Viral Video: ಮಧ್ಯಪ್ರದೇಶದಲ್ಲಿ ಭೀಕರ ಪ್ರವಾಹ; ನೋಡನೋಡುತ್ತಲೇ ಕೊಚ್ಚಿ ಹೋದ ಸೇತುವೆ

Atal Sagar Dam: ಮಧ್ಯಪ್ರದೇಶದಲ್ಲಿ ತೀವ್ರ ಮಳೆಯಿಂದಾಗಿ ಮದಿಖೇಡಾ ಅಣೆಕಟ್ಟಿನಿಂದ ನೀರು ಹೊರಬಿಟ್ಟ ಕಾರಣ, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಆ ಸಂದರ್ಭದಲ್ಲಿ ಎರಡು ಸೇತುವೆಗಳು ನೀರಿನಲ್ಲಿ ಕೊಚ್ಚಿ ಹೋದ ವಿಡಿಯೊ ವೈರಲ್ ಆಗಿದೆ.

Viral Video: ಮಧ್ಯಪ್ರದೇಶದಲ್ಲಿ ಭೀಕರ ಪ್ರವಾಹ; ನೋಡನೋಡುತ್ತಲೇ ಕೊಚ್ಚಿ ಹೋದ ಸೇತುವೆ
ಪ್ರವಾಹಕ್ಕೆ ಕೊಚ್ಚಿ ಹೋಗುತ್ತಿರುವ ಸೇತುವೆ
Follow us
TV9 Web
| Updated By: shivaprasad.hs

Updated on:Aug 04, 2021 | 10:41 AM

ರಾಯ್ ಪುರ್: ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಮದಿಖೇಡಾ ಅಣೆಕಟ್ಟಿನ ಗೇಟುಗಳನ್ನು ತೆರೆದಿದ್ದಾರೆ. ಇದರಿಂದಾಗಿ ಸಿಂಧ್ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ರತನ್ ಘರ್ ದೇವಸ್ಥಾನದ ಸಮೀಪವಿರುವ, ದಾಟಿಯಾವನ್ನು ಸಂಪರ್ಕಿಸುವ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಶಿವಪುರಿ ಜಿಲ್ಲೆಯಲ್ಲಿರುವ ಅಟಲ್ ಸಾಗರ್ ಅಣೆಕಟ್ಟು (ಮದಿಖೇಡಾ ಅಣೆಕಟ್ಟು) ಅಕ್ಕಪಕ್ಕದ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವ ಕಾರಣ ಭರ್ತಿಯಾಗಿದೆ. ಅದರಿಂದಾಗಿ ಅಣೆಕಟ್ಟಿನ ಹತ್ತು ಗೇಟ್ ಗಳನ್ನು ತೆರೆದು, ನೀರನ್ನು ಹೊರಬಿಡಲಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಪ್ರವಾಹಕ್ಕೆ ಸೇತುವೆ ಕೊಚ್ಚಿ ಹೋಗುತ್ತಿರುವ ವಿಡಿಯೊ:

ಗ್ವಾಲಿಯರ್- ಚಂಬಲ್ ಭಾಗದಲ್ಲಿ ಸೋಮವಾರದಿಂದ ತೀವ್ರವಾಗಿ ಮಳೆಯಾಗುತ್ತಿದ್ದು, ಶಿಯೋಪುರ್ ಮತ್ತು ಶಿವಪುರಿ ಜಿಲ್ಲೆಗಳಲ್ಲಿ ಮಳೆ‌ ಇನ್ನೂ ಜೋರಾಗಿದೆ. ಪ್ರವಾಹದ ಕಾರಣದಿಂದಾಗಿ ಎನ್​ಡಿಆರ್​ಎಫ್ ಮತ್ತು ಎಸ್​ಡಿಆರ್​ಎಫ್ ತಂಡಗಳು ಅವಿರತವಾಗಿ ಶ್ರಮಿಸುತ್ತಿದ್ದು, ಇದುವರೆಗೆ 1,600 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ. ಆದರೆ ಇನ್ನೂ 200ಕ್ಕೂ ಹೆಚ್ಚು ಗ್ರಾಮಗಳು ಅಪಾಯದಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹ ಪರಿಸ್ಥಿತಿಯಿಂದ ತತ್ತರಿಸಿರುವ ಜಿಲ್ಲೆಗಳಿಗೆ ಸೇನೆಯ ಕೇಳಲಾಗಿದ್ದು, ವಾಯುಪಡ ಸದ್ಯದಲ್ಲೇ ಕಾರ್ಯಾಚರಣೆ ಪ್ರಾರಂಭಿಸಲಿದೆ. ಹವಾಮಾನ ವೈಪರೀತ್ಯದ ಕಾರಣ ತುಸು ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ಹಾನಿಗೊಳಗಾಗಿರುವ ರೈಲ್ವೆ ಹಳಿಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಶಿವಪುರಿ- ಗ್ವಾಲಿಯರ್ ಭಾಗದಲ್ಲಿ ಸಂಚರಿಸುತ್ತಿದ್ದ ರೈಲುಗಳನ್ನು ಕೆಲ ಕಾಲದವರೆಗೆ ನಿಲ್ಲಿಸಲಾಗಿದೆ ಅಥವಾ ಬೇರೆ ಮಾರ್ಗದಿಂದ ಕಳುಹಿಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

Tirupati Temple : ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 1.80 ಕೋಟಿ ರೂ. ಸಂಗ್ರಹ

ಮಾಜಿ ಶಾಸಕನ ಕುಟುಂಬಕ್ಕೆ ಉಗ್ರರ ನಂಟು? ಬಿ.ಎಂ.ಇದಿನಬ್ಬ ಮಗನ ಮನೆ ಮೇಲೆ ಎನ್ಐಎ ದಾಳಿ

(Heavy rain fall causes flood in Madhya Pradesh and video of two bridges crashing down due to flood)

Published On - 10:37 am, Wed, 4 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ