ತಮಿಳುನಾಡಿನ ಕೆಲವೆಡೆ ಭಾರಿ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ತೂತುಕುಡಿ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಶುಕ್ರವಾರ ಬೆಳಗ್ಗೆಯೇ ಭಾರೀ ಮಳೆ ಸುರಿದಿದ್ದು, ಹಲವು ಪ್ರದೇಶಗಳಲ್ಲಿ ಜಲಾವೃತಗೊಂಡಿದ್ದು, ಪ್ರಯಾಣಿಕರು ತೊಂದರೆ ಎದುರಿಸುತ್ತಿದ್ದಾರೆ. ಗುರುವಾರವೂ ರಾಜ್ಯದ ಇತರೆ ಭಾಗಗಳಲ್ಲಿ ತುಂತುರು ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಮಿಳುನಾಡು, ಪುದುಚೇರಿ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಪ್ರತ್ಯೇಕವಾದ ಗುಡುಗಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆಯಾಗುತ್ತದೆ ಎಂದು ಹೇಳಿದೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳವರೆಗೆ ರಾಯಲಸೀಮಾ ಮತ್ತು ಕೇರಳದಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣವಿರಲಿದೆ ಎನ್ನಲಾಗಿದೆ.
ತಮಿಳುನಾಡು ಮತ್ತು ಪುದುಚೇರಿಯ ಉತ್ತರ ಭಾಗಗಳು ಮುಂದಿನ ಎರಡು ದಿನಗಳವರೆಗೆ ಇದೇ ರೀತಿಯ ಪರಿಸ್ಥಿತಿ ಮುಂದುವರೆಯಲಿದೆ. ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಡಾರ್ಜಿಲಿಂಗ್, ಕಾಲಿಂಪಾಂಗ್, ಜಲ್ಪೈಗುರಿ, ಕೂಚ್ ಬೆಹಾರ್ ಮತ್ತು ಅಲಿಪುರ್ದಾರ್ ಜಿಲ್ಲೆಗಳಲ್ಲಿ ನಾಳೆ ಮಳೆಯಾಗಲಿದೆ.
ಡಾರ್ಜಿಲಿಂಗ್‌ನಲ್ಲಿ ಕಳೆದ ಕೆಲವು ದಿನಗಳಿಂದ ಕನಿಷ್ಠ ತಾಪಮಾನವು 9 ಡಿಗ್ರಿ ಸೆಲ್ಸಿಯಸ್‌ನಲ್ಲಿದೆ. ಮಂಗಳವಾರ ಕನಿಷ್ಠ ತಾಪಮಾನ 9.6 ಡಿಗ್ರಿ ಸೆಲ್ಸಿಯಸ್, ಗರಿಷ್ಠ 18.4 ಡಿಗ್ರಿ ಸೆಲ್ಸಿಯಸ್ ಇತ್ತು.
ಮತ್ತಷ್ಟು ಓದಿ: Karnataka Weather: ಇಂದು ಕೊಡಗು, ಮೈಸೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಹವಾಮಾನ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೊಡಗು, ಮೈಸೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಕೊಪ್ಪಳದಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ 19.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ