AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ಮೋದಿ ವರ್ಚಸ್ಸು ಹಾಳು ಮಾಡಲು ರಾಹುಲ್ ಪಣ ತೊಟ್ಟಿದ್ದಾರೆ, ವಿದೇಶ, ಸಂಸತ್ತು ಎಲ್ಲೆಲ್ಲೂ ಸುಳ್ಳು ಸುಳ್ಳು: ಸ್ಮೃತಿ ಇರಾನಿ

ಪ್ರಧಾನಿ ನರೇಂದ್ರ ಮೋದಿಯವರ ವ್ಯಕ್ತಿತ್ವ ಹಾಳು ಮಾಡಲು ರಾಹುಲ್ ಗಾಂಧಿ ಪಣತೊಟ್ಟಂತಿದೆ. ವಿದೇಶ, ದೇಶ, ಸಂಸತ್ತು ಎಲ್ಲಾ ಕಡೆಯೂ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ರಾಜಕೀಯ ದ್ವೇಷವು ದೇಶಕ್ಕೆ ಅವಮಾನ ಮಾಡುವ ಹಂತದ ವರೆಗೆ ತಲುಪುತ್ತಿದೆ.

Smriti Irani: ಮೋದಿ ವರ್ಚಸ್ಸು ಹಾಳು ಮಾಡಲು ರಾಹುಲ್ ಪಣ ತೊಟ್ಟಿದ್ದಾರೆ, ವಿದೇಶ, ಸಂಸತ್ತು ಎಲ್ಲೆಲ್ಲೂ ಸುಳ್ಳು ಸುಳ್ಳು: ಸ್ಮೃತಿ ಇರಾನಿ
ಸ್ಮೃತಿ ಇರಾನಿ
ನಯನಾ ರಾಜೀವ್
|

Updated on: Mar 28, 2023 | 12:24 PM

Share

ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಹಾಳು ಮಾಡಲು ರಾಹುಲ್ ಗಾಂಧಿ ಪಣತೊಟ್ಟಂತಿದೆ. ವಿದೇಶ, ದೇಶ, ಸಂಸತ್ತು ಎಲ್ಲಾ ಕಡೆಯೂ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ರಾಜಕೀಯ ದ್ವೇಷವು ದೇಶಕ್ಕೆ ಅವಮಾನ ಮಾಡುವ ಹಂತದ ವರೆಗೆ ತಲುಪುತ್ತಿದೆ. ನರೇಂದ್ರ ಮೋದಿಯವರ ಶಕ್ತಿ ಅವರ ವರ್ಚಸ್ಸು ಎಂದು ರಾಹುಲ್ ಹೇಳಿದ್ದರು, ಅಷ್ಟೇ ಅಲ್ಲದೆ ನರೇಂದ್ರ ಮೋದಿಯವರ ವ್ಯಕ್ತಿತ್ವವನ್ನು ಹಾಳು ಮಾಡುವವರೆಗೂ ನಾನು ಅವರ ಮೇಲೆ ದಾಳಿ ಮಾಡುತ್ತಲೇ ಇರುತ್ತೇನೆ ಎಂದಿದ್ದರು.

ರಾಜಕೀಯ ಹತಾಶೆಯಿಂದಾಗಿ, ಪ್ರಧಾನಿ ಮೋದಿಯವರ ಮೇಲಿನ ರಾಹುಲ್ ಗಾಂಧಿಯವರ ದ್ವೇಷವು ಈಗ ಇಡೀ ರಾಷ್ಟ್ರಕ್ಕೆ ಅವಮಾನವಾಗಿ ಮಾರ್ಪಟ್ಟಿದೆ.

ಗಾಂಧಿ ಕುಟುಂಬ ದಲಿತ ಅಥವಾ ಹಿಂದುಳಿದ ಸಮುದಾಯಗಳ ಜನರನ್ನು ಅವಮಾನಿಸಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಬುಡಕಟ್ಟು ಕುಟುಂಬದ ಮಹಿಳೆಯೊಬ್ಬರು ರಾಷ್ಟ್ರಪತಿಯಾದಾಗ ಕಾಂಗ್ರೆಸ್ ಸದಸ್ಯರೊಬ್ಬರು ಅವರಿಗೆ ಅವಮಾನ ಮಾಡಿದ್ದರು.

ಮತ್ತಷ್ಟು ಓದಿ: ರಾಹುಲ್ ಗಾಂಧಿ ದೇಶದ ಜನತೆಗೆ ಕ್ಷಮೆ ಕೇಳಬೇಕು ಎಂದ ಸಚಿವೆ ಸ್ಮೃತಿ ಇರಾನಿ

ರಾಹುಲ್ ಗಾಂಧಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿದ್ದರು, ಇಚ್ಚೀಚೆಗಷ್ಟೇ ಸೂರತ್ ನ್ಯಾಯಾಲಯವು ಅವರು ದೋಷಿ ಎಂದು ತೀರ್ಪು ನೀಡಿ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 30 ದಿನಗಳ ಜಾಮೀನಿನ ಮೇಲೆ ಹೊರಗಿದ್ದಾರೆ.

ಇದೀಗ ನಾನು ಕ್ಷಮೆ ಕೇಳುವುದಿಲ್ಲ, ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ ಎಂದು ಹೇಳುವ ಮೂಲಕ ಮತ್ತೊಂದು ಸಮಸ್ಯೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್