ಸಾವು ಹೇಗೆ ಯಾವ ಸಮಯದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ಖುಷಿಯಿಂದ ತುಂಬಿರಬೇಕಾದ ಮದುವೆ ಮನೆಯಲ್ಲಿ ಸ್ಮಶಾನ ಮೌನ ಆವರಿಸಿತ್ತು. ವ್ಯಕ್ತಿಯೊಬ್ಬರು ಮದುವೆಯ ಖುಷಿಯಲ್ಲಿ ನೃತ್ಯ ಮಾಡುತ್ತಲೇ ಪ್ರಾಣಬಿಟ್ಟಿದ್ದಾರೆ.
ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರ್‌ಗಢದಲ್ಲಿ ಮದುವೆಯೊಂದರಲ್ಲಿ ಈ ಘಟನೆ ನಡೆದಿದೆ.
ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿಯಾಗಿದ್ದರು.
ಮೇ 4 ಮತ್ತು 5 ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ವ್ಯಕ್ತಿ ತನ್ನ ಸೊಸೆಯ ಮದುವೆಯಲ್ಲಿ ನೃತ್ಯ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ವ್ಯಕ್ತಿ ಮೊದಲು ವೇದಿಕೆಯೊಂದರಲ್ಲಿ ಇತರ ಕೆಲವರೊಂದಿಗೆ ಉತ್ಸಾಹಭರಿತವಾಗಿ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು, ತಕ್ಷಣ ಇದ್ದಕ್ಕಿದ್ದಂತೆ ನಿಲ್ಲಿಸಿ ವೇದಿಕೆಯ ಮೇಲೆ ಕುಳಿತರು.
10 May 2023 : ?? : BSP engineer got ?attack? while dancing at niece’s wedding, died#heartattack2023 #TsunamiOfDeath pic.twitter.com/b0dNv3k2Av
— Anand Panna (@AnandPanna1) May 10, 2023
ಕೆಲ ಕ್ಷಣಗಳ ನಂತರ ಕುಸಿದು ಬಿದ್ದಿದ್ದಾರೆ. ದಿಲೀಪ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ