Covid Situation: ತಜ್ಞರೊಂದಿಗೆ ಇಂದು ಕೇಂದ್ರ ಆರೋಗ್ಯ ಸಚಿವರ ಸಭೆ; ಭಾರತದ ಕೊವಿಡ್ ಸ್ಥಿತಿಗತಿ ಬಗ್ಗೆ ನೀವು ತಿಳಿಯಬೇಕಾದ 13 ಅಂಶಗಳಿವು

ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯಾ ಭಾರತದ ಹಿರಿಯ ವೈದ್ಯರು ಹಾಗೂ ಸಮುದಾಯ ಆರೋಗ್ಯ ತಜ್ಞರ ಸಭೆ ಕರೆದಿದ್ದಾರೆ. ಭಾರತದ ಕೊರೊನಾ ಸ್ಥಿತಿಗತಿ ಕುರಿತ 13 ಮುಖ್ಯ ಅಂಶಗಳಿವು...

Covid Situation: ತಜ್ಞರೊಂದಿಗೆ ಇಂದು ಕೇಂದ್ರ ಆರೋಗ್ಯ ಸಚಿವರ ಸಭೆ; ಭಾರತದ ಕೊವಿಡ್ ಸ್ಥಿತಿಗತಿ ಬಗ್ಗೆ ನೀವು ತಿಳಿಯಬೇಕಾದ 13 ಅಂಶಗಳಿವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 26, 2022 | 1:06 PM

ಭಾರತ ಸೇರಿದಂತೆ ವಿಶ್ವದ ವಿವಿಧೆಡೆ ಕೊರೊನಾ ಸೋಂಕು (Coronavirus) ಮತ್ತೊಮ್ಮೆ ವ್ಯಾಪಿಸುವ ಆತಂಕ ವ್ಯಕ್ತವಾಗಿದೆ. ಕೊವಿಡ್ ನಿರ್ಬಂಧ (Covid Restrictions) ಸಡಿಲಿಸಿದ ನಂತರ ಚೀನಾದಲ್ಲಿ (China) ಪರಿಸ್ಥಿತಿ ಹದಗೆಟ್ಟಿದ್ದು, ಇತರ ದೇಶಗಳಲ್ಲಿ ಅವ್ಯಕ್ತ ಭೀತಿಗೆ ಕಾರಣವಾಗಿದೆ. ಚೀನಾದ ಒಟ್ಟು ಜನಸಂಖ್ಯೆಯ ಪೈಕಿ ಶೇ 18ರಷ್ಟು ಅಂದರೆ 20 ಕೋಟಿ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ವಿಶ್ವ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಕೇಂದ್ರ ಆರೋಗ್ಯ ಇಲಾಖೆಯು ಈಗಾಗಲೇ ರಾಜ್ಯಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ರವಾನಿಸಿದೆ. ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯಗೊಳಿಸುವ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಇಂದು (ಡಿ 26) ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯಾ ಭಾರತದ ಹಿರಿಯ ವೈದ್ಯರು ಹಾಗೂ ಸಮುದಾಯ ಆರೋಗ್ಯ ತಜ್ಞರ ಸಭೆ ಕರೆದಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವಿದೇಶಗಳಿಂದ ಬಂದ ಪ್ರಯಾಣಿಕರಲ್ಲಿ ಕೊರೊನಾ ಕಂಡುಬಂದರೆ ಚಿಕಿತ್ಸೆ ನೀಡಲೆಂದು 60 ಬೆಡ್​ಗಳ ಘಟಕ ಸ್ಥಾಪಿಸಲಾಗಿದೆ. ಭಾರತದ ಕೊರೊನಾ ಸ್ಥಿತಿಗತಿ ಕುರಿತ 13 ಮುಖ್ಯ ಅಂಶಗಳಿವು…

  1. ಕೊರೊನಾ ಪಿಡುಗು ಮತ್ತೆ ಭಾರತವನ್ನು ಆವರಿಸಿಕೊಳ್ಳದಂತೆ ತಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವೀಯಾ ಸೋಮವಾರ (ಡಿ 26) ಭಾರತೀಯ ವೈದ್ಯಕೀಯ ಒಕ್ಕೂಟದ (Indian Medical Association – IMA) ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
  2. ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 196 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಪ್ರಸ್ತುತ 3,428 ಸಕ್ರಿಯ ಪ್ರಕರಣಗಳಿವೆ. ಕೇರಳದ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 4.46 ಕೋಟಿ ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 5,30,695 (5.30 ಲಕ್ಷ) ಮಂದಿ ಸಾವನ್ನಪ್ಪಿದ್ದಾರೆ.
  3. ಕರ್ನಾಟಕದಲ್ಲಿ ಕೊರೊನಾ ಹರಡುವುದನ್ನು ನಿಯಂತ್ರಿಸುವ ಕುರಿತು ಇಂದು (ಡಿ 26) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ರಾಜ್ಯದ ಜನಜೀವನ, ವ್ಯಾಪಾರ ವಹಿವಾಟಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್ ಕಡ್ಡಾಯಗೊಳಿಸುವ ಕುರಿತು ಚಿಂತನೆ ನಡೆಸಿದೆ ಎಂದು ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
  4. ಕರ್ನಾಟಕದಲ್ಲಿ ಕೊವಿಡ್ ಟೆಸ್ಟಿಂಗ್ ಸಂಖ್ಯೆಯಲ್ಲಿ ಹೆಚ್ಚಿಸಬೇಕು ಎಂಬ ಸಲಹೆಯನ್ನು ಕರ್ನಾಟಕ ಕೊವಿಡ್ ಕಾರ್ಯಪಡೆ ತಿಳಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪ್ರತಿದಿನ 1,500 ಹಾಗೂ ರಾಜ್ಯದಲ್ಲಿ 3,500 ಟೆಸ್ಟ್​ಗಳನ್ನು ನಡೆಸಲಾಗುತ್ತಿದೆ. ಇದನ್ನು ಕ್ರಮವಾಗಿ 5,000 ಹಾಗೂ 10,000ಕ್ಕೆ ಹೆಚ್ಚಿಸುವಂತೆ ಕಾರ್ಯಪಡೆ ಸಲಹೆ ಮಾಡಿದೆ.
  5. ಭಾರತದ ಕೊವಿಡ್ ಸ್ಥಿತಿಗತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರತಿತಿಂಗಳ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ್ದರು. ಕೊವಿಡ್ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಮಾಸ್ಕ್, ಸ್ಯಾನಿಟೈಸರ್ ಬಳಕೆಗೆ ಒತ್ತು ನೀಡಬೇಕು. ಪರಿಸ್ಥಿತಿ ಕೈಮೀರದಂತೆ ಎಲ್ಲರೂ ಎಚ್ಚರವಹಿಸಬೇಕು ಎಂದು ಸಲಹೆ ಮಾಡಿದ್ದರು.
  6. ಉತ್ತರ ಪ್ರದೇಶದಲ್ಲಿ ಚೀನಾದಿಂದ ಹಿಂದಿರುಗಿದ್ದ 40 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೊವಿಡ್ ಸೋಂಕು ಪತ್ತೆಯಾಗಿತ್ತು. ಆಗ್ರಾದ ವ್ಯಕ್ತಿಯು ಕೊವಿಡ್ ದೃಢಪಟ್ಟ ನಂತರ ಮನೆಯಲ್ಲಿ ಪ್ರತ್ಯೇಕವಾಗಿದ್ದರು. ಜಿನೋವ್ ಸೀಕ್ವೆನ್ಸ್ ನಂತರ ಕುಟುಂಬದ ಇತರ ಸದಸ್ಯರನ್ನೂ ತಪಾಸಣೆಗೆ ಒಳಪಡಿಸಲಾಗಿತ್ತು.
  7. ಆಗ್ರಾ ವಿದ್ಯಮಾನವು ಬೆಂಗಳೂರಿನಲ್ಲಿಯೂ ಸಂಚಲನ ಮೂಡಿಸಿತ್ತು. ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಬಿಬಿಎಂಪಿ ನಿಗಾವಣೆ ಹೆಚ್ಚಿಸಿತ್ತು. ಈ ವ್ಯಕ್ತಿಯು ಬೆಂಗಳೂರಿಗೆ ಬಂದು, ಇಲ್ಲಿಂದ ಆಗ್ರಾಕ್ಕೆ ಪ್ರಯಾಣಿಸಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಈತನ ಸಂಪರ್ಕಕ್ಕೆ ಬಂದಿರುವವರನ್ನು ಪತ್ತೆಹಚ್ಚಲು ಬಿಬಿಎಂಪಿ ಸಿಬ್ಬಂದಿ ಶ್ರಮಿಸುತ್ತಿದದ್ಆರೆ.
  8. ಚೀನಾದಲ್ಲಿ ಕೊವಿಡ್ ಸೋಂಕು ತೀವ್ರಗತಿಯಲ್ಲಿ ಹರಡಿದ ನಂತರ ಕೇಂದ್ರ ಸರ್ಕಾರವುವ ವಿವಿಧ ರಾಜ್ಯ ಸರ್ಕಾರಗಳೊಂದಿಗೆ ನಿಯಮಿತ ಸಂಪರ್ಕದಲ್ಲಿದ್ದು, ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದೆ. ಚೀನಾದಲ್ಲಿ ಕೊವಿಡ್ ಹರಡಲು BF7 ರೂಪಾಂತರಿ ಮುಖ್ಯ ಕಾರಣ ಎಂದು ಶಂಕಿಸಲಾಗಿದೆ. ಪಾಸಿಟಿವ್ ಪ್ರಕರಣಗಳ ಜಿನೋಮ್ ಸೀಕ್ವೇನ್ಸ್ ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.
  9. ಚೀನಾದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಐಸಿಯುಗಳು ಭರ್ತಿಯಾಗಿದ್ದರೆ, ಏಕಾಏಕಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೃತಪಡುತ್ತಿರುವುದರಿಂದ ಸ್ಮಶಾನಗಳಲ್ಲಿ ಅಂತ್ಯಸಂಸ್ಕಾರಕ್ಕೂ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
  10. ಭಾರತದಲ್ಲಿ ಕ್ರಿಸ್​ಮಸ್ ಆಚರಣೆ ಪೂರ್ಣಗೊಂಡಿದ್ದರೂ ಹೊಸ ವರ್ಷಾಚರಣೆಯ ಸಂಭ್ರಮ ಮನೆಮಾಡಿದೆ. ವಾರಾಂತ್ಯ ಮತ್ತು ವರ್ಷಾಂತ್ಯ ಪ್ರವಾಸಗಳಿಗೆಂದು ಪ್ರವಾಸಿಗರು ಪ್ರೇಕ್ಷಣೀಯ ಸ್ಥಳಗಳಿಗೆ ಲಗ್ಗೆಯಿಟ್ಟಿದ್ದಾರೆ. ಈ ಸಂಭ್ರಮವು ಕೊರೊನಾ ಹರಡಲು ಕಾರಣವಾಗಬಾರದು ಎಂಬ ಮುನ್ನೆಚ್ಚರಿಕೆಯ ಸಂದೇಶವನ್ನು ಕೇಂದ್ರ ಸರ್ಕಾರವು ರಾಜ್ಯಗಳಿಗೆ ರವಾನಿಸಿದೆ.
  11. ಬೆಂಗಳೂರು ಸೇರಿದಂತೆ ದೇಶದ ಎಲ್ಲ ಪ್ರಮುಖ ವಿಮಾನ ನಿಲ್ದಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಿದೇಶಗಳಿಂದ ಬರುವ ಎಲ್ಲರಿಗೂ ಆರ್​ಟಿ-ಪಿಸಿಆರ್ ಪರೀಕ್ಷೆಗಳನ್ನು ಕಡ್ಡಾಯಗೊಳಿಸಲಾಗಿದೆ. ಮುಖ್ಯವಾಗಿ ಚೀನಾ, ಥಾಯ್ಲೆಂಡ್, ಜಪಾನ್, ದಕ್ಷಿಣ ಕೋರಿಯಾ ಮತ್ತು ಸಿಂಗಪುರಗಳಿಂದ ಬರುವ ಪ್ರಯಾಣಿಕರ ಆರೋಗ್ಯದ ಮೇಲೆ ಹೆಚ್ಚು ನಿಗಾ ಇರಿಸಲಾಗಿದೆ.
  12. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈವರೆಗೆ ಪ್ರಕಟಿಸಿರುವ ಸಂದೇಶಗಳು ಸಲಹಾತ್ಮಕವಾಗಿ ಮಾತ್ರವೇ ಇದೆ. ಎಲ್ಲಿಯೂ ಈ ನಿಯಮಗಳು ಕಡ್ಡಾಯ ಎಂದು ಘೋಷಿಸಿಲ್ಲ. ಜನರು ಹೆದರಬೇಕಾದ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
  13. ಕರ್ನಾಟಕ ಸರ್ಕಾರದ ವಿಪತ್ತು ನಿರ್ವಹಣಾ ಸಮಿತಿ ಸಭೆಯು ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಯ ನಂತರ ಮಾರ್ಗಸೂಚಿಯು ಅಧಿಕೃತವಾಗಿ ಪ್ರಕಟವಾಗಲಿದೆ.

ಇದನ್ನೂ ಓದಿ: Karnataka Covid Guidelines: ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ವಿಶೇಷ ಸಭೆ; ಹೊಸ ವರ್ಷಾಚರಣೆಗೆ 8 ನಿಯಮಗಳು ಶಿಫಾರಸು

ಆರೋಗ್ಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Mon, 26 December 22

ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ