Ram Mandir Inauguration: ರಾಮಲಲ್ಲಾ ಪ್ರಾಣಪ್ರತಿಷ್ಠೆ ದಿನ ರಜೆ ಘೋಷಣೆ ವಿರುದ್ಧದ ಪಿಐಎಲ್ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್​

ಅಯೋಧ್ಯೆ(Ayodhya)ಯ ರಾಮ ಮಂದಿರ(Ram Mandir)ದ ಪ್ರಾಣಪ್ರತಿಷ್ಠೆಯಂದು ಸಾರ್ವಜನಿಕ ರಜೆ ಘೋಷಿಸಿರುವ ಮಹಾರಾಷ್ಟ್ರದ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಾಂಬೆ ಹೈಕೋರ್ಟ್​ ತಿರಸ್ಕರಿಸಿದೆ. ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣಪ್ರತಿಷ್ಠೆ ಜನವರಿ 22ರಂದು ನಡೆಯಲಿದ್ದು ಅಂದು ಸರ್ಕಾರವು ಸಾರ್ವಜನಿಕ ರಜೆಯನ್ನು ಘೋಷಿಸಿತ್ತು. ಈ ಅಧಿಸೂಚನೆ ವಿರುದ್ಧ ನಾಲ್ವರು ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

Ram Mandir Inauguration: ರಾಮಲಲ್ಲಾ ಪ್ರಾಣಪ್ರತಿಷ್ಠೆ ದಿನ ರಜೆ ಘೋಷಣೆ ವಿರುದ್ಧದ ಪಿಐಎಲ್ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್​
ಬಾಂಬ್ ಹೈಕೋರ್ಟ್​Image Credit source: Amarujala.com
Follow us
ನಯನಾ ರಾಜೀವ್
|

Updated on:Jan 21, 2024 | 3:14 PM

ಅಯೋಧ್ಯೆ(Ayodhya)ಯ ರಾಮ ಮಂದಿರ(Ram Mandir)ದ ಪ್ರಾಣಪ್ರತಿಷ್ಠೆಯಂದು ಸಾರ್ವಜನಿಕ ರಜೆ ಘೋಷಿಸಿರುವ ಮಹಾರಾಷ್ಟ್ರದ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಾಂಬೆ ಹೈಕೋರ್ಟ್​ ತಿರಸ್ಕರಿಸಿದೆ. ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣಪ್ರತಿಷ್ಠೆ ಜನವರಿ 22ರಂದು ನಡೆಯಲಿದ್ದು ಅಂದು ಸರ್ಕಾರವು ಸಾರ್ವಜನಿಕ ರಜೆಯನ್ನು ಘೋಷಿಸಿತ್ತು. ಈ ಅಧಿಸೂಚನೆ ವಿರುದ್ಧ ನಾಲ್ವರು ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಜಿಎಸ್​ ಕುಲಕರ್ಣಿ ಮತ್ತು ನ್ಯಾ. ನೀಲಾ ಗೋಖಲೆ ಅವರಿದ್ದ ವಿಶೇಷ ಪೀಠವು ಈ ತೀರ್ಪು ನೀಡಿದೆ. ವಿಶೇಷ ಸಂದರ್ಭಗಳಲ್ಲಿ ಸರ್ಕಾರವು ಸಾರ್ವಜನಿಕ ರಜಾದಿನಗಳನ್ನು ಘೋಷಿಸಿದ ಅನೇಕ ಉದಾಹರಣೆಗಳಿವೆ ಎಂದು ಪೀಠ ಹೇಳಿದೆ.

ಕೇರಳ ಹೈಕೋರ್ಟ್‌ನ ತೀರ್ಪಿನ ಉದಾಹರಣೆಯನ್ನು ಉಲ್ಲೇಖಿಸಿದ ಹೈಕೋರ್ಟ್, ಕೇರಳದಲ್ಲಿ ರಂಜಾನ್ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವುದನ್ನು ವಿರೋಧಿಸಿ ಅರ್ಜಿ ಸಲ್ಲಿಸಿದಾಗ ಕೇರಳ ಹೈಕೋರ್ಟ್ ಆ ಅರ್ಜಿಯನ್ನು ತಿರಸ್ಕರಿಸಿದೆ ಎಂದು ಹೇಳಿದೆ.

ಮತ್ತಷ್ಟು ಓದಿ: Ram Mandir Inauguration: ರಾಮಲಲ್ಲಾ ಪ್ರಾಣಪ್ರತಿಷ್ಠೆಗೂ ಮುನ್ನ ರಾಮಸೇತು ನಿರ್ಮಿಸಿದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ರಾಜ್ಯದಲ್ಲಿ ವಿವಿಧ ಧರ್ಮಗಳ ಜನರು ವಾಸಿಸುತ್ತಿದ್ದು, ರಂಜಾನ್ ಸಂದರ್ಭದಲ್ಲಿ ಅವರಿಗೆ ವಿನಾಯಿತಿ ನೀಡುವುದು ಸಂವಿಧಾನದ 25 ಮತ್ತು 26 ನೇ ವಿಧಿಯ ಆಶಯವನ್ನು ಉಲ್ಲಂಘಿಸುವುದಿಲ್ಲ ಎಂದು ಕೇರಳ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಸಾರ್ವಜನಿಕ ರಜೆಯ ಅಧಿಸೂಚನೆ ಹೊರಡಿಸುವುದು ಸಂವಿಧಾನದ ಅಭಿಪ್ರಾಯಕ್ಕೆ ವಿರುದ್ಧವಾಗಿದೆ. 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಸಾರ್ವಜನಿಕ ರಜೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:06 pm, Sun, 21 January 24