ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಖಿಂಪುರ ಖೇರಿನ ಬಿಜೆಪಿ ಶಾಸಕ ಅರವಿಂದ್ ಗಿರಿ (Arvind Giri) ಇಂದು ಬೆಳಗ್ಗೆ ಹೃದಯಾಘಾತದಿಂದ (heart attack)ನಿಧನರಾಗಿದ್ದಾರೆ. ಅವರು ತಮ್ಮ ಕಾರಿನಲ್ಲಿ ಲಕ್ನೋಗೆ ಹೋಗುತ್ತಿದ್ದಾಗ ವಾಹನದಲ್ಲಿ ಹೃದಯ ಸ್ತಂಭನಕ್ಕೆ ಒಳಗಾದರು ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಅವರು ಸಾವನ್ನಪ್ಪಿದ್ದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. ಬಿಜೆಪಿ ಶಾಸಕರ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಂಗಳವಾರ ಸಂತಾಪ ಸೂಚಿಸಿದ್ದಾರೆ. ಲಖಿಂಪುರ ಖೇರಿ ಜಿಲ್ಲೆಯ ಗೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಗಿರಿ ಜಿ ಅವರ ನಿಧನ ದುರದೃಷ್ಟಕರ. ನನ್ನ ಸಂತಾಪಗಳು. ಭಗವಾನ್ ಶ್ರೀರಾಮನು ಅಗಲಿದ ಆತ್ಮಕ್ಕೆ ಅವರ ಪಾದದಡಿಯಲ್ಲಿ ಸ್ಥಾನ ನೀಡಲಿ ಮತ್ತು ದುಃಖಿತ ಕುಟುಂಬ ಸದಸ್ಯರಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ. ಓಂ ಶಾಂತಿ ಎಂದು ಆದಿತ್ಯನಾಥ ಟ್ವೀಟ್ ಮಾಡಿದ್ದಾರೆ.
लखीमपुर खीरी जनपद की गोला विधानसभा क्षेत्र से भाजपा विधायक श्री अरविन्द गिरि जी का निधन अत्यंत दुःखद है।
मेरी संवेदनाएं शोक संतप्त परिजनों के साथ हैं।
प्रभु श्री राम दिवंगत आत्मा को अपने श्री चरणों में स्थान व शोकाकुल परिजनों को यह अथाह दुःख सहने की शक्ति प्रदान करें।
ॐ शांति!
— Yogi Adityanath (@myogiadityanath) September 6, 2022
ಗಿರಿ 1993 ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿ, 2006 ರಲ್ಲಿ ಎಸ್ ಪಿ ಅಭ್ಯರ್ಥಿಯಾಗಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರು. 2017 ಮತ್ತು 2022 ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಗೆದ್ದರು. 2022 ರ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಎಂಟು ಲಖಿಂಪುರ ಖೇರಿ ಸ್ಥಾನಗಳನ್ನು ಗೆದ್ದಿದೆ. ಗಿರಿ ಅವರು 1993 ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರುವ ಮೊದಲು ವಿದ್ಯಾರ್ಥಿ ರಾಜಕೀಯದಲ್ಲಿದ್ದರು. 2002ರಲ್ಲಿ ಮತ್ತು 2007ರಲ್ಲಿ ಎಸ್‌ಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದು ಅವರು ಗೆದ್ದಿದ್ದರು .
ಅವರ ಪತ್ನಿ ಸುಧಾ ಗಿರಿ ಕೂಡ ರಾಜಕೀಯದಲ್ಲಿದ್ದು, 2007ರಲ್ಲಿ ಗೋಲನಗರ ಪಾಲಿಕೆ ಅಧ್ಯಕ್ಷರ ಚುನಾವಣೆಯಲ್ಲಿ ಗೆದ್ದಿದ್ದರು.
Published On - 10:55 am, Tue, 6 September 22