AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮುಂಬೈ ಬಳಿ ರಸ್ತೆಯೊಂದರಲ್ಲಿ ಹಾಡಹಗಲೇ ಎರಡು ಗುಂಪುಗಳ ಕಾದಾಟ, ಗುಂಡು ಹಾರಾಟ

ಪ್ರಾಥಮಿಕ ಮಾಹಿತಿಯ ಪ್ರಕಾರ, ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡು ಗುಂಪುಗಳು ಜಗಳವಾಡಿದ ನಂತರ ಸುಮಾರು 15-20 ಸುತ್ತು ಗುಂಡು ಹಾರಿಸಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ

Watch ಮುಂಬೈ ಬಳಿ ರಸ್ತೆಯೊಂದರಲ್ಲಿ ಹಾಡಹಗಲೇ ಎರಡು ಗುಂಪುಗಳ ಕಾದಾಟ, ಗುಂಡು ಹಾರಾಟ
ರಸ್ತೆಯಲ್ಲಿ ಗುಂಡು ಹಾರಾಟ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 14, 2022 | 1:34 PM

Share

ಮುಂಬೈ: ಮುಂಬೈ (Mumbai) ಸಮೀಪದ ರಸ್ತೆಯೊಂದರಲ್ಲಿ ಇಂದು (ಸೋಮವಾರ) ಹಗಲು ಹೊತ್ತಿನಲ್ಲಿ ಗುಂಡಿನ ದಾಳಿ(Heavy Firing) ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡು ಗುಂಪುಗಳು ಜಗಳವಾಡಿದ ನಂತರ ಸುಮಾರು 15-20 ಸುತ್ತು ಗುಂಡು ಹಾರಿಸಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಘಟನೆಯ ಸಮಯದಲ್ಲಿ ಚಿತ್ರೀಕರಿಸಲಾದ ವಿಡಿಯೊ ಕ್ಲಿಪ್‌ನಲ್ಲಿ, ಕೆಲವು ವ್ಯಕ್ತಿಗಳು ಮುಖ್ಯ ರಸ್ತೆಯಿಂದ ನಿಲ್ಲಿಸಿದ ವಾಹನಗಳ ಸುತ್ತಲೂ ನಿಂತಿರುವುದನ್ನು ಕಾಣಬಹುದು, ಇತರ ವಾಹನಗಳು ಹಾದು ಹೋಗುತ್ತಿರುವಾಗಲೂ ಎದುರಿನಿಂದ ಏಕಾಏಕಿ ಗುಂಡು ಹಾರಿಸಲಾಗುತ್ತದೆ.ಗುಂಡಿನ ದಾಳಿ ಮುಂದುವರಿದಂತೆ, ಕೆಲವರು ರಕ್ಷಣೆ ಪಡೆಯಲು ಓಡುತ್ತಿರುವುದನ್ನು ಕಾಣಬಹುದು. ಕೆಲವರು ಅಲ್ಲಿ ನಿಂತಿದ್ದ ಕಾರುಗಳ ಹಿಂದೆ ಅಡಗಿಕೊಳ್ಳಲು ಪ್ರಯತ್ನಿಸುತ್ತಿರುವುದೂ ಕಾಣಿಸುತ್ತದೆ.

ವರದಿಗಳ ಪ್ರಕಾರ, ಅಂಬರನಾಥ್‌ನಲ್ಲಿ ನಡೆದ ಎತ್ತಿನಗಾಡಿ ಓಟದ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.. ವಾದ-ವಿವಾದದ ನಂತರ, ಇಬ್ಬರು ವ್ಯಕ್ತಿಗಳ ಗುಂಪುಗಳು ಹೊಡೆದಾಟ ನಡೆಸಿ ಗುಂಡು ಹಾರಾಟ ನಡೆಸಿವೆ.ಸ್ಥಳಕ್ಕೆ ಶಿವಾಜಿನಗರ ಠಾಣೆಯ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು