Heart Surgery: ತಾಯಿ ಗರ್ಭದಲ್ಲಿರುವ ಶಿಶುವಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆಸಿ ಅಚ್ಚರಿ ಮೂಡಿಸಿದ ಏಮ್ಸ್​ ವೈದ್ಯರು

|

Updated on: Mar 15, 2023 | 9:30 AM

ತಾಯಿಯ ಗರ್ಭದಲ್ಲಿರುವ ಶಿಶುವಿಗೆ ವೈದ್ಯರು ಹೃದಯ ಶಸ್ತ್ರ ಚಿಕಿತ್ಸೆ ನಡೆಸಿ ಎಲ್ಲರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಈ ಅಪಾಯಕಾರಿ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದಾರೆ.

Heart Surgery: ತಾಯಿ ಗರ್ಭದಲ್ಲಿರುವ ಶಿಶುವಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆಸಿ ಅಚ್ಚರಿ ಮೂಡಿಸಿದ ಏಮ್ಸ್​ ವೈದ್ಯರು
ತಾಯಿಯ ಗರ್ಭದಲ್ಲಿರುವ ಮಗುವಿಗೆ ಹೃದಯ ಶಸ್ತ್ರಚಿಕಿತ್ಸೆ( ಸಾಂದರ್ಭಿಕ ಚಿತ್ರ)
Image Credit source: NDTV
Follow us on

ತಾಯಿಯ ಗರ್ಭದಲ್ಲಿರುವ ಶಿಶುವಿಗೆ ವೈದ್ಯರು ಹೃದಯ ಶಸ್ತ್ರ ಚಿಕಿತ್ಸೆ( Heart Surgery)ನಡೆಸಿ ಎಲ್ಲರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಈ ಅಪಾಯಕಾರಿ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದಾರೆ. ಕೇವಲ 90 ಸೆಕೆಂಡುಗಳಲ್ಲಿ ಈ ಶಸ್ತ್ರಚಿಕಿತ್ಸೆ ಮಾಡಿದ್ದು, ತುಂಬಾ ಅಪರೂಪದ ಶಸ್ತ್ರ ಚಿಕಿತ್ಸೆ ಇದಾಗಿದೆ. ಶಸ್ತ್ರಚಿಕಿತ್ಸೆಯ ನಂತರ ಗರ್ಭಿಣಿ ಮಹಿಳೆ ಮತ್ತು ಆಕೆಯ ಗರ್ಭದಲ್ಲಿರುವ ಮಗು ಆರೋಗ್ಯವಾಗಿದ್ದಾರೆ.
ಬಲೂನ್ ಹಿಗ್ಗಿಸುವ ಪ್ರಕ್ರಿಯೆಯಿಂದ ಮಗುವಿನ ಜೀವ ಉಳಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಯಾವುದೇ ಕಾರಣದಿಂದ ಹೃದಯದ ಕವಾಟಗಳಲ್ಲಿ ಯಾವುದೇ ಅಡಚಣೆಯನ್ನು ತೆಗೆದುಹಾಕಲು ಈ ವಿಧಾನವನ್ನು ಮಾಡಲಾಗುತ್ತದೆ. ಈ ಸಂಪೂರ್ಣ ಪ್ರಕ್ರಿಯೆಯನ್ನು ಅಲ್ಟ್ರಾಸೌಂಡ್ ಮಾರ್ಗದರ್ಶನದಲ್ಲಿ ಮಾಡಲಾಗಿದೆ.

ವೈದ್ಯರು ತಾಯಿಯ ಹೊಟ್ಟೆಯ ಮೂಲಕ ಮಗುವಿನ ಹೃದಯಕ್ಕೆ ಸೂಜಿಯನ್ನು ಸೇರಿಸಿದರು. ನಂತರ, ಬಲೂನ್ ಕ್ಯಾತಿಟರ್ ಬಳಸಿ ಅಡಚಣೆಯಾದ ಕವಾಟವನ್ನು ತೆರೆದರು, ರಕ್ತದ ಹರಿವಿಗೆ ದಆರಿ ಮಾಡಿಕೊಟ್ಟರು. ಮಗುವಿನ ಹೃದಯವು ಉತ್ತಮವಾಗಿ ಅಭಿವೃದ್ಧಿ ಹೊಂದುವ ಸಾಧ್ಯತೆಯನ್ನು ವೈದ್ಯರು ಹೆಚ್ಚಿಸಿದ್ದಾರೆ. ಇಂತಹ ಪ್ರಕ್ರಿಯೆಯು ಭ್ರೂಣದ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ ಮತ್ತು ಅತ್ಯಂತ ಎಚ್ಚರಿಕೆಯಿಂದ ಮಾಡಬೇಕು ಎಂದು ವೈದ್ಯರು ಹೇಳಿದರು.

ಮತ್ತಷ್ಟು ಓದಿ: Coffee During Pregnancy: ಗರ್ಭಾವಸ್ಥೆಯಲ್ಲಿ ಹೆಚ್ಚು ಕಾಫಿ ಕುಡಿಯಬೇಡಿ, ಮಗುವಿಗೆ ಅಪಾಯವಾಗಬಹುದು

ಈ ಪ್ರಕ್ರಿಯೆಯು ತುಂಬಾ ಸವಾಲಿನದ್ದಾಗಿದೆ ಎಂದು ವೈದ್ಯರು ಹೇಳಿದ್ದಾರೆ, ಏಕೆಂದರೆ ಇದು ಭ್ರೂಣದ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ. ಅಲ್ಟ್ರಾಸೌಂಡ್ ಮಾರ್ಗದರ್ಶನದಲ್ಲಿ ಎಲ್ಲವನ್ನೂ ಮಾಡಲಾಗುತ್ತದೆ.

ಸಾಮಾನ್ಯವಾಗಿ ಎಲ್ಲಾ ಕಾರ್ಯವಿಧಾನಗಳನ್ನು ಆಂಜಿಯೋಗ್ರಫಿ ಅಡಿಯಲ್ಲಿ ಮಾಡಲಾಗುತ್ತದೆ ಆದರೆ ಇಂತಹ ಸಂದರ್ಭದಲ್ಲಿ ಅದನ್ನು ಮಾಡಲಾಗುವುದಿಲ್ಲ.

ಮಗು ತಾಯಿಯ ಗರ್ಭದಲ್ಲಿರುವಾಗಲೇ ಕೆಲವು ವಿಧದ ಗಂಭೀರ ಹೃದಯ ಕಾಯಿಲೆಗಳನ್ನು ಪತ್ತೆಹಚ್ಚಬಹುದು, ಕೆಲವೊಮ್ಮೆ ಗರ್ಭಾಶಯದಲ್ಲೇ ಚಿಕಿತ್ಸೆ ನೀಡುವುದರಿಂದ ಮಗುವಿನ ಜನನದ ನಂತರ ಆಗುವ ಅಪಾಯವನ್ನು ಸರಿಪಡಿಸಬಹುದು ಎಂದು ವೈದ್ಯರು ಹೇಳಿದ್ದಾರೆ, ವೈದ್ಯರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ