ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ 2 ಹಾಡು ಬಳಕೆ: ರಾಹುಲ್ ಗಾಂಧಿ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ

ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ ಚಾಪ್ಟರ್ 2 ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್​ ರದ್ದುಪಡಿಸಲು ಹೈಕೋರ್ಟ್​ ನಕಾರವೆತ್ತಿದೆ.

ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ 2 ಹಾಡು ಬಳಕೆ: ರಾಹುಲ್ ಗಾಂಧಿ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ
ರಾಹುಲ್ ಗಾಂಧಿ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Jun 28, 2023 | 4:17 PM

ಬೆಂಗಳೂರು: ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ ಚಾಪ್ಟರ್ 2 (KGF 2) ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧದ ಎಫ್ಐಆರ್​ ರದ್ದುಪಡಿಸಲು ಹೈಕೋರ್ಟ್​ ನಕಾರವೆತ್ತಿದೆ. ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧದ‌ ಕೇಸ್ ತನಿಖೆಗೂ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಪಕ್ಷದಿಂದ ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆ ಎಂಆರ್​ಟಿ ಮ್ಯೂಸಿಕ್​ನಿಂದ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧ FIR ದಾಖಲಾಗಿತ್ತು. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ಧಗೊಳಿಸಿವಂತೆ ಕೋರಿ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ನಡೆದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ನೊಟೀಸ್: ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ

ಪ್ರಕರಣ ಹಿನ್ನೆಲೆ

ರಾಹುಲ್ ಗಾಂಧಿ ಅವರು ಇತ್ತೀಚೆಗೆ ಭಾರತ್ ಜೋಡೋ ಯಾತ್ರೆಗಾಗಿ ಕರ್ನಾಟಕಕ್ಕೆ ಆಗಮಿಸಿದ್ದರು. ಕರ್ನಾಟಕದ ಹಲವು ಜಿಲ್ಲೆಗಳಿಗೆ ಕಾಲ್ನಡಿಗೆಯಲ್ಲಿ ಸಾಗಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರ ಕಾಲ್ನಡಿಗೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಹಾಗೇ ಹರಿಬಿಟ್ಟ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್​..’ ಹಾಡನ್ನು ಬಳಕೆ ಮಾಡಲಾಗಿತ್ತು.

ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್​​ಟಿ ಮ್ಯೂಸಿಕ್​ನವರು ಕಾಪಿರೈಟ್ ಉಲ್ಲಂಘನೆ ಪ್ರಕರಣ​ ದಾಖಲು ಮಾಡಿದ್ದರು. ಯಶವಂತಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.

ಇದನ್ನೂ ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಪ್ರಧಾನಿ ಮೋದಿ ಹೇಳಿಕೆ ಹಿನ್ನೆಲೆ ಮುಸ್ಲಿಂ ಕಾನೂನು ಮಂಡಳಿ ಸಭೆ

ಈ ಪ್ರಕರಣವನ್ನು ಬೆಂಗಳೂರಿನ ವಾಣಿಜ್ಯ ಕೋರ್ಟ್​ನಲ್ಲಿ ವಿಚಾರಣೆ ಮಾಡಲಾಗಿತ್ತು. ಈ ವೇಳೆ ದೂರುದಾರರು ನೀಡಿದ ದಾಖಲೆಗಳನ್ನು ಕೋರ್ಟ್​ ಪರಿಗಣಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:16 pm, Wed, 28 June 23

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್