AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ಹೃದಯಾಘಾತದಿಂದ ಸಾವನ್ನಪ್ಪಿದ ಉತ್ತರ ಪ್ರದೇಶದ ಶಾಸಕ

ಲಖಿಂಪುರ ಖೇರಿನ ಬಿಜೆಪಿ ಶಾಸಕ ಅರವಿಂದ್ ಗಿರಿ ಇಂದು ಬೆಳಗ್ಗೆ ಇಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

Heart Attack:  ಹೃದಯಾಘಾತದಿಂದ ಸಾವನ್ನಪ್ಪಿದ ಉತ್ತರ ಪ್ರದೇಶದ ಶಾಸಕ
BJP MLA Arvind Giri
TV9 Web
| Edited By: |

Updated on:Sep 06, 2022 | 12:59 PM

Share

ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಖಿಂಪುರ ಖೇರಿನ ಬಿಜೆಪಿ ಶಾಸಕ ಅರವಿಂದ್ ಗಿರಿ (Arvind Giri) ಇಂದು ಬೆಳಗ್ಗೆ  ಹೃದಯಾಘಾತದಿಂದ (heart attack)ನಿಧನರಾಗಿದ್ದಾರೆ. ಅವರು ತಮ್ಮ ಕಾರಿನಲ್ಲಿ ಲಕ್ನೋಗೆ ಹೋಗುತ್ತಿದ್ದಾಗ ವಾಹನದಲ್ಲಿ ಹೃದಯ ಸ್ತಂಭನಕ್ಕೆ ಒಳಗಾದರು ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಅವರು ಸಾವನ್ನಪ್ಪಿದ್ದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. ಬಿಜೆಪಿ ಶಾಸಕರ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಂಗಳವಾರ ಸಂತಾಪ ಸೂಚಿಸಿದ್ದಾರೆ. ಲಖಿಂಪುರ ಖೇರಿ ಜಿಲ್ಲೆಯ ಗೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಗಿರಿ ಜಿ ಅವರ ನಿಧನ ದುರದೃಷ್ಟಕರ. ನನ್ನ ಸಂತಾಪಗಳು. ಭಗವಾನ್ ಶ್ರೀರಾಮನು ಅಗಲಿದ ಆತ್ಮಕ್ಕೆ ಅವರ ಪಾದದಡಿಯಲ್ಲಿ ಸ್ಥಾನ ನೀಡಲಿ ಮತ್ತು ದುಃಖಿತ ಕುಟುಂಬ ಸದಸ್ಯರಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ. ಓಂ ಶಾಂತಿ ಎಂದು  ಆದಿತ್ಯನಾಥ ಟ್ವೀಟ್ ಮಾಡಿದ್ದಾರೆ.

ಗಿರಿ 1993 ರಲ್ಲಿ ಸಮಾಜವಾದಿ ಪಕ್ಷಕ್ಕೆ  ಸೇರಿ, 2006 ರಲ್ಲಿ ಎಸ್ ಪಿ ಅಭ್ಯರ್ಥಿಯಾಗಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರು. 2017 ಮತ್ತು 2022 ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಗೆದ್ದರು. 2022 ರ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಎಂಟು ಲಖಿಂಪುರ ಖೇರಿ ಸ್ಥಾನಗಳನ್ನು ಗೆದ್ದಿದೆ. ಗಿರಿ ಅವರು 1993 ರಲ್ಲಿ  ಸಮಾಜವಾದಿ ಪಕ್ಷಕ್ಕೆ ಸೇರುವ ಮೊದಲು ವಿದ್ಯಾರ್ಥಿ ರಾಜಕೀಯದಲ್ಲಿದ್ದರು.   2002ರಲ್ಲಿ ಮತ್ತು 2007ರಲ್ಲಿ ಎಸ್‌ಪಿ ಅಭ್ಯರ್ಥಿಯಾಗಿ ಚುನಾವಣಾ  ಕಣಕ್ಕಿಳಿದು ಅವರು ಗೆದ್ದಿದ್ದರು .

ಅವರ ಪತ್ನಿ ಸುಧಾ ಗಿರಿ ಕೂಡ ರಾಜಕೀಯದಲ್ಲಿದ್ದು, 2007ರಲ್ಲಿ ಗೋಲನಗರ ಪಾಲಿಕೆ ಅಧ್ಯಕ್ಷರ ಚುನಾವಣೆಯಲ್ಲಿ ಗೆದ್ದಿದ್ದರು.

Published On - 10:55 am, Tue, 6 September 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ