
ದೆಹಲಿ: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದೇ ಮೊದಲ ಬಾರಿಗೆ ಸಂಸತ್ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆದಿದೆ. ಹೀಗಾಗಿ ಹೆಚ್ಡಿಡಿ ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿ ಇಂದು ಬೆಳಗ್ಗೆ 9ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ದೇವೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ರು.
Published On - 9:58 am, Sun, 20 September 20