ಬೆಂಗಳೂರು: ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ ಚಾಪ್ಟರ್ 2 (KGF 2) ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಕಾರವೆತ್ತಿದೆ. ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧದ ಕೇಸ್ ತನಿಖೆಗೂ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಪಕ್ಷದಿಂದ ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆ ಎಂಆರ್ಟಿ ಮ್ಯೂಸಿಕ್ನಿಂದ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧ FIR ದಾಖಲಾಗಿತ್ತು. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ಧಗೊಳಿಸಿವಂತೆ ಕೋರಿ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ನಡೆದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು.
ಇದನ್ನೂ ಓದಿ: ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ನೊಟೀಸ್: ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ
ರಾಹುಲ್ ಗಾಂಧಿ ಅವರು ಇತ್ತೀಚೆಗೆ ಭಾರತ್ ಜೋಡೋ ಯಾತ್ರೆಗಾಗಿ ಕರ್ನಾಟಕಕ್ಕೆ ಆಗಮಿಸಿದ್ದರು. ಕರ್ನಾಟಕದ ಹಲವು ಜಿಲ್ಲೆಗಳಿಗೆ ಕಾಲ್ನಡಿಗೆಯಲ್ಲಿ ಸಾಗಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರ ಕಾಲ್ನಡಿಗೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಹಾಗೇ ಹರಿಬಿಟ್ಟ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್..’ ಹಾಡನ್ನು ಬಳಕೆ ಮಾಡಲಾಗಿತ್ತು.
ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್ಟಿ ಮ್ಯೂಸಿಕ್ನವರು ಕಾಪಿರೈಟ್ ಉಲ್ಲಂಘನೆ ಪ್ರಕರಣ ದಾಖಲು ಮಾಡಿದ್ದರು. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.
ಇದನ್ನೂ ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಪ್ರಧಾನಿ ಮೋದಿ ಹೇಳಿಕೆ ಹಿನ್ನೆಲೆ ಮುಸ್ಲಿಂ ಕಾನೂನು ಮಂಡಳಿ ಸಭೆ
ಈ ಪ್ರಕರಣವನ್ನು ಬೆಂಗಳೂರಿನ ವಾಣಿಜ್ಯ ಕೋರ್ಟ್ನಲ್ಲಿ ವಿಚಾರಣೆ ಮಾಡಲಾಗಿತ್ತು. ಈ ವೇಳೆ ದೂರುದಾರರು ನೀಡಿದ ದಾಖಲೆಗಳನ್ನು ಕೋರ್ಟ್ ಪರಿಗಣಿಸಿತ್ತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:16 pm, Wed, 28 June 23