ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ

ತಮಿಳುನಾಡಿನಲ್ಲಿ ಹುಚ್ಚು ಮಳೆ ಸುರಿಯುತ್ತಿದೆ, ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ತಿರುವಾರೂರ್​ನಲ್ಲಿ ಘಟನೆ ನಡೆದಿದೆ. ಬಾಲಕಿ ಮೋನಿಷಾ ಮೇಲೆ ಗೋಡೆ ಬಿದ್ದು ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್‌ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಳೆ
Follow us
ನಯನಾ ರಾಜೀವ್
|

Updated on: Jan 08, 2024 | 2:14 PM

ತಮಿಳುನಾಡಿನಲ್ಲಿ ಹುಚ್ಚು ಮಳೆ ಸುರಿಯುತ್ತಿದೆ, ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ತಿರುವಾರೂರ್​ನಲ್ಲಿ ಘಟನೆ ನಡೆದಿದೆ. ಬಾಲಕಿ ಮೋನಿಷಾ ಮೇಲೆ ಗೋಡೆ ಬಿದ್ದು ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್‌ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪ್ರಸ್ತುತ ಮಳೆಯಿಂದಾಗಿ ಚೆನ್ನೈ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ತಿರುವರೂರು ವೈದ್ಯಕೀಯ ಕಾಲೇಜಿನ ಮೆಟರ್ನಿಟಿ ವಾರ್ಡ್‌ಗೆ ಪ್ರವಾಹದ ನೀರು ನುಗ್ಗಿದ್ದು, ರೋಗಿಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ತಿರುವರೂರು ಜಿಲ್ಲೆಯ ನನ್ನಿಲಂ, ಕುಡವಾಸಲ್, ವಲಂಗೈಮನ್, ಮನ್ನಾರ್ಕುಡಿ ಮತ್ತು ನೀಡಮಂಗಲಂ ಸೇರಿದಂತೆ ಪೀಡಿತ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರೀ ಮಳೆಯಾಗಿದೆ.

ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ವಿಲ್ಲುಪುರಂ, ಕಡಲೂರು, ತಿರುವಾರೂರ್ ಮತ್ತು ಮೈಲಾಡುತುರೈ ಜಿಲ್ಲೆಗಳು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದಾಗಿ ಘೋಷಿಸಿದರೆ, ಅರಿಯಲೂರ್, ಚೆಂಗಲ್ಪಟ್ಟು, ಕಲ್ಲಕುರಿಚಿ ಮತ್ತು ತಿರುವಣ್ಣಾಮಲೈ ಶಾಲೆಗಳು ಕೂಡ ರಜೆ ನೀಡಿವೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ

ಮಳೆಯ ಕಾರಣ ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ ಅವರು ಕೇಂದ್ರಾಡಳಿತ ಪ್ರದೇಶದಲ್ಲಿ ಸೋಮವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಅತಿ ಹೆಚ್ಚು 167 ಮಿಮೀ ಮಳೆ ದಾಖಲಾಗಿದ್ದರೆ, ಚೆನ್ನೈನ ಎನ್ನೂರ್ ಬಂದರಿನಲ್ಲಿ 92 ಮಿಮೀ ಮಳೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ