ಕಚೇರಿಯ ಕುರ್ಚಿ ಮೇಲೆ ಕುಳಿತೇ ಪ್ರಾಣಬಿಟ್ಟ ಬ್ಯಾಂಕ್ ಉದ್ಯೋಗಿ, ಒತ್ತಡವೇ ಕಾರಣ

ಲಕ್ನೋದಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಮಹಿಳಾ ಅಧಿಕಾರಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮಂಗಳವಾರ ಅವರು ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದಳು. ಇದ್ದಕ್ಕಿದ್ದಂತೆ ಕುರ್ಚಿಯಿಂದ ಕೆಳಗೆ ಬಿದ್ದಿದ್ದರು. ಕೂಡಲೇ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಕಚೇರಿಯ ಕುರ್ಚಿ ಮೇಲೆ ಕುಳಿತೇ ಪ್ರಾಣಬಿಟ್ಟ ಬ್ಯಾಂಕ್ ಉದ್ಯೋಗಿ, ಒತ್ತಡವೇ ಕಾರಣ
ಫಾತಿಮಾ
Follow us
ನಯನಾ ರಾಜೀವ್
|

Updated on: Sep 25, 2024 | 12:23 PM

ಕೆಲಸದ ಒತ್ತಡದಿಂದ ಕುರ್ಚಿ ಮೇಲೆ ಕುಳಿತೇ ಬ್ಯಾಂಕ್​ನ ಮಹಿಳಾ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಆಕೆಯ ಸಹೋದ್ಯೋಗಿಯೊಬ್ಬರು ದೈನಿಕ್ ಭಾಸ್ಕರ್​ಗೆ ನೀಡಿದ ಹೇಳಿಕೆಯಲ್ಲಿ ಆಕೆ ಕೆಲಸದ ಒತ್ತಡದಿಂದಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಮಹಿಳೆಯನ್ನು ಸದಾಫ್ ಫಾತಿಮಾ ಎಂದು ಗುರುತಿಸಲಾಗಿದ್ದು, ಅವರು ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗೋಮ್ಟಿನಗರದಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ನ ವಿಬೂತಿ ಖಂಡ್ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸೆಪ್ಟೆಂಬರ್ 24 ರಂದು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕುರ್ಚಿಯಿಂದ ಕೆಳಗೆ ಬಿದ್ದಿದ್ದರು, ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್ ಮಾತನಾಡಿ, ದೇಶದಲ್ಲಿ ಪ್ರಸ್ತುತ ಆರ್ಥಿಕ ಒತ್ತಡದ ಸಂಕೇತವಾಗಿದೆ ಎಂದು ಹೇಳಿದ್ದಾರೆ. ಎಲ್ಲಾ ಕಂಪನಿಗಳು ಮತ್ತು ಸರ್ಕಾರಿ ಇಲಾಖೆಗಳು ಈ ನಿಟ್ಟಿನಲ್ಲಿ ಗಂಭೀರವಾಗಿ ಯೋಚಿಸಬೇಕು. ಇದರಿಂದ ದೇಶದ ಮಾನವ ಸಂಪನ್ಮೂಲಕ್ಕೆ ತುಂಬಲಾರದ ನಷ್ಟವಾಗಿದೆ.

ಮತ್ತಷ್ಟು ಓದಿ: ಟಾರ್ಗೆಟ್​ ತಲುಪೋ ಭರದಲ್ಲಿ ರಾತ್ರಿ ಹಗಲೆನ್ನದೇ ಕೆಲಸ ಮಾಡಿ ಯುವತಿ ಸಾವು

ಈ ವರ್ಷದ ಜುಲೈನಲ್ಲಿ, 26 ವರ್ಷದ ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಎಂದು ಗುರುತಿಸಲಾದ ಮಹಿಳಾ ಚಾರ್ಟರ್ಡ್ ಅಕೌಂಟೆಂಟ್, ಕೆಲಸದ ಒತ್ತಡದಿಂದಾಗಿ ಮೃತಪಟ್ಟಿದ್ದರು. ಪುಣೆಯ ಅರ್ನ್ಸ್ಟ್ ಮತ್ತು ಯಂಗ್ (ಇವೈ) ಸಂಸ್ಥೆಗೆ ಸೇರಿ ಕೇವಲ ನಾಲ್ಕು ತಿಂಗಳಾಗಿದೆ.

ಆಕೆಯ ಮರಣದ ನಂತರ, ಸೆಬಾಸ್ಟಿಯನ್ ಅವರ ತಾಯಿ, ಸೆಪ್ಟೆಂಬರ್‌ನಲ್ಲಿ, ಇವೈ ಇಂಡಿಯಾ ಅಧ್ಯಕ್ಷ ರಾಜೀವ್ ಮೆಮಾನಿ ಅವರಿಗೆ ಪತ್ರ ಬರೆದು, ಕೆಲಸದ ಹೊರೆ ಮತ್ತು ವಿಸ್ತರಿಸಿದ ಕೆಲಸದ ಅವಧಿಯು ತನ್ನ ಮಗಳನ್ನು ಬಲಿ ತೆಗೆದುಕೊಂಡಿದೆ ಎಂದು ಆರೋಪಿಸಿದರು. ಆದರೆ ಸಂಸ್ಥೆಯು ಆರೋಪಗಳನ್ನು ನಿರಾಕರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ