ಗರ್ಭಿಣಿಯರು ಕೊರೊನಾ ಲಸಿಕೆ ಪಡೆಯಬಹುದು: ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ

ಬಾಣಂತಿಯರು ಲಸಿಕೆ ಪಡೆಯಲು ಈ ಮೊದಲು ಒಪ್ಪಿಗೆ ನೀಡಲಾಗಿತ್ತು. ಇದೀಗ, ಗರ್ಭಿಣಿಯರು ಕೂಡ ಲಸಿಕೆ ಪಡೆಯಬಹುದು ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ತಂಡ ಶಿಫಾರಸು ಮಾಡಿದೆ.

ಗರ್ಭಿಣಿಯರು ಕೊರೊನಾ ಲಸಿಕೆ ಪಡೆಯಬಹುದು: ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Jul 02, 2021 | 6:24 PM

ದೆಹಲಿ: ಗರ್ಭಿಣಿಯರು ಕೂಡ ಕೊರೊನಾ ಲಸಿಕೆ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಬಾಣಂತಿಯರು ಲಸಿಕೆ ಪಡೆಯಲು ಈ ಮೊದಲು ಒಪ್ಪಿಗೆ ನೀಡಲಾಗಿತ್ತು. ಇದೀಗ, ಗರ್ಭಿಣಿಯರು ಕೂಡ ಲಸಿಕೆ ಪಡೆಯಬಹುದು ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ತಂಡ ಶಿಫಾರಸು ಮಾಡಿದೆ. ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ತಂಡದ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಕೊವಿಡ್ -19 ಲಸಿಕೆ ಗರ್ಭಿಣಿಯರಿಗೆ ಉಪಯುಕ್ತವಾದ ಕಾರಣ ಅವರಿಗೆ ನೀಡಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಜೂನ್ 25ರಂದು ಹೇಳಿದ್ದರು. ಗರ್ಭಿಣಿಯರಿಗೆ ಲಸಿಕೆ ನೀಡಬಹುದು ಎಂದು ಆರೋಗ್ಯ ಸಚಿವಾಲಯ ಮಾರ್ಗಸೂಚಿಯಲ್ಲಿ ಹೇಳಿತ್ತು. ಗರ್ಭಿಣಿ ಮಹಿಳೆಯರಿಗೆ ವ್ಯಾಕ್ಸಿನೇಷನ್ ಉಪಯುಕ್ತವಾಗಿದೆ, ಅದನ್ನು ನೀಡಬೇಕು ಎಂದು ಅವರು ಹೇಳಿದ್ದರು.

ದೇಶದ ಕೊವಿಡ್ -19 ಪರಿಸ್ಥಿತಿ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರ್ಗವ, ಕೇವಲ ಒಂದು ದೇಶ ಮಾತ್ರ ಮಕ್ಕಳಿಗೆ ಕೋವಿಡ್ -19 ಲಸಿಕೆ ನೀಡುತ್ತಿದೆ. 2-18 ವಯಸ್ಸಿನ ಮಕ್ಕಳ ಬಗ್ಗೆ ಸಣ್ಣ ಅಧ್ಯಯನವನ್ನು ನಡೆಸಲಾಗಿದ್ದು, ಸೆಪ್ಟೆಂಬರ್ ವೇಳೆಗೆ ಫಲಿತಾಂಶಗಳು ಬರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದರು. ತೀರಾ ಸಣ್ಣ ಮಕ್ಕಳಿಗೆ ಲಸಿಕೆ ಅಗತ್ಯವಿದೆಯೇ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಭಾರ್ಗವ ಹೇಳಿದ್ದರು. ಅಲ್ಲಿಯವರೆಗೆ ನಾವು ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಹೆಚ್ಚಿನ ಡೇಟಾವನ್ನು ಹೊಂದಿರುತ್ತೇವೆ, ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳಿಗೆ ಲಸಿಕೆ ಹಾಕಲು ನಮಗೆ ಸಾಧ್ಯವಾಗುವುದಿಲ್ಲ ಎಂದು ಅವರು ವಿವರಣೆ ನೀಡಿದ್ದರು.

ಐಸಿಎಂಆರ್ ಇತ್ತೀಚಿನ ಅಧ್ಯಯನವೊಂದರಲ್ಲಿ ಗರ್ಭಿಣಿ ಮತ್ತು ಪ್ರಸವನಂತರದ ಮಹಿಳೆಯರು ಭಾರತದ ಎರಡನೇ ಕೊವಿಡ್ -19 ಅಲೆಯಲ್ಲಿ ಮೊದಲಿಗಿಂತ ಹೆಚ್ಚು ತೀವ್ರ ಪರಿಣಾಮಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿತ್ತು. ಈ ವರ್ಷ ಸಾವಿನ ಪ್ರಮಾಣ ಮತ್ತು ರೋಗಲಕ್ಷಣದ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚಿವೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆಯುವ ಮುನ್ನ ಗರ್ಭಿಣಿಯರು ಗಮನಿಸಲೇಬೇಕಾದ ಅಂಶಗಳು; ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಟ

ಗರ್ಭಿಣಿ, ಬಾಣಂತಿಯರಿಗೆ ತೀವ್ರವಾಗಿ ಬಾಧಿಸಿದ ಕೊವಿಡ್​ 19 ಎರಡನೇ ಅಲೆ; ಐಸಿಎಂಆರ್​ ಅಧ್ಯಯನ

Published On - 5:58 pm, Fri, 2 July 21

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ