತ್ತು. ಆದರೆ, ಅಲ್ಲಿ ಬಿದ್ದಿದ್ದ ಹೆಣಗಳು ಮತ್ತು ಗೋಳಾಡುತ್ತಿದ್ದ ಸಾವಿರಾರು ಜನರನ್ನು ನೋಡಿ ಹೃದಯಾಘಾತಕ್ಕೊಳಗಾಗಿ ಅವರು ಮೃತಪಟ್ಟಿದ್ದಾರೆ. 

ಹತ್ರಾಸ್ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅನೇಕ ಭಕ್ತರ ಸಾವಿನ ಸುದ್ದಿ ಹೃದಯ ವಿದ್ರಾವಕವಾಗಿದೆ. ಅವರ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Hathras Tragedy: ಹತ್ರಾಸ್ ಕಾಲ್ತುಳಿತದ ಸಾವಿನ ಸಂಖ್ಯೆ 116ಕ್ಕೆ ಏರಿಕೆ; ಉನ್ನತ ಮಟ್ಟದ ತನಿಖೆಗೆ ಸಿಎಂ ಯೋಗಿ ಆದಿತ್ಯನಾಥ್ ಆದೇಶ

ಪ್ರಧಾನಿ ಮೋದಿಯವರು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

“ಹತ್ರಾಸ್​ನ ಘಟನೆಯು ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ಸ್ಥಳೀಯ ಸಂಘಟಕರು ‘ಭೋಲೆ ಬಾಬಾ’ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಕಾರ್ಯಕ್ರಮದ ನಂತರ, ಸತ್ಸಂಗದ ಪ್ರಚಾರಕರು ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಅವರನ್ನು ಸ್ಪರ್ಶಿಸಲು ಭಕ್ತ ಸಮೂಹವು ಅವರ ಕಡೆಗೆ ನುಗ್ಗಿತು. ಸ್ವಯಂಸೇವಕರು ಅವರನ್ನು ತಡೆಯಲು ಪ್ರಯತ್ನಿಸಿದಾಗ ಈ ಕಾಲ್ತುಳಿತ ಸಂಭವಿಸಿದೆ” ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಇದನ್ನೂ ಓದಿ: PM Modi Speech Highlights: 99 ಅಂಕ ಪಡೆದ ಮಗು ರಾಹುಲ್ ಗಾಂಧಿ; ಸದನದಲ್ಲಿ ಪ್ರಧಾನಿ ಮೋದಿ ಲೇವಡಿ

“ಈ ಪ್ರಕರಣದ ತನಿಖೆಗಾಗಿ ನಾವು ಹೆಚ್ಚುವರಿ ಡಿಜಿ ಆಗ್ರಾ ಅವರ ಅಧ್ಯಕ್ಷತೆಯಲ್ಲಿ ತಂಡವನ್ನು ರಚಿಸಿದ್ದೇವೆ ಮತ್ತು ವಿವರವಾದ ವರದಿಯನ್ನು ನೀಡುವಂತೆ ಕೇಳಿದ್ದೇವೆ. ಈ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮೂವರು ರಾಜ್ಯ ಸಚಿವರಾದ ಚೌಧರಿ ಲಕ್ಷ್ಮೀ ನಾರಾಯಣ್, ಸಂದೀಪ್ ಸಿಂಗ್ ಮತ್ತು ಅಸಿಮ್ ಅರುಣ್ ಕೂಡ ಸ್ಥಳದಲ್ಲಿದ್ದಾರೆ” ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು