Flood Crisis: ಪ್ರವಾಹ ಬಿಕ್ಕಟ್ಟು ಎದುರಿಸಲು ಹಿಮಾಚಲ, ಉತ್ತರಾಖಂಡ ಸರ್ಕಾರಕ್ಕೆ ಸೂಕ್ತ ಸಹಾಯದ ಭರವಸೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಹಿಮಾಚಲ ಪ್ರದೇಶ(Himachal Pradesh) ಹಾಗೂ ಉತ್ತರಾಖಂಡ(Uttarakhand) ಸೇರಿದಂತೆ ದೇಶದ ಹಲವೆಡೆ ಅತಿವೃಷ್ಟಿಯಿಂದ ಉಂಟಾಗಿರುವ ಪರಿಸ್ಥಿತಿ ಅವಲೋಕಿಸಿದರು

Flood Crisis: ಪ್ರವಾಹ ಬಿಕ್ಕಟ್ಟು ಎದುರಿಸಲು ಹಿಮಾಚಲ, ಉತ್ತರಾಖಂಡ ಸರ್ಕಾರಕ್ಕೆ ಸೂಕ್ತ ಸಹಾಯದ ಭರವಸೆ ನೀಡಿದ ಪ್ರಧಾನಿ ಮೋದಿ
ಮಳೆImage Credit source: Amarujala.com
Follow us
ನಯನಾ ರಾಜೀವ್
|

Updated on: Jul 11, 2023 | 11:23 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಹಿಮಾಚಲ ಪ್ರದೇಶ(Himachal Pradesh) ಹಾಗೂ ಉತ್ತರಾಖಂಡ(Uttarakhand) ಸೇರಿದಂತೆ ದೇಶದ ಹಲವೆಡೆ ಅತಿವೃಷ್ಟಿಯಿಂದ ಉಂಟಾಗಿರುವ ಪರಿಸ್ಥಿತಿ ಅವಲೋಕಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರಿಗೆ ಕರೆ ಮಾಡಿ ರಾಜ್ಯಾದ್ಯಂತ ಭಾರೀ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿದ್ದು, ಸರ್ಕಾರಕ್ಕೆ ಸೂಕ್ತ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಭಾರೀ ಮಳೆ ಮತ್ತು ಪ್ರವಾಹದಿಂದ ಉಂಟಾದ ಜೀವ ಮತ್ತು ಆಸ್ತಿ ಹಾನಿಯ ಬಗ್ಗೆ ಪ್ರಧಾನಿ ವಿಚಾರಿಸಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ಇಲ್ಲಿ ತಿಳಿಸಲಾಗಿದೆ.

ರಸ್ತೆಗಳು ಹಾಳಾಗಿದ್ದು, ನೀರು ಮತ್ತು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಪ್ರಧಾನಿಯನ್ನು ಒತ್ತಾಯಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿಪತ್ತಿನಿಂದ ಉಂಟಾದ ವ್ಯಾಪಕ ಹಾನಿಯಿಂದ ಚೇತರಿಸಿಕೊಳ್ಳಲು ಹಿಮಾಚಲ ಪ್ರದೇಶಕ್ಕೆ ಕೇಂದ್ರ ಸರ್ಕಾರದಿಂದ ಸಾಕಷ್ಟು ನೆರವು ಬೇಕಾಗುತ್ತದೆ ಎಂದು ಸುಖು ಹೇಳಿದರು.

ರಾಜ್ಯದ ಚೇತರಿಕೆ ಪ್ರಕ್ರಿಯೆಗೆ ನೆರವು ನೀಡಲು ವಿಶೇಷ ಆರ್ಥಿಕ ಪ್ಯಾಕೇಜ್‌ಗಾಗಿ ಅವರು ಪ್ರಧಾನಿಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಯವರ ಕಳವಳಕ್ಕೆ ಸ್ಪಂದಿಸಿದ ಮೋದಿ ಅವರು ಕೇಂದ್ರದ ಅಚಲ ಬೆಂಬಲದ ಭರವಸೆ ನೀಡಿದರು ಮತ್ತು ಬಿಕ್ಕಟ್ಟಿನಿಂದ ರಾಜ್ಯವನ್ನು ದೂರವಿಡಲು ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವ ಭರವಸೆ ನೀಡಿದ್ದಾರೆ.

ಮತ್ತಷ್ಟು ಓದಿ: North India Rain: ಉತ್ತರ ಭಾರತದಲ್ಲಿ ವರುಣನ ರೌದ್ರಾವತಾರ, ಮಳೆಯಲ್ಲಿ ಸಿಲುಕಿ ಇದುವರೆಗೆ 37 ಮಂದಿ ಸಾವು

ಉತ್ತರ ಭಾರತದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಹಿಮಾಚಲ ಪ್ರದೇಶ, ದೆಹಲಿ ಹಾಗೂ ಪಂಜಾಬ್​ನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸೇತುವೆಗಳು, ವಾಹನಗಳು, ಮನೆಗಳು ಕೊಚ್ಚಿ ಹೋಗಿವೆ. ಇದುವರೆಗೆ 37 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ದೆಹಲಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪಂಜಾಬ್ ಮತ್ತು ಹರಿಯಾಣದಲ್ಲೂ ಮಳೆಯ ಅಬ್ಬರ ಮುಂದುವರೆದಿದೆ.

ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ-44 ಅನ್ನು ಮುಚ್ಚಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು NS-44 ಅನ್ನು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ. ಭಾರೀ ವಾಹನಗಳಿಗೆ ಜಮ್ಮುವಿನಿಂದ ಶ್ರೀನಗರಕ್ಕೆ ಮೊಘಲ್ ರಸ್ತೆ ಮೂಲಕ ತೆರಳುವಂತೆ ಸೂಚಿಸಲಾಗಿದೆ.

ದೆಹಲಿಯಲ್ಲಿ ಯಮುನಾ ನದಿಯ ನೀರಿನ ಮಟ್ಟ ನಿರಂತರವಾಗಿ ಹೆಚ್ಚುತ್ತಿದೆ. ಹಳೆ ರೈಲ್ವೆ ಸೇತುವೆಯಲ್ಲಿ ಅಪಾಯದ ಮಟ್ಟ ತಲುಪಿದೆ. ರಾತ್ರಿ ಎಂಟು ಗಂಟೆಗೆ ಯಮುನಾ ನದಿಯ ನೀರು 205.76 ಮೀಟರ್‌ಗಳಷ್ಟು ಹರಿಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್