Chhota Rajan: ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು

ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.

Chhota Rajan: ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು
ಛೋಟಾ ರಾಜನ್
Image Credit source: The Hindu

Updated on: Oct 23, 2024 | 12:15 PM

ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್​ಗೆ ಛೋಟಾ ರಾಜನ್ ಮೇಲ್ಮನವಿ ಸಲ್ಲಿಸಿದ್ದ, ಜಾಮೀನು ಮಂಜೂರು ಮಾಡಿ ಅಧೀನ ನ್ಯಾಯಾಲಯದ ಶಿಕ್ಷೆಯನ್ನು ರದ್ದುಪಡಿಸುವಂತೆ ಅರ್ಜಿಯಲ್ಲಿ ಛೋಟಾ ರಾಜನ್ ಕೋರಿದ್ದ. ಸಧ್ಯಕ್ಕೆ ಛೋಟಾ ರಾಜನ್​ಗೆ ಬಾಂಬೆ ಹೈಕೋರ್ಟ್​ನ ವಿಭಾಗೀಯ ಪೀಠವು ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ ಒಂದು ಲಕ್ಷ ರೂ. ಭದ್ರತಾ ಬಾಂಡ್ ನೀಡಲು ಆದೇಶಿಸಲಾಗಿದೆ.

ಆದರೆ ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಉಳಿದ ಪ್ರಕರಣಗಳಲ್ಲೂ ಆತ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

ಜಯ್​ಶೆಟ್ಟಿ ಯಾರು?
ಕೇಂದ್ರೀಯ ಮುಂಬೈನ ಗಾಂಧೇವಿಯಲ್ಲಿ ಗೋಲ್ಡನ್​ ಕ್ರೌನ್ ಎನ್ನುವ ಹೋಟೆಲ್​ನ್ನು ನಡೆಸುತ್ತಿದ್ದರು. 2001ರ ಮೇ 4 ರಂದು ಛೋಟಾ ರಾಜನ್ ಗ್ಯಾಂಗ್​ನ ಇಬ್ಬರು ಶೂಟರ್​ಗಳು ಜಯ್​ಶೆಟ್ಟಿಯನ್ನು ಕೊಲೆ ಮಾಡಿದ್ದರು ಎನ್ನುವ ಆರೋಪವಿದೆ.
ಇದಕ್ಕೂ ಮುನ್ನ ಛೋಟಾ ರಾಜನ್ ಗ್ಯಾಂಗ್​ಗೆ ಸೇರಿದ ಹೇಮಂತ್ ಪೂಜಾರಿ ಎನ್ನುವ ವ್ಯಕ್ತಿ ಹಣ ನೀಡುವಂತೆ ಬೆದರಿಕೆ ಹಾಕಿದ್ದ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

ಜಯ್​ಶೆಟ್ಟಿ ಹಣವನ್ನು ನೀಡದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಲಾಗಿದೆ ಎನ್ನುವುದು ಪೊಲೀಸರ ವಾದವಾಗಿದೆ. ಸಧ್ಯಕ್ಕೆ ತಿಹಾರ್ ಜೈಲಿನಲ್ಲಿರುವ ಛೋಟಾ ರಾಜನ್ ಖ್ಯಾತ ಪತ್ರಕರ್ತ ಜೇ ಡೇ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us