ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ನಾನು ಯಾವುದೇ ಧರ್ಮದ ಶತ್ರುವಲ್ಲ: ಉದಯನಿಧಿ ಸ್ಟಾಲಿನ್
ಸನಾತನ ಧರ್ಮದ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ನಾನು ಯಾವುದೇ ಧರ್ಮದ ಶತ್ರುವಲ್ಲ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಇತ್ತೀಚೆಗಷ್ಟೇ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಹಾಗೂ ಕೊರೊನಾಗೆ ಹೋಲಿಸಿದ್ದರು, ಸನಾತನ ಧರ್ಮವನ್ನು ಬುಡ ಸಮೇತ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು, ಇದು ವಿವಾದಕ್ಕೆ ಕಾರಣವಾಗಿತ್ತು. ಈ ವೈರಸ್‌ಗಳನ್ನು ಬೇರು ಸಹಿತ ನಾಶಗೊಳಿಸುವ ರೀತಿಯಲ್ಲೇ ಸನಾತನ ಧರ್ಮೀಯರನ್ನು ನಾಶಗೊಳಿಸಿದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ ಎಂಬ ಆಘಾತಕಾರಿ ಹೇಳಿಕೆ ನೀಡಿದ್ದರು.
ಸನಾತನ ಧರ್ಮದ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ನಾನು ಯಾವುದೇ ಧರ್ಮದ ಶತ್ರುವಲ್ಲ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin) ಹೇಳಿದ್ದಾರೆ. ಇತ್ತೀಚೆಗಷ್ಟೇ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಹಾಗೂ ಕೊರೊನಾಗೆ ಹೋಲಿಸಿದ್ದರು, ಸನಾತನ ಧರ್ಮವನ್ನು ಬುಡ ಸಮೇತ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು, ಇದು ವಿವಾದಕ್ಕೆ ಕಾರಣವಾಗಿತ್ತು. ಈ ವೈರಸ್‌ಗಳನ್ನು ಬೇರು ಸಹಿತ ನಾಶಗೊಳಿಸುವ ರೀತಿಯಲ್ಲೇ ಸನಾತನ ಧರ್ಮೀಯರನ್ನು ನಾಶಗೊಳಿಸಿದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ ಎಂಬ ಆಘಾತಕಾರಿ ಹೇಳಿಕೆ ನೀಡಿದ್ದರು.
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ನಾವು ಯಾವುದೇ ಧರ್ಮದ ಶತ್ರುಗಳಲ್ಲ ಎಂದರು. ನಾವು ಪೆರಿಯಾರ್, ಅಣ್ಣಾ ಮತ್ತು ಕರುಣಾನಿಧಿಯವರ ಬೆಂಬಲಿಗರು. ಸಾಮಾಜಿಕ ನ್ಯಾಯಕ್ಕಾಗಿ ನಾವು ಯಾವಾಗಲೂ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಯಾರಿಗೂ ಭಯ ಪಡುವುದಿಲ್ಲ ಎಂದರು.
ಡಿಎಂಕೆ ನಾಯಕನ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆ ಆರಂಭವಾಗಿದೆ. ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿದ್ದಾರೆ.
ಮತ್ತಷ್ಟು ಓದಿ:ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಎಂದು ಕರೆದ ಸ್ಟಾಲಿನ್ ಪುತ್ರ ಉದಯನಿಧಿ
ರಾಜ್ಯದಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಚುನಾವಣಾ ಮೈತ್ರಿ ಮಾಡಿಕೊಂಡಿವೆ ಎಂದರು. ಅಲ್ಲದೆ 2024ರ ಸಂಸತ್ ಚುನಾವಣೆಯಲ್ಲಿ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದರು.
ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ . ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ.
ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ.ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವವರ ಪರವಾಗಿ ಮಾತನಾಡಿದ್ದೇನೆ ಎಂದು ಸಮರ್ಥಿಸಿಕೊಂಡರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ