AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಬೆಂಗಳೂರು ಮೂಲದ ಸೇನಾಧಿಕಾರಿ ಹೃದಯಾಘಾತದಿಂದ ಸಾವು, ಪಾರ್ಕ್​ ಮಾಡಿದ್ದ ಕಾರಿನಲ್ಲಿತ್ತು ಶವ

ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪಾರ್ಕ್​ ಮಾಡಿದ್ದ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮಧ್ಯಪ್ರದೇಶ: ಬೆಂಗಳೂರು ಮೂಲದ ಸೇನಾಧಿಕಾರಿ ಹೃದಯಾಘಾತದಿಂದ ಸಾವು, ಪಾರ್ಕ್​ ಮಾಡಿದ್ದ ಕಾರಿನಲ್ಲಿತ್ತು ಶವ
ಸೇನಾಧಿಕಾರಿ
ನಯನಾ ರಾಜೀವ್
|

Updated on:Sep 12, 2025 | 9:17 AM

Share

ಜಬಲ್ಪುರ, ಸೆಪ್ಟೆಂಬರ್ 12: ಹೃದಯಾಘಾತ(Heart Attack)ದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪಾರ್ಕ್ಮಾಡಿದ್ದ ಕಾರಿನಲ್ಲಿ ಡ್ರೈವರ್ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಲ್ಲೇ ಹೋಗುತ್ತಿದ್ದವರು ಅವರು ಚಾಲಕನ ಸೀಟಿನಲ್ಲಿ ತುಂಬಾ ಹೊತ್ತಿನಿಂದ ಅವರು ಕುಳಿತಿರುವುದನ್ನು ಗಮನಿಸಿ ಅನುಮಾನಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಳಗಿದ್ದವ್ಯಕ್ತಿ ಮೇಜರ್ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ.

ಸೇನಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು ಮತ್ತು ಮೇಜರ್ ಕುಮಾರ್ ಅವರನ್ನು ಆಂಬ್ಯುಲೆನ್ಸ್ ಮೂಲಕ ಮಿಲಿಟರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಮತ್ತಷ್ಟು ಓದಿ:  ಶಾಲಾ ಬಸ್ ಚಾಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ: ಮುಂದೇನಾಯ್ತು?

ಪ್ರಾಥಮಿಕ ತನಿಖೆಗಳು ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಸೂಚಿಸುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮರಣೋತ್ತರ ಪರೀಕ್ಷೆಯ ವರದಿಯ ನಂತರ ನಿಖರವಾದ ಕಾರಣವನ್ನು ದೃಢಪಡಿಸಲಾಗುವುದು.

ಮೇಜರ್ ವಿಜಯ್ ಕುಮಾರ್ ಮೂಲತಃ ಬೆಂಗಳೂರಿನವರಾಗಿದ್ದು, ಜಬಲ್ಪುರದ ಮಿಲಿಟರಿ ಆಸ್ಪತ್ರೆ ಆವರಣದಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದರು. ಅವರು ವೈಯಕ್ತಿಕ ಕೆಲಸದ ನಿಮಿತ್ತ ಸದರ್ ಬಜಾರ್‌ಗೆ ಬಂದಿದ್ದಾಗ ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿತು.

ಕಾರಿನ ಬಾಗಿಲು ತೆರೆದಿತ್ತು ಮತ್ತು ಮೇಜರ್ ಕುಮಾರ್ ಬಹಳ ಹೊತ್ತು ಸುಮ್ಮನೆ ಕುಳಿತಿದ್ದರು ಎಂದು ಸ್ಥಳೀಯರು ಹೇಳಿದ್ದು, ಇದು ಅನುಮಾನಕ್ಕೆ ಕಾರಣವಾಯಿತು ಮತ್ತು ಜನರು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಸಂಪೂರ್ಣ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಪೊಲೀಸರು ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಬುಧವಾರ ತಡರಾತ್ರಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗುರುವಾರ ಬೆಳಗ್ಗೆ ಅವರ ಕುಟುಂಬ ಬೆಂಗಳೂರಿನಿಂದ ಆಗಮಿಸಿದೆ. ಅಗತ್ಯ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ, ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಮೇಜರ್ ಬಿ. ವಿಜಯ್ ಕುಮಾರ್ಅವರಿಗೆ ಸೇನೆಯಲ್ಲಿ ಒಳ್ಳೆಯ ಹೆಸರಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:14 am, Fri, 12 September 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!